ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

ಧರ್ಮಸ್ಥಳದ (Dharmasthala) ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಮಂಗಳೂರಿನಿಂದ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಆದ್ರೆ, ಇದಕ್ಕೆ ಇದೀಗ ಹೈಕೋರ್ಟ್ ಬ್ರೇಕ್ ಹಾಕಿದೆ. ಇದರಿಂದ ಮಹೇಶ್ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!
ಮಹೇಶ್ ಶೆಟ್ಟಿ ತಿಮರೋಡಿ. ಹೈಕೋರ್ಟ್​
Edited By:

Updated on: Nov 17, 2025 | 3:30 PM

ಬೆಂಗಳೂರು/ಮಂಗಳೂರು, (ನವೆಂಬರ್ 17): ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಪುರಸ್ಕರಿಸಿದ್ದು, ಗಡಿಪಾರು ಆದೇಶವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಸೂಕ್ತ ಕಾರಣ, ಸೆಕ್ಷನ್​ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ.

ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಮಂಗಳೂರಿನಿಂದ ಗಡಿಪಾರು ಮಾಡಿ ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು.

ಇದನ್ನೂ ಓದಿ: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ದಕ್ಷಿಣ ಕನ್ನಡದಿಂದ ಎಲ್ಲಿಗೆ ಗೊತ್ತಾ?

ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷಗಳ ಕಾಲ ಅವರನ್ನು ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಆದ್ರೆ, ಇದನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್​ ಮೊರೆ ಹೋಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Mon, 17 November 25