ಶಾಸಕರು, ಸಂಸದರ ವಿರುದ್ಧದ ಎಷ್ಟು ಪ್ರಕರಣಗಳನ್ನು ಹಿಂಪಡೆದಿದ್ದೀರಿ? ಹೈಕೋರ್ಟ್ ಪ್ರಶ್ನೆ
ಆಗಸ್ಟ್ 31 ರೊಳಗೆ ಅಂತಹ ಪ್ರಕರಣಗಳ ಮಾಹಿತಿ ನೀಡಲು ಹೈಕೋರ್ಟ್ ಸೂಚನೆ ನೀಡಿದೆ.
ಬೆಂಗಳೂರು: ಶಾಸಕರು, ಸಂಸದರ ವಿರುದ್ಧ ಸೆಪ್ಟೆಂಬರ್ 16, 2020 ರ ನಂತರ ಹಿಂಪಡೆದ ಪ್ರಕರಣಗಳ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೈಕೋರ್ಟ್ ಸಮ್ಮತಿಯಿಲ್ಲದೇ ಶಾಸಕರು, ಸಂಸದರ ಪ್ರಕರಣಗಳನ್ನು ಹಿಂಪಡೆಯಬಾರದು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೇಸ್ ಹಿಂಪಡೆಯುವ ಆದೇಶಗಳನ್ನು ಪರಿಶೀಲನೆಗೊಳಪಡಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಆಗಸ್ಟ್ 31 ರೊಳಗೆ ಅಂತಹ ಪ್ರಕರಣಗಳ ಮಾಹಿತಿ ನೀಡಲು ಹೈಕೋರ್ಟ್ ಸೂಚನೆ ನೀಡಿದೆ.
ಅಂಧ ವಿದ್ಯಾರ್ಥಿಗಳಿಗೆ ಮಾತನಾಡುವ ಲ್ಯಾಪ್‌ಟಾಪ್: ಹೈಕೋರ್ಟ್ಗೆ ಸರ್ಕಾರದಿಂದ ಮಾಹಿತಿ ಅಂಧ ವಿದ್ಯಾರ್ಥಿಗಳಿಗೆ ಮಾತಾಡುವ ಲ್ಯಾಪ್‌ಟಾಪ್ ಒದಗಿಸುತ್ತೇವೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಹೈಕೋರ್ಟ್ ನಿರ್ದೇಶನದಂತೆ ಈಬಗ್ಗೆ ಯೋಜನೆ ರೂಪಿಸಿದ್ದೇವೆ. ಎಸ್ಎಸ್ಎಲ್ಸಿ ಮತ್ತು ಮೇಲ್ಪಟ್ಟ ತರಗತಿಗಳ ಅಂಧ ವಿದ್ಯಾರ್ಥಿಗಳಿಗೆ ಯೋಜನೆ ಅನ್ವಯವಾಗಲಿದೆ ಎಂದು ವಕೀಲ ಎಸ್.ಉಮಾಪತಿ ಸಾರ್ವಜನಿಕ ಜಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಈ ಯೋಜನೆಗೆ ಸಂಬಂಧಿಸಿದಂತೆ ನೀತಿ ರೂಪಿಸುವಂತೆ ಈಮುನ್ನವೇ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಕರ್ನಾಟಕದಲ್ಲಿ ಇಂದೆಷ್ಟು ಕೊವಿಡ್ ಪ್ರಕರಣ? ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 16) ಹೊಸದಾಗಿ 1,065 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,30,529 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,71,448 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 28 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,007 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 22,048 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 270 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,33,172 ಕ್ಕೆ ಏರಿಕೆಯಾಗಿದೆ. 12,33,172 ಸೋಂಕಿತರ ಪೈಕಿ 12,09,176 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 4 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,941 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,054 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಇದನ್ನೂ ಓದಿ:
ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು
Crime News: ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡ ದಂಪತಿ; ಪ್ರಾಣಾಪಾಯದಿಂದ ಪಾರು
(Karnataka High Cour directs give List of recounted cases against MLAs and MPs)
Published On - 8:42 pm, Mon, 16 August 21