
ಬೆಂಗಳೂರು, (ಜುಲೈ 28): ಬೆಂಗಳೂರಿನಲ್ಲಿ ನೆಲೆಸಿದ್ದ ಅಕ್ರಮ ಬಾಂಗ್ಲಾ ವಲಸಿಗರ (Illegal Bangladeshi Immigrants) ಮಾಹಿತಿ ನೀಡಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಬೆಳ್ಳಂದೂರು ಪೊಲೀಸರ ಕ್ರಮಕ್ಕೆ ಹೈಕೋರ್ಟ್ (Karnataka High court) ತೀವ್ರ ಅಸಮಾಧಾನ ಹೊರಹಾಕಿದೆ. ನಾಗೇಂದ್ರ ಎಂಬುವರು ಜುಲೈ 22ರ ರಾತ್ರಿ 11.30ಕ್ಕೆ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ದೂರು ನೀಡಿದ್ದರು. ಬಳಿಕ ಅಂದೇ 11.45ಕ್ಕೆ ದೂರು ನೀಡಿದ್ದ ನಾಗೇಂದ್ರ ವಿರುದ್ಧವೇ ಕೇಸ್ ದಾಖಲಿಸಿ ಬಂಧಿಸಲಾಗಿತ್ತು. ಈ ಪ್ರಕರಣ ರದ್ದುಕೋರಿ ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಬೆಳ್ಳಂದೂರು ಪೊಲೀಸರ ಈ ನಡೆಗೆ ಅಸಮಾಧಾನಗೊಂಡಿದೆ. ಇದು ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗ. ಗೃಹ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನೆಸಿ ಅರ್ಜಿದಾರರ ವಿರುದ್ಧದ ಕೇಸ್ಗೆ ತಡೆಯಾಜ್ಞೆ ನೀಡಿದೆ.
ಬಾಂಗ್ಲಾ ಮೂಲದ ನಜ್ರೀನಾ ನೀಡಿದ್ದ ದೂರನ್ನು ರದ್ದುಕೋರಿ ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೊರ್ಟ್, ಇದು ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗ. ಗೃಹ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನೆಸಿದೆ. ಬೆಂಗಳೂರಿನ ನಿವಾಸಿಗಳಿಗಿಂತ ವಲಸಿಗರೇ ಮುಖ್ಯವಾಗಿದ್ದಾರಾ? ದೇಶದ ಭದ್ರತೆಗೇ ಬೆದರಿಕೆಯಿದ್ದರೂ ವಲಸಿಗರನ್ನು ಬೆಂಬಲಿಸುತ್ತಿದ್ದೀರಾ ಎಂದು ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿದೆ.
ಅಕ್ರಮ ವಲಸಿಗರನ್ನು ಸರ್ಕಾರ, ಪೊಲೀಸರೇ ಬೆಂಬಲಿಸುತ್ತಿದ್ದಾರೆ. ಬೆಂಗಳೂರಿನ ನಿವಾಸಿಗಳಿಗಿಂತ ವಲಸಿಗರೇ ಮುಖ್ಯವಾಗಿದ್ದಾರಾ? ದೇಶದ ಭದ್ರತೆಗೇ ಬೆದರಿಕೆಯಿದ್ದರೂ ವಲಸಿಗರನ್ನು ಬೆಂಬಲಿಸುತ್ತಿದ್ದೀರಾ? ವಲಸಿಗರನ್ನು ಹೊರಗೆ ಕಳಿಸಿ ಅಂದರೆ ದೂರು ನೀಡಿದವರ ಮೇಲೇ ಕೇಸ್. ಅಕ್ರಮ ವಲಸಿಗರ ಓಲೈಕೆ ನಿಲ್ಲಬೇಕು. ಅಕ್ರಮ ವಲಸಿಗರ ಗಡಿಪಾರಿಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್, ಖಡಕ್ ಸೂಚನೆ ನೀಡಿದೆ.
ಪೊಲೀಸರ ಕ್ರಮದ ಬಗ್ಗೆ ಆಗಸ್ಟ 6ರೊಳಗೆ ವಿವರಣೆ ನೀಡಲು ಸೂಚನೆ ನೀಡಿದೆ. ಅರ್ಜಿದಾರರ ಪರ ವಕೀಲ ಗಿರೀಶ್ ಭಾರದ್ವಾಜ್ ವಾದ ಮಂಡನೆ ಮಾಡಿದರು.
ಡಾ. ನಾಗೇಂದ್ರಪ್ಪ ಅವರು ಕಳೆದ ಕೆಲವು ಸಮಯದಿಂದ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರ ಕುರಿತು ಮಾಹಿತಿಯನ್ನು ಕಲೆಹಾಕಿ ಅಧಿಕಾರಿಗಳಿಗೆ ನೀಡುತ್ತಿದ್ದರು. ದೇಶದ ಹಿತದೃಷ್ಟಿಯಿಂದ ತಾವು ಈ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಸಂಬಂಧ ಜುಲೈ 22ರ ರಾತ್ರಿ 11.30ಕ್ಕೆ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ದೂರು ನೀಡಿದ್ದರು. ಬಳಿಕ ಅಂದೇ 11.45ಕ್ಕೆ ದೂರು ನೀಡಿದ್ದ ನಾಗೇಂದ್ರ ವಿರುದ್ಧವೇ ಕೇಸ್ ದಾಖಲಿಸಿ ಬಂಧಿಸಲಾಗಿತ್ತು.