ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ಚೀಫ್ ಜಸ್ಟೀಸ್ ಪ್ರಸನ್ನ ಬಿ. ವರಾಳೆ ಹೆಸರು ಶಿಫಾರಸ್ಸು

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಾಮೂರ್ತಿ ಪ್ರಸನ್ನ ಬಿ. ವರಾಳೆ ಹೆಸರು ಶಿಫಾರಸು ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದ್ದು, ಶೀಘ್ರವೇ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ಚೀಫ್ ಜಸ್ಟೀಸ್ ಪ್ರಸನ್ನ ಬಿ. ವರಾಳೆ ಹೆಸರು ಶಿಫಾರಸ್ಸು
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 19, 2024 | 7:58 PM

ಬೆಂಗಳೂರು, (ಜನವರಿ 19): ಮುಂದಿನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ (Prasanna B. Varale ಅವರ ಹೆಸರು ಶಿಫಾರಸು ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದ್ದು, ಶೀಘ್ರವೇ ಪ್ರಸನ್ನ ಬಿ.ವರಾಳೆ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲಿದ್ದಾರೆ. ಇನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ನೇಮಕವಾಗಲಿದ್ದಾರೆ.

ಕರ್ನಾಟಕ ಹೈಕೋರ್ಟ್​ನ ಹಾಲಿ 2ನೇ ಹಿರಿಯ ನ್ಯಾಯಮೂರ್ತಿಯಾಗಿರುವ ದಿನೇಶ್ ಕುಮಾರ್ ಅವರು ಇದೇ ಫೆಬ್ರವರಿ 24ರಂದು ನಿವೃತ್ತಿಯಾಗಲಿದ್ದಾರೆ. ಅದಕ್ಕೂ ಮುನ್ನವೇ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಪದೋನ್ನತಿ ನಂತರ ದಿನೇಶ್ ಕುಮಾರ್ ಅವರು ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಲಿದ್ದಾರೆ.

ಈ ಮೊದಲು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ (ಪ್ರಸನ್ನ ಬಿ.ವರಾಳೆ) ಅವರನ್ನು 2022ರ ಅಕ್ಟೋಬರ್ 11ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿತ್ತು. ಇದೀಗ ನ್ಯಾಯಮೂರ್ತಿ ಸ್ಥಾನಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಪ್ರಸನ್ನ ಬಿ. ವರಾಳೆ ಬಗ್ಗೆ ಒಂದಿಷ್ಟು ಮಾಹಿತಿ

ನ್ಯಾಯಮೂರ್ತಿ ವರಾಳೆ ಅವರು 1962, ಜೂನ್ 23 ರಂದು ಕರ್ನಾಟಕದ ನಿಪಾಣಿಯಲ್ಲಿ ಜನಿಸಿದ್ದು ಅವರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನಿನಲ್ಲಿ ಪದವಿ ಪಡೆದುಕೊಂಡಿದ್ದರು.

ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡು ವೃತ್ತಿ ಜೀವನ ಆರಂಭಿಸಿದ್ದ ವರಾಳೆ ಅವರು ವಕೀಲರಾದ ಎಸ್ ಎನ್ ಲೋಯಾ ಅವರ ಬಳಿ ಆರಂಭದಲ್ಲಿ ಪ್ರಾಕ್ಟೀಸ್‌ ಮಾಡಿದ್ದರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಜುಲೈ 18, 2008ರಲ್ಲಿ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು.

ಅಸಿಸ್ಟೆಂಟ್ ಗೌರ್ನಮೆಂಟ್ ಪ್ಲೀಡರ್ ಮತ್ತು ಅಡಿಷನಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಸೇವೆ ಸಲ್ಲಿಸಿದ್ದರು. ಬಾಂಬೆ ಹೈಕೋರ್ಟ್ ನ ಔರಂಗಾಬಾದ್ ಪೀಠದಲ್ಲಿ ಸರ್ಕಾರ ಪರವಾಗಿ ಎಎನ್ ಡಿ ಅಡಿಷನಲ್ ಸ್ಟ್ಯಾಂಡಿಂಗ್ ಕೌನ್ಸೆಲ್ ಆಗಿದ್ದರು.

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ