AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್: ಹೈಕೋರ್ಟ್ ಹೇಳಿದ್ದೇನು?

ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ಸಹ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಅಲ್ಲದೇ ಮೇಲ್ಮನವಿ ಅರ್ಜಿಗಳ ವಿಚಾರಣೆ ಜೂ.24ಕ್ಕೆ ನಿಗದಿಪಡಿಸಿದ್ದು, ಅಂದೇ ಅಂತಿಮವಾಗಿ ತೀರ್ಮಾನಿಸಲಾಗುವುದು ತಿಳಿಸಿದೆ.

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್: ಹೈಕೋರ್ಟ್ ಹೇಳಿದ್ದೇನು?
Bike Taxi
Ramesha M
| Updated By: Digi Tech Desk|

Updated on:Jun 13, 2025 | 6:30 PM

Share

ಬೆಂಗಳೂರು(ಜೂ.13): ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ ಕುಮಾರ್‌ ಅವರಿದ್ದ ಪೀಠ, ಬೈಕ್ ಟ್ಯಾಕ್ಸಿ ಪರ ಮಧ್ಯಂತರ ಆದೇಶ ನೀಡಲು ನಿರಾಕಿರಿಸಿದ್ದು, ಮೇಲ್ಮನವಿ ಅರ್ಜಿಗಳನ್ನು ಜೂ.24ರಂದು ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದಿದೆ. ಹೀಗಾಗಿ ಜೂನ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಇರುವುದಿಲ್ಲ.

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದು, ಬೈಕ್ ಟ್ಯಾಕ್ಸಿಗಳ ಪರ್ಮಿಟ್ ನಿಯಮ ರೂಪಿಸಲು ಸರ್ಕಾರ ಸಿದ್ಧವಿಲ್ಲ. 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಲಾಗಿದೆ. ಆದ್ರೆ, ಕರ್ನಾಟಕ ಸೇರಿ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. 4 ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್ ಟ್ಯಾಕ್ಸಿ ನಡೆಯುತ್ತಿದೆ. ಸುಪ್ರೀಂಕೋರ್ಟ್ ಕೂಡಾ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ಕೋರ್ಟ್​ ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಜೂನ್ 15 ರವರೆಗೆ ವಿಸ್ತರಿಸಿದ ಹೈಕೋರ್ಟ್

ಮೋಟಾರು ವಾಹನ ಕಾಯ್ದೆಯ ನಿಯಮಗಳ ಪ್ರಕಾರವಾಗಿ ಹಳದಿ ನೋಂದಣಿ ಫಲಕ (ಯೆಲ್ಲೋ ಬೋರ್ಡ್) ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬುದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ರೊಪ್ಪೆನ್ ಟ್ರಾನ್ಸ್​​ಪೋರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಬೈಕ್ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅಗ್ರಿಗ್ರೇಟರ್ ಸಂಸ್ಥೆಗಳು ಹೈಕೋರ್ಟ್​​ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ
Image
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ
Image
ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ
Image
ಬೆಂಗಳೂರು ಬುಕಿಂಗ್ ಮಾಫಿಯಾ: ಟಿಪ್ಸ್ ಹೆಸರಲ್ಲಿ ದುಪ್ಪಟ್ಟು ಹಣ ವಸೂಲಿ
Image
ಸಿಹಿ ಸುದ್ದಿ ನೀಡಿದ ಅಮಿತ್​​ ಶಾ: ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎನ್ಐ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್(ಓಲಾ), ವರ್ಕುಟಿ ಮಹೇಂದ್ರ ರೆಡ್ಡಿ(ಬೈಕ್ ಟ್ಯಾಕ್ಸಿಗಳ ಮಾಲೀಕರು) ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಸಲ್ಲಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:25 pm, Fri, 13 June 25

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ