ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ
ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ ಮಾಡಲಾಗಿದೆ. ನ್ಯಾ. ಅನಂತ್ ರಾಮನಾಥ್ ಹೆಗ್ಡೆ, ನ್ಯಾ. ಸಿದ್ದಯ್ಯ ರಾಚಯ್ಯ, ನ್ಯಾ. ಕೆ.ಎಸ್.ಹೇಮಲೇಖ ನೇಮಕಕ್ಕೆ ರಾಷ್ಟ್ರಪತಿಗಳ ಅಂಕಿತ ಬಿದ್ದಿದೆ.
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ ಮಾಡಲಾಗಿದೆ. ನ್ಯಾ. ಅನಂತ್ ರಾಮನಾಥ್ ಹೆಗ್ಡೆ, ನ್ಯಾ. ಸಿದ್ದಯ್ಯ ರಾಚಯ್ಯ, ನ್ಯಾ. ಕೆ.ಎಸ್.ಹೇಮಲೇಖ ನೇಮಕಕ್ಕೆ ರಾಷ್ಟ್ರಪತಿಗಳ ಅಂಕಿತ ಬಿದ್ದಿದೆ. ಮೂವರೂ ಹೈಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿತ್ತು. ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು. ಅದರಂತೆ ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ ಅಕ್ಟೋಬರ್ 11ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಅವರು ಅಧಿಕಾರ ಸ್ವೀಕಾರ ಮಾಡಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಂದ ಪ್ರಮಾಣ ವಚನ ಬೋಧನೆ ಮಾಡಲಾಗಿತ್ತು.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಸಚಿವ ಗೋವಿಂದ ಕಾರಜೋಳ, ಸಿಎಸ್ ರವಿಕುಮಾರ್, ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ, ಎಜಿ ಪ್ರಭುಲಿಂಗ ನಾವದಗಿ ಉಪಸ್ಥಿತರಿದ್ದರು. ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಅವಸ್ಥಿ ಇದೀಗ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ರಿತುರಾಜ್ ಅವಸ್ತಿ ಅವರನ್ನು ನೇಮಿಸಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಸುಪ್ರೀಂಕೋರ್ಟ್ ಶಿಫಾರಸಿನಂತೆ ಈ ಅಧಿಸೂಚನೆ ಹೊರಡಿಸಲಾಗಿತ್ತು. ಒಟ್ಟು 13 ರಾಜ್ಯಗಳ ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯಾಧೀಶರನ್ನು ನೇಮಿಸಲಾಗಿತ್ತು. ಗುಜರಾತ್ ಸಿಜೆಯಾಗಿ ನ್ಯಾ.ಅರವಿಂದ್ ಕುಮಾರ್ ಅವರನ್ನೂ, ತೆಲಂಗಾಣ ಸಿಜೆಯಾಗಿ ಸತೀಶ್ ಚಂದ್ರ ಶರ್ಮ ಅವರನ್ನು ನೇಮಕಗೊಳಿಸಲಾಗಿತ್ತು
ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ರೂಲ್ಸ್; ಹೈಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು
ಇದನ್ನೂ ಓದಿ: ಅಕ್ರಮ ಕಟ್ಟಡ ತೆರವು ವಿಚಾರ: ಬಿಬಿಎಂಪಿ ಕಾರ್ಯವೈಖರಿಗೆ ಹೈಕೋರ್ಟ್ ಗರಂ