Corona Vaccine: 9, 10ನೇ ತರಗತಿ ವಿದ್ಯಾರ್ಥಿಗಳ ತಂದೆ, ತಾಯಿಗೆ ಆದ್ಯತೆಯ ಮೇರೆಗೆ ಕೊರೊನಾ ಲಸಿಕೆ

| Updated By: ganapathi bhat

Updated on: Aug 09, 2021 | 11:13 PM

Covid19 Vaccine: 9ನೇ,10ನೇ ತರಗತಿಯ ವಿದ್ಯಾರ್ಥಿಗಳ ಕುಟುಂಬದವರಿಗೆ ತಂದೆ, ತಾಯಿ ಮತ್ತು ಪೋಷಕರಿಗೆ ಕೊವಿಡ್-19 ಲಸಿಕೆ ನೀಡುವ ಕುರಿತು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

Corona Vaccine: 9, 10ನೇ ತರಗತಿ ವಿದ್ಯಾರ್ಥಿಗಳ ತಂದೆ, ತಾಯಿಗೆ ಆದ್ಯತೆಯ ಮೇರೆಗೆ ಕೊರೊನಾ ಲಸಿಕೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳಿಗೆ ಹಾಗೂ 9ನೇ, 10ನೇ ತರಗತಿಯ ವಿದ್ಯಾರ್ಥಿಗಳ ಕುಟುಂಬದವರಿಗೆ ತಂದೆ, ತಾಯಿ ಮತ್ತು ಪೋಷಕರಿಗೆ ಕೊವಿಡ್-19 (Corona Vaccine) ಲಸಿಕೆ ನೀಡುವ ಕುರಿತು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ (Karnataka Health Department) ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಭೋದಕ ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಕೊವಿಡ್-19 ಲಸಿಕೆ ನೀಡಲು (Vaccination Drive) ಈಗಾಗಲೇ ಆರೋಗ್ಯ ಸಚಿವಾಲಯ ತಿಳಿಸಿತ್ತು. ಮುಂದುವರೆದು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕ ಹಾಗೂ ಬೋಧಕಕೇತರ ಸಿಬ್ಬಂದಿಗಳು ಇನ್ನೂ ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡುವುದು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿತ್ತು.

ಇದೀಗ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 9ನೇ ತರಗತಿ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳ ಕೊವಿಡ್-19 ಲಸಿಕೆ ಪಡೆಯದ ತಂದೆ, ತಾಯಿ ಅಥವಾ ಪೋಷಕರಿಗೆ ಕೊರೊನಾ ಲಸಿಕೆಯನ್ನು ಆದ್ಯತೆಯ ಮೇರೆಗೆ ನಡೆಸಲು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ.

ಇದಕ್ಕಾಗಿ ಶಾಲೆಯ ಮುಖ್ಯಸ್ಥರಿಂದ ತಂದೆ, ತಾಯಿ ಅಥವಾ ಪೋಷಕರಿಗೆ ಮಾಹಿತಿ ತಲುಪಿಸಿ, ಲಸಿಕೆ ಪಡೆಯದವರ ಪಟ್ಟಿ ತಯಾರಿಸಿ ಆರೋಗ್ಯ ಇಲಾಖೆಗೆ ಮಾಹಿತಿ ಒದಗಿಸಲು ಕೋರಲಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲು ಕೋರಲಾಗಿದೆ.

ಇದನ್ನೂ ಓದಿ: School Reopen: ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳ ಪ್ರಾರಂಭದ ಕುರಿತು ಮಹತ್ವದ ಮಾಹಿತಿ ನೀಡಿದ ನೂತನ ಶಿಕ್ಷಣ ಸಚಿವ ಬಿ ಸಿ ನಾಗೇಶ್

ವಿದೇಶಿಯರಿಗೂ ಭಾರತದಲ್ಲಿ ಕೊವಿಡ್ ಲಸಿಕೆ ಪಡೆಯಬಹುದು; ಕೊವಿನ್​​ನಲ್ಲಿ ನೋಂದಣಿ ಅಗತ್ಯ

(Karnataka Health Ministry on Coronavirus Covid19 Vaccine to Parents of 9th 10th Standard Students)

Published On - 9:09 pm, Mon, 9 August 21