ಪ್ರತಿ ಜಿಲ್ಲೆಗಳಲ್ಲಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ

ರಾಜ್ಯದಲ್ಲಿ 2ನೇ ಡೋಸ್ ವ್ಯಾಕ್ಸಿನ್ ಕೊರತೆ ವಿಚಾರದ ಬಗ್ಗೆ ಹೈಕೋರ್ಟ್​ ಗುರುವಾರ ವಿಚಾರಣೆ ನಡೆಸಿತು. ‘1ನೇ ಡೋಸ್ ಲಸಿಕೆ ಪಡೆದವರಿಗೆ 2ನೇ ಡೋಸ್ ಕೊರತೆಯಾಗುವುದಿಲ್ಲ’ ಎಂದು ರಾಜ್ಯ ಸರ್ಕಾರ ಈ ವೇಳೆ ಹೈಕೋರ್ಟ್​ಗೆ ಮಾಹಿತಿ ನೀಡಿತು.

ಪ್ರತಿ ಜಿಲ್ಲೆಗಳಲ್ಲಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ
ಕರ್ನಾಟಕ ಹೈಕೋರ್ಟ್
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:May 27, 2021 | 6:48 PM

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಪ್ರತಿದಿನದ ಬಳಕೆಗಾಗಿ ಒಟ್ಟು 1200 ಮೆಟ್ರಿಕ್‌ ಟನ್ ಆಕ್ಸಿಜನ್ ಹಂಚಿಕೆಯಾಗಿದೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಹೈಕೋರ್ಟ್​ಗೆ ಮಾಹಿತಿ ನೀಡಿದರು.

ಕರ್ನಾಟಕಕ್ಕೆ ಹೊರರಾಜ್ಯಗಳಿಂದ 370 ಮೆಟ್ರಿಕ್‌ ಟನ್ ಆಕ್ಸಿಜನ್ ತರಬೇಕು. ಹೊರ ರಾಜ್ಯಗಳಿಂದ ಆಕ್ಸಿಜನ್ ತರುವುದರಲ್ಲಿ ಕೆಲ ಸಮಸ್ಯೆಗಳಿವೆ. ಹೀಗಾಗಿ ಬಹುತೇಕ ದಿನಗಳಂದು ನಿಗದಿಯಷ್ಟು ಆಕ್ಸಿಜನ್ ಕರ್ನಾಟಕಕ್ಕೆ ತರಲು ಸಾಧ್ಯವಾಗಿಲ್ಲ ಎಂದು ಹೇಳಿದರು. ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರದ ಅಧಿಕಾರಿಗಳು ಚರ್ಚಿಸಬೇಕು. ಪ್ರತಿ ಜಿಲ್ಲೆಗಳಲ್ಲಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹವಿರಬೇಕು. ಈ ಗುರಿ ಸಾಧಿಸಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಸೂಚಿಸಿತು.

2ನೇ ಡೋಸ್ ಲಸಿಕೆ ಕೊರತೆಯಿಲ್ಲ: ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ರಾಜ್ಯದಲ್ಲಿ 2ನೇ ಡೋಸ್ ವ್ಯಾಕ್ಸಿನ್ ಕೊರತೆ ವಿಚಾರದ ಬಗ್ಗೆ ಹೈಕೋರ್ಟ್​ ಗುರುವಾರ ವಿಚಾರಣೆ ನಡೆಸಿತು. ‘1ನೇ ಡೋಸ್ ಲಸಿಕೆ ಪಡೆದವರಿಗೆ 2ನೇ ಡೋಸ್ ಕೊರತೆಯಾಗುವುದಿಲ್ಲ’ ಎಂದು ರಾಜ್ಯ ಸರ್ಕಾರ ಈ ವೇಳೆ ಹೈಕೋರ್ಟ್​ಗೆ ಮಾಹಿತಿ ನೀಡಿತು.

ವಿಶೇಷ ಚೇತನರಿಗೂ ಕೊರೊನಾ ವ್ಯಾಕ್ಸಿನೇಷನ್​ಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹೈಕೋರ್ಟ್​​ಗೆ ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಹೇಳಿಕೆ ನೀಡಿದರು. ಉತ್ಪಾದನೆಯ ಶೇ 75ರಷ್ಟು ಲಸಿಕೆಯನ್ನು ಸರ್ಕಾರವೇ ಖರೀದಿಸುತ್ತಿದೆ. ಖಾಸಗಿ ಆಸ್ಪತ್ರೆಗಳಿಗೆ ಶೇ 25ರಷ್ಟು ಮಾತ್ರ ಹಂಚಿಕೆಯಾಗುತ್ತಿದೆ. ರಾಜ್ಯವು 18 ಸಾವಿರ ಡೋಸ್ ಹೆಚ್ಚುವರಿ ಲಸಿಕೆಗೆ ಆರ್ಡರ್ ನೀಡಿದೆ ಎಂದು ಕೇಂದ್ರ ಸರ್ಕಾರದ ಎಎಸ್​ಜಿ ಐಶ್ವರ್ಯ ಭಾಟಿ ಹೇಳಿದರು.

ಕೊವಿಡ್ ತಡೆಗೆ ವ್ಯಾಕ್ಸಿನೇಷನ್‌ ಒಂದು ಮಾರ್ಗ. 45 ವರ್ಷ ದಾಟಿದವರಿಗೂ ಲಸಿಕೆ ಕೊರತೆಯಿದೆ. 18-44 ವಯೋಮಿತಿಯವರಿಗೆ ಹೇಗೆ ಒದಗಿಸುತ್ತೀರಿ? ಖಾಸಗಿ ಆಸ್ಪತ್ರೆಗಳಲ್ಲಿ 18-44 ವರ್ಷದೊಳಗಿನವರಿಗೂ ಮೊದಲ ಡೋಸ್ ಲಸಿಕೆ ನೀಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ವ್ಯಾಕ್ಸಿನ್ ಸಿಗುತ್ತಿಲ್ಲ. 2ನೇ ಡೋಸ್​ಗೂ ಕಾಯುವ ಸ್ಥಿತಿ ಇದೆ. ಲಸಿಕೆ ಹಂಚಿಕೆ ವಿಚಾರವನ್ನು ಸಮಾನತೆಯ ಹಕ್ಕಿನ ವ್ಯಾಪ್ತಿಯೊಳಗೆ ಪರಿಶೀಲಿಸಬೇಕು ಎಂದು ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

ಚಾಮರಾಜನಗರ ದುರಂತ: ಪರಿಹಾರದ ಬಗ್ಗೆ ಹೈಕೋರ್ಟ್​ ಆಕ್ಷೇಪ ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಕೊವಿಡ್ ಮತ್ತು ಇತರ ರೋಗಿಗಳು ಮೃತಪಟ್ಟ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರದ ಮೊತ್ತ ಸೂಕ್ತವಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಮೃತಪಟ್ಟವರ ಸಂಖ್ಯೆ, ಪರಿಹಾರದ ಬಗ್ಗೆ ವಿವಾದವಿದೆ. ಮುಂದಿನ ವಾರ ಈ ಬಗ್ಗೆ ಪ್ರತಿಕ್ರಿಯೆ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

(Karnataka High Court Asks State govt to create buffer stock of medical oxygen in every district)

ಇದನ್ನೂ ಓದಿ: ಅಪ್ರಾಪ್ತನಿಗೆ ಸನ್ಯಾಸ ನೀಡಿದಾಗ ಸರ್ಕಾರ ಮೂಕಪ್ರೇಕ್ಷನಾಗಿರಲು ಸಾಧ್ಯವಿಲ್ಲ: ಉಡುಪಿಯ ಶಿರೂರು ಮಠಕ್ಕೆ ಬಾಲಸನ್ಯಾಸಿ ನೇಮಕಕ್ಕೆ ಹೈಕೋರ್ಟ್​ ಆಕ್ಷೇಪ

ಇದನ್ನೂ ಓದಿ: ಲಸಿಕೆ ಪೂರೈಕೆಯನ್ನು ಸಮಾನತೆಯ ಹಕ್ಕಿನಡಿ ಪರಿಗಣಿಸಿ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ

Published On - 6:48 pm, Thu, 27 May 21

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್