AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ, ಗೃಹ ಇಲಾಖೆಗೆ ಹೈಕೋರ್ಟ್ ತರಾಟೆ

ಬೆಂಗಳೂರಿನಲ್ಲಿ ನೆಲೆಸಿದ್ದ ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರನ್ನೇ ಪೊಲೀಸರು ಬಂಧಿಸಿದ್ದು, ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರಿನ ನಿವಾಸಿಗಳಿಗಿಂತ ವಲಸಿಗರೇ ಮುಖ್ಯವಾಗಿದ್ದಾರಾ ಎಂದು ಪ್ರಶ್ನಿಸಿ ಪೊಲೀಸರು ಹಾಗೂ ಗೃಹ ಇಲಾಖೆಗೆ ತರಾಟೆಗೆ ತೆಗೆದುಕೊಂಡಿದೆ. ಹಾಗಾದ್ರೆ, ಏನಿದು ಪ್ರಕರಣ?

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ, ಗೃಹ ಇಲಾಖೆಗೆ ಹೈಕೋರ್ಟ್ ತರಾಟೆ
ಕರ್ನಾಟಕ ಉಚ್ಛ ನ್ಯಾಯಾಲಯImage Credit source: Karnataka High court website
Ramesha M
| Edited By: |

Updated on: Jul 28, 2026 | 7:55 PM

Share

ಮುಖ್ಯಾಂಶಗಳು

  • ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರನ್ನೇ ಬಂಧಿಸಿದ ಪೊಲೀಸರು
  • ಬೆಳ್ಳಂದೂರು ಠಾಣೆ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ
  • ಅಕ್ರಮ ವಲಸಿಗರ ಓಲೈಕೆ ನಿಲ್ಲಬೇಕು ಎಂದ ಹೈಕೋರ್ಟ್

ಬೆಂಗಳೂರು, (ಜುಲೈ 28): ಬೆಂಗಳೂರಿನಲ್ಲಿ ನೆಲೆಸಿದ್ದ ಅಕ್ರಮ ಬಾಂಗ್ಲಾ ವಲಸಿಗರ (Illegal Bangladeshi Immigrants) ಮಾಹಿತಿ ನೀಡಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಬೆಳ್ಳಂದೂರು ಪೊಲೀಸರ ಕ್ರಮಕ್ಕೆ ಹೈಕೋರ್ಟ್ (Karnataka High court)  ತೀವ್ರ ಅಸಮಾಧಾನ ಹೊರಹಾಕಿದೆ. ನಾಗೇಂದ್ರ ಎಂಬುವರು ಜುಲೈ 22ರ ರಾತ್ರಿ 11.30ಕ್ಕೆ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ದೂರು ನೀಡಿದ್ದರು. ಬಳಿಕ ಅಂದೇ 11.45ಕ್ಕೆ ದೂರು ನೀಡಿದ್ದ ನಾಗೇಂದ್ರ ವಿರುದ್ಧವೇ ಕೇಸ್ ದಾಖಲಿಸಿ ಬಂಧಿಸಲಾಗಿತ್ತು. ಈ ಪ್ರಕರಣ ರದ್ದುಕೋರಿ ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಬೆಳ್ಳಂದೂರು ಪೊಲೀಸರ ಈ ನಡೆಗೆ ಅಸಮಾಧಾನಗೊಂಡಿದೆ. ಇದು ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗ. ಗೃಹ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನೆಸಿ ಅರ್ಜಿದಾರರ ವಿರುದ್ಧದ ಕೇಸ್​ಗೆ ತಡೆಯಾಜ್ಞೆ ನೀಡಿದೆ.

ಬೆಂಗಳೂರಿನ ನಿವಾಸಿಗಳಿಗಿಂತ ವಲಸಿಗರೇ ಮುಖ್ಯವಾಗಿದ್ದಾರಾ?

ಬಾಂಗ್ಲಾ ಮೂಲದ ನಜ್ರೀನಾ ನೀಡಿದ್ದ ದೂರನ್ನು ರದ್ದುಕೋರಿ ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೊರ್ಟ್,  ಇದು ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗ. ಗೃಹ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನೆಸಿದೆ. ಬೆಂಗಳೂರಿನ ನಿವಾಸಿಗಳಿಗಿಂತ ವಲಸಿಗರೇ ಮುಖ್ಯವಾಗಿದ್ದಾರಾ? ದೇಶದ ಭದ್ರತೆಗೇ ಬೆದರಿಕೆಯಿದ್ದರೂ ವಲಸಿಗರನ್ನು ಬೆಂಬಲಿಸುತ್ತಿದ್ದೀರಾ ಎಂದು ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ನೋಡಿ: ಬಿಜೆಪಿಗರಿಂದ ಸರ್ವೇ: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಿಸಿಗರ ಜಾಲ ಪತ್ತೆ

ದೇಶದ ಭದ್ರತೆಗೇ ಬೆದರಿಕೆಯಿದ್ದರೂ ವಲಸಿಗರನ್ನು ಬೆಂಬಲಿಸುತ್ತಿದ್ದೀರಾ?

ಅಕ್ರಮ ವಲಸಿಗರನ್ನು ಸರ್ಕಾರ, ಪೊಲೀಸರೇ ಬೆಂಬಲಿಸುತ್ತಿದ್ದಾರೆ. ಬೆಂಗಳೂರಿನ ನಿವಾಸಿಗಳಿಗಿಂತ ವಲಸಿಗರೇ ಮುಖ್ಯವಾಗಿದ್ದಾರಾ? ದೇಶದ ಭದ್ರತೆಗೇ ಬೆದರಿಕೆಯಿದ್ದರೂ ವಲಸಿಗರನ್ನು ಬೆಂಬಲಿಸುತ್ತಿದ್ದೀರಾ? ವಲಸಿಗರನ್ನು ಹೊರಗೆ ಕಳಿಸಿ ಅಂದರೆ ದೂರು ನೀಡಿದವರ ಮೇಲೇ ಕೇಸ್. ಅಕ್ರಮ ವಲಸಿಗರ ಓಲೈಕೆ ನಿಲ್ಲಬೇಕು. ಅಕ್ರಮ ವಲಸಿಗರ ಗಡಿಪಾರಿಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್, ಖಡಕ್ ಸೂಚನೆ ನೀಡಿದೆ.

ಪೊಲೀಸರ ಕ್ರಮದ ಬಗ್ಗೆ ಆಗಸ್ಟ 6ರೊಳಗೆ ವಿವರಣೆ ನೀಡಲು ಸೂಚನೆ ನೀಡಿದೆ. ಅರ್ಜಿದಾರರ ಪರ ವಕೀಲ ಗಿರೀಶ್ ಭಾರದ್ವಾಜ್ ವಾದ ಮಂಡನೆ ಮಾಡಿದರು.

ಘಟನೆಯ ಹಿನ್ನೆಲೆ

ಡಾ. ನಾಗೇಂದ್ರಪ್ಪ ಅವರು ಕಳೆದ ಕೆಲವು ಸಮಯದಿಂದ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರ ಕುರಿತು ಮಾಹಿತಿಯನ್ನು ಕಲೆಹಾಕಿ ಅಧಿಕಾರಿಗಳಿಗೆ ನೀಡುತ್ತಿದ್ದರು. ದೇಶದ ಹಿತದೃಷ್ಟಿಯಿಂದ ತಾವು ಈ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಸಂಬಂಧ ಜುಲೈ 22ರ ರಾತ್ರಿ 11.30ಕ್ಕೆ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ದೂರು ನೀಡಿದ್ದರು. ಬಳಿಕ ಅಂದೇ 11.45ಕ್ಕೆ ದೂರು ನೀಡಿದ್ದ ನಾಗೇಂದ್ರ ವಿರುದ್ಧವೇ ಕೇಸ್ ದಾಖಲಿಸಿ ಬಂಧಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ