ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ; ಯುವತಿ ತಂದೆಯ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್ ಪಿಸಿ ಸೆಕ್ಷನ್ 164 ರ ಅಡಿ ನಿಯಮಬಾಹಿರವಾಗಿ ತಮ್ಮ ಪುತ್ರಿಯ ಹೇಳಿಕೆ ದಾಖಲಿಸಿದ್ದಾರೆಂದು ಆಕ್ಷೇಪಿಸಿ ಯುವತಿಯ ತಂದೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ಎಸ್.ವಿಶ್ವಜಿತ್ ಶೆಟ್ಟಿರವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲ ಸೂರ್ಯ ಮುಕುಂದರಾಜ್ ಉಪಸ್ಥಿತಿಯಲ್ಲಿ ನಿಯಮಬಾಹಿರವಾಗಿ 164 ಹೇಳಿಕೆ ದಾಖಲಿಸಿದ ಆರೋಪ ಮಾಡಿದ್ದ ಯುವತಿಯ ತಂದೆ, ಮಗಳ ಹೇಳಿಕೆ ರದ್ದು ಕೋರಿ ಹೈಕೋರ್ಟ್​ಗೆ ರಿಟ್ ಸಲ್ಲಿಸಿದ್ದರು. […]

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ; ಯುವತಿ ತಂದೆಯ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: sandhya thejappa

Updated on: Jun 22, 2021 | 12:48 PM

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್ ಪಿಸಿ ಸೆಕ್ಷನ್ 164 ರ ಅಡಿ ನಿಯಮಬಾಹಿರವಾಗಿ ತಮ್ಮ ಪುತ್ರಿಯ ಹೇಳಿಕೆ ದಾಖಲಿಸಿದ್ದಾರೆಂದು ಆಕ್ಷೇಪಿಸಿ ಯುವತಿಯ ತಂದೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ಎಸ್.ವಿಶ್ವಜಿತ್ ಶೆಟ್ಟಿರವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲ ಸೂರ್ಯ ಮುಕುಂದರಾಜ್ ಉಪಸ್ಥಿತಿಯಲ್ಲಿ ನಿಯಮಬಾಹಿರವಾಗಿ 164 ಹೇಳಿಕೆ ದಾಖಲಿಸಿದ ಆರೋಪ ಮಾಡಿದ್ದ ಯುವತಿಯ ತಂದೆ, ಮಗಳ ಹೇಳಿಕೆ ರದ್ದು ಕೋರಿ ಹೈಕೋರ್ಟ್​ಗೆ ರಿಟ್ ಸಲ್ಲಿಸಿದ್ದರು.

ಯುವತಿಯ ಪರ ವಕೀಲ ಸಂಕೇತ್ ಏಣಗಿ ಹಾಜರಾಗಿ ಸಿಆರ್ ಪಿಸಿ ಸೆಕ್ಷನ್ 164 ಅಡಿ ಹೇಳಿಕೆ ಕಾನೂನುಬದ್ಧವಾಗಿದೆ. ಯುವತಿ ವಯಸ್ಕಳಾಗಿದ್ದು, ಸ್ವ ಇಚ್ಛೆಯಿಂದ ಹೇಳಿಕೆ ನೀಡಿದ್ದಾಳೆ. ಸುಪ್ರೀಂ ಕೋರ್ಟ್ ನಿರ್ಭಯಾ ಪ್ರಕರಣದಲ್ಲಿ ನೀಡಿದ್ದ ತೀರ್ಪಿಗೆ ಅನುಗುಣವಾಗಿ ಹೇಳಿಕೆ ದಾಖಲಾಗಿದೆ. ಹೀಗಾಗಿ ಯುವತಿಯ ತಂದೆಯ ಅರ್ಜಿಯಲ್ಲಿ ಹುರುಳಿಲ್ಲವೆಂದು ವಾದಿಸಿದರು. ಇನ್ನು ಎಸ್ಐಟಿ ಪರ ವಿಶೇಷ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ಹಾಜರಾಗಿ ಯುವತಿ ಈಗಾಗಲೇ ಹೇಬಿಯಸ್ ಕಾರ್ಪಸ್ ಪ್ರಕರಣದಲ್ಲಿ ನ್ಯಾಯಮೂರ್ತಿಗಳ ಮುಂದೆ ಹೇಳಿಕೆ ನೀಡಿದ್ದಾಳೆ. ಪ್ರಕರಣದಲ್ಲಿ 3 ನೇ ವ್ಯಕ್ತಿಯಾಗಿರುವ ಯುವತಿಯ ತಂದೆ ಅರ್ಜಿ ಪರಿಗಣಿಸಬಾರದು. ಈ ಹಂತದಲ್ಲಿ ಯುವತಿಯ ತಂದೆಯ ಅರ್ಜಿ ಆಧರಿಸಿ ಸಿಆರ್ ಪಿಸಿ ಸೆಕ್ಷನ್ 164 ಹೇಳಿಕೆಯ ಕಾನೂನುಬದ್ಧತೆ ನ್ಯಾಯಾಲಯ ನಿರ್ಧರಿಸಲಾಗದು ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಯುವತಿ ತಂದೆಯ ಅರ್ಜಿ ಹೈಕೋರ್ಟ್ ವಜಾಗೊಳಿಸಿದೆ.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗವಾದ ನಂತರ ನಾಪತ್ತೆಯಾಗಿದ್ದ ಯುವತಿ ನಂತರ ವಕೀಲರ ಮೂಲಕ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದಳು. ನಂತರ ಸೂಕ್ತ ತನಿಖೆಗೆ ಆಗ್ರಹಿಸಿ ಹೈಕೋರ್ಟ್​ಗೂ ಪತ್ರ ಬರೆದಿದ್ದಳು.‌ ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ಸಿಆರ್ ಪಿಸಿ ಸೆಕ್ಷನ್ 164 ಅಡಿಯಲ್ಲಿ ಹೇಳಿಕೆ ದಾಖಲಿಸಿದ್ದಳು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಯುವತಿಯ ಪೋಷಕರು ಹೈಕೋರ್ಟ್​ಗೆ ಅರ್ಜಿ ದಾಖಲಿಸಿದ್ದರು. ಅಲ್ಲದೇ ಯುವತಿ ಅಕ್ರಮ ಬಂಧನದಲ್ಲಿದ್ದಾಳೆಂದು ಹೇಬಿಯಸ್ ಕಾರ್ಪಸ್ ಅರ್ಜಿಯನ್ನೂ ದಾಖಲಿಸಿದ್ದರು. ಆದರೆ ವಿಡಿಯೋ ಕಾನ್ಫರೆನ್ಸ್ ಮೂಲಕ ಯುವತಿಯ ಹೇಳಿಕೆ ದಾಖಲಿಸಿದ್ದ ಹೈಕೋರ್ಟ್ ಹೇಬಿಯಸ್ ಕಾರ್ಪಸ್ ಇತ್ಯರ್ಥ ಪಡಿಸಿತ್ತು.

ಜನಪ್ರತಿನಿಧಿಗಳ ವಿಶೇಷ ಪೀಠಕ್ಕೆ ಯುವತಿ ಅರ್ಜಿ ವರ್ಗಾವಣೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿಯಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾದ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ನಿನ್ನೆ (ಜೂನ್ 21) ವಿಚಾರಣೆಗೆ ಕೈಗೆತ್ತಿಕೊಂಡಿತು. ಸಿಡಿ ಬಹಿರಂಗ ಕೇಸ್​ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಯುವತಿ ಅರ್ಜಿಯಲ್ಲಿ ಕೋರಿದ್ದರು. ರಮೇಶ್ ಜಾರಕಿಹೊಳಿ ಹ್ಯಾಂಡ್ ಸಮನ್ಸ್ ಪಡೆದಿಲ್ಲ ಎಂದು ಯುವತಿ ಪರ ವಕೀಲ ಸಂಕೇತ್ ಏಣಗಿ ವಾದಿಸಿದರು. ರಮೇಶ್ ಜಾರಕಿಹೊಳಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜೂನ್ 23ಕ್ಕೆ ನ್ಯಾಯಾಲಯ ಮುಂದೂಡಿತು. ಈ ಪ್ರಕರಣವನ್ನು ಜನಪ್ರತಿನಿಧಿಗಳಿಗಾಗಿನ ವಿಶೇಷ ಪೀಠಕ್ಕೆ ಕೇಸ್ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಜನಪ್ರತಿನಿಧಿಗಳ ವಿಶೇಷ ಪೀಠಕ್ಕೆ ಯುವತಿ ಅರ್ಜಿ ವರ್ಗಾವಣೆ

ಯಾರೂ ಎಲ್ಲೂ ಹೋಗಿಲ್ಲ, ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆ ಹೇಳೇ ಇಲ್ಲ: ಶಾಸಕ ಮಹೇಶ್ ಕುಮಟಳ್ಳಿ

(Karnataka High court cancels rit application of Ramesh Jarkiholi CD case Victim Father)

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ