Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್ ಸುದ್ದಿ: ಕೊವಿಡ್ ಲಸಿಕೆಗೆ ತಡೆ ನೀಡಲು ಒತ್ತಾಯಿಸಿದ್ದ ಅರ್ಜಿ ವಜಾ

ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲ ಎಂದು ಅಭಿಪ್ರಾಯಪಟ್ಟು ₹ 50 ಸಾವಿರ ದಂಡ ವಿಧಿಸಿ ಅರ್ಜಿ ವಜಾ ಮಾಡಿತು. ಕೊವ್ಯಾಕ್ಸಿನ್, ಕೊವಿಶೀಲ್ಡ್‌ ಲಸಿಕೆಯನ್ನು ಸಾರ್ವಜನಿಕರಿಗೆ ನೀಡುವುದಕ್ಕೆ ಅರ್ಜಿದಾರರ ವಿರೋಧ ವ್ಯಕ್ತಪಡಿಸಿದ್ದರು.

ಹೈಕೋರ್ಟ್ ಸುದ್ದಿ: ಕೊವಿಡ್ ಲಸಿಕೆಗೆ ತಡೆ ನೀಡಲು ಒತ್ತಾಯಿಸಿದ್ದ ಅರ್ಜಿ ವಜಾ
ಕರ್ನಾಟಕ ಹೈಕೋರ್ಟ್
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: May 26, 2021 | 5:18 PM

ಬೆಂಗಳೂರು: ವೈಜ್ಞಾನಿಕ ಅಧ್ಯಯನಗಳನ್ನು (ಕ್ಲಿನಿಕಲ್ ಟ್ರಯಲ್) ಪೂರ್ಣಗೊಳಿಸದೇ ಜನರಿಗೆ ಕೊವಿಡ್ ಲಸಿಕೆ ನೀಡುತ್ತಿರುವ ಕ್ರಮ ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನು ಹೈಕೋರ್ಟ್​ ಬುಧವಾರ ವಜಾಗೊಳಿಸಿದೆ. ಪೂರ್ಣ ಪ್ರಮಾಣದಲ್ಲಿ ಅಧ್ಯಯನ ಪೂರ್ಣಗೊಳಿಸದೇ ಲಸಿಕೆ ನೀಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

18 ಕೋಟಿ ಜನರಿಗೆ ಲಸಿಕೆ ಹಾಕಿದ ಮೇಲೆ‌ ಇಂಥ ಅರ್ಜಿ ಸಲ್ಲಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್​ ವಿಭಾಗೀಯ ಪೀಠ, ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲ ಎಂದು ಅಭಿಪ್ರಾಯಪಟ್ಟು ₹ 50 ಸಾವಿರ ದಂಡ ವಿಧಿಸಿ ಅರ್ಜಿ ವಜಾ ಮಾಡಿತು. ಕೊವ್ಯಾಕ್ಸಿನ್, ಕೊವಿಶೀಲ್ಡ್‌ಗೆ ಅರ್ಜಿದಾರರ ವಿರೋಧ ವ್ಯಕ್ತಪಡಿಸಿದ್ದರು.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ನಗರದ ವಸತಿಹೀನರಿಗೆ ಸೂರು ಕಲ್ಪಿಸುವ ಅಗತ್ಯವಿದೆ. ಇಂಥವರಿಗೆ ತಾತ್ಕಾಲಿಕ ಸೂರು ಕಲ್ಪಿಸುವ ಬಗ್ಗೆ ನಿಲುವು ತಿಳಿಸಿ ಎಂದು ಮತ್ತೊಂದು ಪ್ರಕರಣದಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಹೆಸರಘಟ್ಟ: ಯಥಾಸ್ಥಿತಿಗೆ ಹೈಕೋರ್ಟ್ ಆದೇಶ ಹೆಸರಘಟ್ಟ ಹುಲ್ಲುಗಾವಲು ಪ್ರದೇಶವು ವನ್ಯಜೀವಿ, ಪಕ್ಷಿಗಳ ಆವಾಸಸ್ಥಾನವಾಗಿದೆ. ಸಂರಕ್ಷಿತ ಪ್ರದೇಶವಾಗಿ ಯಥಾಸ್ಥಿತಿ ಕಾಪಾಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ಮಧ್ಯಂತರ ಆದೇಶ ನೀಡಿದೆ. ಹೆಸರಘಟ್ಟ ಪರಿಸರ ಸಂರಕ್ಷಿಸಬೇಕು ಎಂದು ಒತ್ತಾಯಿಸಿ ವಿಜಯ್ ನಿಶಾಂತ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಸಾರಿಗೆ ನೌಕರರ ಸಂಘಗಳಿಗೆ ನೊಟೀಸ್ ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರದ ಕುರಿತು ವಿಚಾರಣೆಯನ್ನು ಹೈಕೋರ್ಟ್ ಇಂದು ಮುಂದುವರಿಸಿತು. ಸಾರಿಗೆ ನೌಕರರ ಸಂಘಗಳನ್ನು ಪ್ರತಿವಾದಿಯಾಗಿಸಿ ಆದೇಶ ಹೊರಡಿಸಿದ ಹೈಕೋರ್ಟ್, ಎಲ್ಲಾ ಸಾರಿಗೆ ಸಂಘಗಳ ಅಹವಾಲು ಆಲಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತು. 10 ವಾರಗಳಲ್ಲಿ ತಿದ್ದುಪಡಿ ಅರ್ಜಿ ಸಲ್ಲಿಸಲು ಸೂಚನೆ ನೀಡಿ ಎಲ್ಲ ಸಾರಿಗೆ ನೌಕರರ ಸಂಘಗಳಿಗೂ ನೊಟೀಸ್ ಜಾರಿ ಮಾಡಿತು.

(Karnataka High Court Cancels PIL submitted to stop Vaccination)

ಇದನ್ನೂ ಓದಿ: ಲಸಿಕೆ ಪೂರೈಕೆಯನ್ನು ಸಮಾನತೆಯ ಹಕ್ಕಿನಡಿ ಪರಿಗಣಿಸಿ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ

ಇದನ್ನೂ ಓದಿ: ದೇಶದಲ್ಲಿ 7,200ಕ್ಕೂ ಹೆಚ್ಚು ಬ್ಲ್ಯಾಕ್​ ಫಂಗಸ್​ ಪ್ರಕರಣ; ದೆಹಲಿ ಹೈಕೋರ್ಟ್​ಗೆ ಕೇಂದ್ರ ಸರ್ಕಾರದಿಂದ ಅಫಿಡವಿಟ್​

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ