Karnataka Weather: ಕರ್ನಾಟಕದಲ್ಲಿ ಮುಂದಿನ 4 ದಿನಗಳವರೆಗೆ ಭಾರಿ ಮಳೆ; ಬೆಂಗಳೂರಿನಲ್ಲಿ 2 ದಿನಗಳವರೆಗೆ ಭಾರಿ ಮಳೆ ಸುರಿಯುವ ಸಂಭವ
Monsoon in Karnataka: ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು: ಕರ್ನಾಟಕ ಕರಾವಳಿ ಭಾಗಗಳನ್ನೂ ಸೇರಿ ಮುಂದಿನ 4 ದಿನಗಳ ಕಾಲ, ಅಂದರೆ ಜೂನ್ 16ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಜತೆಗೆ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದರು.
ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ದಕ್ಷಿಣ ಒಳನಾಡಿನಲ್ಲೂ ಮಳೆ ಬರುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರೆಡ್ ಅಲರ್ಟ್ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯನ್ನು ಸೂಚಿಸುತ್ತದೆ. ಎಚ್ಚರಿಕೆ ಘೋಷಿಸಿದರೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ‘ಹಳದಿ’ ಅಲರ್ಟ್ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ‘ಅಪ್ ಡೇಟ್ ‘ ಮಾಡಬೇಕು ಎಂದು ಸೂಚಿಸುತ್ತದೆ.
ಇದನ್ನೂ ಓದಿ: ಕೊವಿಡ್ ಅಸ್ಪತ್ರೆಗಳ ನೆಲದ ಮೇಲೆ ಸಾರ್ಸ್-ಕೊವ್-2 ವೈರಸ್ ಅಲ್ಲದಿದ್ದರೂ ಅದರ ಆನುವಂಶಿಕ ಸ್ವರೂಪ ಇರುತ್ತದೆ: ವರದಿ
ಮೈಸೂರಿನಲ್ಲಿ ಮಕ್ಕಳ ಮೇಲೆ ಕೊವಿಡ್ ಲಸಿಕೆ ಪ್ರಯೋಗ ಯಶಸ್ವಿಯಾಗುವ ಭರವಸೆ
(Karnataka Heavy rains for next 4 days in state 2 days in Bengaluru days Director of the Meteorological Department CS Patil)