AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ಕರಾವಳಿ – ಉತ್ತರ ಒಳನಾಡಿನಲ್ಲಿ ಭಾರಿ ಮಳೆ; ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಸಾಧಾರಣ ಮಳೆ!

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ, ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಮತ್ತು ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯ ನಿರೀಕ್ಷೆಯಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ಕರಾವಳಿ - ಉತ್ತರ ಒಳನಾಡಿನಲ್ಲಿ ಭಾರಿ ಮಳೆ; ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಸಾಧಾರಣ ಮಳೆ!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 04, 2026 | 6:03 PM

Share

ಮುಖ್ಯಾಂಶಗಳು

  • ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ
  • ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ
  • ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆ

ಬೆಂಗಳೂರು, ಜು.4: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿಯಿಂದ ಅತ್ಯಂತ ಭಾರಿ ಮಳೆಯಾಗುವ (Heavy to Very Heavy Rain) ಸಾಧ್ಯತೆಯಿದೆ. ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಸಹ ಬಿರುಗಾಳಿ ಸಹಿತ ಭಾರಿಯಿಂದ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಜನಜೀವನಕ್ಕೆ ಅಲ್ಪಮಟ್ಟಿನ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲೂ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್! 

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಜುಲೈ 9 ಮತ್ತು ಜುಲೈ 10 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯ ಆರ್ಭಟ ಕೊಂಚ ಹೆಚ್ಚಿರಲಿದ್ದು, ಜುಲೈ 5, 6, 9 ಮತ್ತು 10 ರಂದು ಒಂದಲ್ಲಾ ಒಂದು ಕಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಮುನ್ಸೂಚನೆ ನೀಡಿರುವ ದಿನಗಳಂದು ರಾಜ್ಯದ ಒಳನಾಡಿನಲ್ಲಿ ಅಂದಾಜು 64.5 mm ನಿಂದ 115.4 mm ವರೆಗೆ ಭಾರಿ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಬಿರುಗಾಳಿ ಮತ್ತು ಸಿಡಿಲಿನ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಮತ್ತು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ಇಲಾಖೆ ಕೋರಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?