Karnataka Rains: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ

|

Updated on: Jul 04, 2024 | 7:43 AM

ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆದಿದೆ, ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಜುಲೈ 8ರವರೆಗೆ ರಾಜ್ಯದ 9 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರವಹಿಸಬೇಕು. ಮಕ್ಕಳು ಸಾರ್ವಜನಿಕರು ವಿದ್ಯುತ್ ಕಂಬದ ಹತ್ತಿರವಿರಬಾರದು, ತುಂಡಾದ ವಿದ್ಯುತ್ ತಂತಿಗಳಿಂದ ದೂರ ಇರಬೇಕು.

Karnataka Rains: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ
ಮಳೆ
Image Credit source: Weather and Radar
Follow us on

ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ.

ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.
ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರ, ಕೋಟ, ಆಗುಂಬೆ, ಧರ್ಮಸ್ಥಳ, ಉಡುಪಿ, ಲಿಂಗನಮಕ್ಕಿಯಲ್ಲಿ ಹೆಚ್ಚು ಮಳೆಯಾಗಿದೆ.

ಭಾಗಮಂಡಲ, ಉಪ್ಪಿನಂಗಡಿ, ಕದ್ರಾ, ಸಿದ್ದಾಪುರ, ಮಂಗಳೂರು, ಶಿರಾಲಿ, ಕುಂದಾಪುರ, ಮಾಣಿ, ಕಾರ್ಕಳ, ನಾಪೊಕ್ಲು, ಪೊನ್ನಂಪೇಟೆ, ಗೇರುಸೊಪ್ಪ, ಬೆಳ್ತಂಗಡಿ, ಮಂಕಿ, ಪುತ್ತೂರು, ಕಿರವತ್ತಿ, ಯಲ್ಲಾಪುರ, ಕಮ್ಮರಡಿ, ಕಳಸ, ಹುಂಚದಕಟ್ಟೆ, ಕೊಪ್ಪ, ಶೃಂಗೇರಿ, ತಾಳಗುಪ್ಪ, ಮೂರ್ನಾಡು, ಗೋಕರ್ಣ, ಬನವಾಸಿ, ಅಂಕೋಲಾ, ಹೊನ್ನಾವರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಜುಲೈ 5ರ ಬಳಿಕ ಈ ಜಿಲ್ಲೆಗಳಲ್ಲಿ ಹೆಚ್ಚಲಿದೆ ಮಳೆ ಪ್ರಮಾಣ

ಶಿಗ್ಗಾಂವ್, ಸವಣೂರು, ಜಯಪುರ, ಸೋಮವಾರಪೇಟೆ, ಗೌರಿಬಿದನೂರು, ಬಂಡೀಪುರ, ಅರಕಲಗೂಡು, ಕುಶಾಲನಗರ, ಕುಮಟಾ, ಮುಲ್ಕಿ, ಹಳಿಯಾಳ, ಹಿರೇಕೆರೂರು, ಸುಳ್ಯ, ಹಗರಿಬೊಮ್ಮನಹಳ್ಳಿ, ಹಾರಂಗಿ, ಕೊಟ್ಟೂರು, ಎನ್​ಆರ್​ಪುರ, ಚಿತ್ರದುರ್ಗ, ಮಾಗಡಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ