ಕರ್ನಾಟಕಕ್ಕೆ ಅಗತ್ಯ ಪ್ರಮಾಣದಲ್ಲಿ ಲಸಿಕೆ ಪೂರೈಸಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಕರ್ನಾಟಕದಲ್ಲಿ 2ನೇ ಡೋಸ್ ಲಸಿಕೆ ಪೂರೈಕೆಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಜುಲೈ ಮತ್ತು ಆಗಸ್ಟ್​ ತಿಂಗಳಲ್ಲಿ ರಾಜ್ಯಕ್ಕೆ ಅಗತ್ಯ ಪ್ರಮಾಣದ ಲಸಿಕೆ ಪೂರೈಸಬೇಕೆಂದು ಕರ್ನಾಟಕ ಹೈಕೋರ್ಟ್​ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಕರ್ನಾಟಕಕ್ಕೆ ಅಗತ್ಯ ಪ್ರಮಾಣದಲ್ಲಿ ಲಸಿಕೆ ಪೂರೈಸಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಲಸಿಕೆಯ ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 16, 2021 | 6:10 PM

ಬೆಂಗಳೂರು: ಕರ್ನಾಟಕದಲ್ಲಿ 2ನೇ ಡೋಸ್ ಲಸಿಕೆ ಪೂರೈಕೆಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಜುಲೈ ಮತ್ತು ಆಗಸ್ಟ್​ ತಿಂಗಳಲ್ಲಿ ರಾಜ್ಯಕ್ಕೆ ಅಗತ್ಯ ಪ್ರಮಾಣದ ಲಸಿಕೆ ಪೂರೈಸಬೇಕೆಂದು ಕರ್ನಾಟಕ ಹೈಕೋರ್ಟ್​ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಜುಲೈ, ಆಗಸ್ಟ್ ತಿಂಗಳಲ್ಲಿ 2ನೇ ಡೋಸ್​ಗಾಗಿ 60.87 ಲಕ್ಷ ಡೋಸ್​ ಕೊವಿಶೀಲ್ಡ್ ಲಸಿಕೆ ಬೇಕಿದೆ. ಆದರೆ ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಆಗಸ್ಟ್ 4ರೊಳಗೆ 41.35 ಲಕ್ಷ ಡೋಸ್ ಲಸಿಕೆಗಳು ಮಾತ್ರವೇ ಸಿಗಲಿದೆ. ರಾಜ್ಯ ಸರ್ಕಾರವು ಲಸಿಕೆಗಳ ಬೇಡಿಕೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ. ಈ ಕುರಿತು ಕೇಂದ್ರ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್​ ಹೇಳಿತು.

ಮಕ್ಕಳಿಗೆ ನೀಡುತ್ತಿದ್ದ ರೋಗನಿರೋಧಕ ಲಸಿಕೆ ಅಭಿಯಾನ ನಿಂತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್​, ಲಸಿಕೆ ಅಭಿಯಾನವನ್ನು ಮತ್ತೆ ಆರಂಭಿಸಬೇಕು ಎಂದು ಸಲಹೆ ಮಾಡಿತು.

ಮೆಟ್ರೋಗಾಗಿ ಮರ ಕಡಿಯಲು ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್ ಬೆಂಗಳೂರು ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್​ ಗುರುವಾರ ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

ಮರ ಅಧಿಕಾರಿ ಮತ್ತು ಡಿಸಿಎಫ್ ವರ್ತನೆ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​, ಮರ ಬೆಳೆಸಲು ಸೂಕ್ತ ಪರ್ಯಾಯ ಜಾಗವನ್ನು ಪರಿಶೀಲಿಸಬೇಕಿತ್ತು ಎಂದು ಹೇಳಿತು. ಕಡಿಯುವ ಮರಗಳಿಗೆ ಬದಲಿಯಾಗಿ ಬೆಳೆಸುವ ಮರಗಳು ಮತ್ತು ಮಣ್ಣಿನ ಪರೀಕ್ಷೆಯ ವಿವರವನ್ನು ಎರಡು ವಾರಗಳ ಒಳಗೆ ನೀಡಬೇಕು ಎಂದು ಹೇಳಿತು.

ಇದನ್ನೂ ಓದಿ: ಕರ್ನಾಟಕದ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕೈದಿಗಳು: ಹೈಕೋರ್ಟ್​ಗೆ ಕಾನೂನು ಪ್ರಾಧಿಕಾರ ವರದಿ

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ; ಸುವೇಂದು ಅಧಿಕಾರಿಗೆ ಕೋಲ್ಕತ್ತ ಹೈಕೋರ್ಟ್​ನಿಂದ ನೋಟಿಸ್​