AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡಿಸಿವಿರ್​ ದಂಧೆಗೆ ಆರೋಗ್ಯ ಇಲಾಖೆ ಇಂಜೆಕ್ಷನ್; ಚುಚ್ಚುಮದ್ದು ಬಿಡುಗಡೆಯಾದ ಕೂಡಲೇ ಸೋಂಕಿತರ ಮೊಬೈಲ್​ಗೆ ಸಂದೇಶ

Remdesivir: ಸೋಂಕಿತರಿಗೆ ನೇರವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಸರಬರಾಜಾಗಲಿದ್ದು, ಚುಚ್ಚುಮದ್ದು ಬಿಡುಗಡೆಯಾಗುತ್ತಿದ್ದಂತೆಯೇ ಮೊಬೈಲ್​ಗೆ ಸಂದೇಶ ರವಾನೆ ಆಗಲಿದೆ.

ರೆಮ್​ಡಿಸಿವಿರ್​ ದಂಧೆಗೆ ಆರೋಗ್ಯ ಇಲಾಖೆ ಇಂಜೆಕ್ಷನ್; ಚುಚ್ಚುಮದ್ದು ಬಿಡುಗಡೆಯಾದ ಕೂಡಲೇ ಸೋಂಕಿತರ ಮೊಬೈಲ್​ಗೆ ಸಂದೇಶ
ರೆಮ್‌ಡಿಸಿವಿರ್ ಇಂಜೆಕ್ಷನ್
Skanda
|

Updated on: May 11, 2021 | 8:36 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಉಲ್ಬಣಿಸುತ್ತಿದ್ದು ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಅನೇಕ ಅವಘಡಗಳೂ ಸಂಭವಿಸಿವೆ. ಕೆಲ ಹಣಬಾಕರು ಇದೇ ಸಂದರ್ಭವನ್ನೇ ಉಪಯೋಗಿಸಿಕೊಂಡು ಹಣ ಮಾಡಿದ್ದೂ ಆಗಿದೆ. ಅದರಲ್ಲೂ ಕೊರೊನಾ ಸೋಂಕಿತರಿಗೆ ಜೀವ ರಕ್ಷಕ ಎಂದು ಬಿಂಬಿಸಲ್ಪಟ್ಟಿರುವ ರೆಮ್​ಡಿಸಿವಿರ್​ ಇಂಜೆಕ್ಷನ್​ಗೆ ಈ ಬಾರಿ ಬೇಡಿಕೆ ಹೆಚ್ಚಿದ್ದು ಅದನ್ನೇ ಅಕ್ರಮವಾಗಿ ಮಾರಾಟ ಮಾಡಿ ಹಣ ಹುಟ್ಟಿಸಿಕೊಳ್ಳುವ ದೊಡ್ಡ ದಂಧೆಯೂ ನಡೆಯುತ್ತಿದೆ. ಹೀಗಾಗಿ ಇಂತಹ ಅಕ್ರಮಗಳಿಗೆ ತಡೆಯೊಡ್ಡಲೋಸುಗ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಹೊಸ ಯೋಜನೆ ರೂಪಿಸಿದೆ.

ಕಾಳಸಂತೆಯಲ್ಲಿ ರೆಮ್​ಡಿಸಿವಿರ್ ಬಿಕರಿಯಾಗುವುದನ್ನು ತಡೆಯಲು ಮುಂದಾಗಿರುವ ಆರೋಗ್ಯ ಇಲಾಖೆ, ಕೊರೊನಾ ಸೋಂಕಿತರ ಮೊಬೈಲ್​ಗೆ ರೆಮ್‌ಡಿಸಿವಿರ್ ಇಂಜೆಕ್ಷನ್ ವಿತರಣೆಯ ಬಗ್ಗೆ ಸಂದೇಶ ಕಳುಹಿಸಲು ನಿರ್ಧರಿಸಿದೆ. ಇದರಿಂದಾಗಿ ಸೋಂಕಿತರಿಗೆ ನೇರವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಸರಬರಾಜಾಗಲಿದ್ದು, ಚುಚ್ಚುಮದ್ದು ಬಿಡುಗಡೆಯಾಗುತ್ತಿದ್ದಂತೆಯೇ ಮೊಬೈಲ್​ಗೆ ಸಂದೇಶ ರವಾನೆ ಆಗಲಿದೆ. ಈ ಯೋಜನೆ ಸಮರ್ಪಕವಾಗಿ ಜಾರಿಯಾದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ರೆಮ್​ಡಿಸಿವಿರ್ ಹೆಸರಲ್ಲಿ ದುಡ್ಡು ಮಾಡುತ್ತಿದ್ದ ದಂಧೆಯನ್ನು ಮಟ್ಟಹಾಕಲು ಪರಿಣಾಮಕಾರಿ ಅಸ್ತ್ರ ಸಿಕ್ಕಂತಾಗುತ್ತದೆ.

ಸದ್ಯ ಕೆಲ ಖಾಸಗಿ ಆಸ್ಪತ್ರೆಗಳು ಸೋಂಕಿತರ ಹೆಸರಲ್ಲಿ ರೆಮ್​ಡಿಸಿವಿರ್ ಪಡೆದು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಅಲ್ಲದೇ ಸರ್ಕಾರದಿಂದ ರೆಮ್​ಡಿಸಿವಿರ್ ವಿತರಣೆ ಆಗೇ ಇಲ್ಲವೆಂದು ಸುಳ್ಳು ಹೇಳುತ್ತಿರುವ ಈ ಆಸ್ಪತ್ರೆಗಳು ತಮಗೆ ಸಿಕ್ಕ ಚುಚ್ಚುಮದ್ದನ್ನು ಬೇಕಾದಂತೆ ಮಾರಾಟ ಮಾಡುತ್ತಿವೆ. ಇತ್ತ ಸೋಂಕಿತರ ಹೆಸರಲ್ಲಿ ರೆಮ್​ಡಿಸಿವಿರ್ ಇಂಜೆಕ್ಷನ್ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಕೂಡ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಇದೀಗ ಈ ಎಲ್ಲಾ ಅಕ್ರಮಗಳಿಗೂ ಕಡಿವಾಣ ಹಾಕಲು ಅಂತಿಮವಾಗಿ ಆರೋಗ್ಯ ಇಲಾಖೆಯೇ ಯೋಜನೆ ರೂಪಿಸಿದೆ.

ಇದನ್ನೂ ಓದಿ: ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ, ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ: ಅಶ್ವತ್ಥ್ ನಾರಾಯಣ ಹೇಳಿಕೆ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್