ಬೇಗೂರು ಕೆರೆಯಲ್ಲಿ ಶಿವನ ಪತ್ರಿಮೆ ನಿರ್ಮಾಣ; ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

Begur Lake Shiva Statue: ನ್ಯಾಯಾಲಯದ ತಡೆಯಾಜ್ಞೆ ನಡುವೆಯೂ ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆ ಅನಾವರಣ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಮೇಲ್ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಆಗ್ನೇಯ ವಿಭಾಗದ ಡಿಸಿಪಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಬೇಗೂರು ಕೆರೆಯಲ್ಲಿ ಶಿವನ ಪತ್ರಿಮೆ ನಿರ್ಮಾಣ; ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ
ಬೇಗೂರು ಕೆರೆಯಲ್ಲಿರುವ ಶಿವನ ಪ್ರತಿಮೆ
Follow us
| Updated By: ಸುಷ್ಮಾ ಚಕ್ರೆ

Updated on:Aug 19, 2021 | 5:08 PM

ಬೆಂಗಳೂರು: ಬೆಂಗಳೂರಿನ ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆ ನಿರ್ಮಿಸಿರುವ ವಿವಾದದ ಕುರಿತಾಗಿ ನಡೆಯುತ್ತಿರುವ ತನಿಖೆಯ ಮೇಲ್ವಿಚಾರಣೆ ನಡೆಸಿ, ಮುಚ್ಚಿದ ಲಕೋಟೆಯಲ್ಲಿ ಆ ವರದಿ ಸಲ್ಲಿಸುವಂತೆ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿಗೆ ಹೈಕೋರ್ಟ್ ಆದೇಶ ನೀಡಿದೆ. ಕೆರೆಗಳ ಒತ್ತುವರಿ ತೆರವು ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಮತ್ತು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ನ್ಯಾಯಪೀಠ, ಹಿಂದಿನ ಆದೇಶದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ವರದಿ ಸಲ್ಲಿಸಿದ್ದಾರೆಯೇ? ಎಂದು ಪ್ರಶ್ನಿಸಿತು. ಅದಕ್ಕೆ ಉತ್ತರಿಸಿದ ಸರ್ಕಾರಿ ವಕೀಲ, ಈಗಾಗಲೇ ಆಯುಕ್ತರು ವರದಿ ಸಲ್ಲಿಸಿದ್ದಾರೆ. ಘಟನೆ ಸಂಬಂಧ ಆ. 16ರಂದು ಎಫ್​ಐಆರ್‌ ದಾಖಲಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದರು.

ಈ ವೇಳೆ, ಪೊಲೀಸರಿಗೆ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲು ಸಮಯಬೇಕಾಗುತ್ತದೆ. ಬೆಂಗಳೂರು ಈಶಾನ್ಯ ವಲಯ ಕೋರಮಂಗಲದ ಡಿಸಿಪಿ ಈ ಪ್ರಕರಣದ ತನಿಖೆಯ ಮೇಲ್ವಿಚಾರಣೆ ವಹಿಸಿಕೊಂಡು, ಆ.31ರವರೆಗೆ ತನಿಖೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಕೋರ್ಟ್ ತೀರ್ಪು ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆ. 2ಕ್ಕೆ ಮುಂದೂಡಲಾಗಿದೆ.

ನ್ಯಾಯಾಲಯದ ತಡೆಯಾಜ್ಞೆ ನಡುವೆಯೂ ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆ ಅನಾವರಣ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಮೇಲ್ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಆಗ್ನೇಯ ವಿಭಾಗದ ಡಿಸಿಪಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ಬಿಬಿಎಂಪಿ ನಿಲುವಿಗೆ ಆಕ್ಷೇಪ ಸಲ್ಲಿಸಿದ್ದಾರೆ. ಆಗ, ಬಿಬಿಎಂಪಿ ಇದುವರೆಗೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿಲ್ಲ. ಒಂದೊಮ್ಮೆ ಹಾಗೆ ಮಾಡಿದರೆ ಅದರ ಪರಿಣಾಮ ಏನು ಎಂಬುದು ಬಿಬಿಎಂಪಿಗೆ ಗೊತ್ತಿದೆ. ನ್ಯಾಯಾಂಗ ನಿಂದನೆ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿ ಓಕಾ ಹೇಳಿದ್ದಾರೆ. ಈ ವೇಳೆ, ನ್ಯಾಯಾಲಯದ ಆದೇಶದಂತೆ ಯಥಾಸ್ಥಿತಿ ಕಾಪಾಡಲಾಗಿದೆ. ಶಿವನ ಪ್ರತಿಮೆಗೆ ಪರದೆ ಹಾಕಲಾಗಿದೆ ಎಂದು ಸರ್ಕಾರಿ ಅಧಿಕಾರಿ ವಿಜಯ್ ಕುಮಾರ್ ಪಾಟೀಲ್ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ಈ ಪ್ರಕರಣದ ಈ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ಬೇಗೂರು ಕೆರೆಯಲ್ಲಿ ಕೃತಕ ದ್ವೀಪ ಸೃಷ್ಟಿಸಿ ಶಿವನ ಮೂರ್ತಿ ಪ್ರತಿಷ್ಠಾಪಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೆರೆಯ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: Inspiring Story: ಸಾಫ್ಟ್​ವೇರ್​ ಉದ್ಯೋಗ ಬಿಟ್ಟು ಭಾರತೀಯ ಸೇನೆ ಸೇರಿದ ಬೆಂಗಳೂರಿನ ಇಂಜಿನಿಯರ್

ಇನ್ನೊಬ್ಬರ ಜತೆ  ಲಿವ್ ಇನ್ ಸಂಬಂಧದಲ್ಲಿರುವ ವಿವಾಹಿತ ಮಹಿಳೆಗೆ ರಕ್ಷಣೆ ನೀಡಿದರೆ ಅದು ಅಕ್ರಮ ಸಂಬಂಧವನ್ನು ಒಪ್ಪಿಕೊಂಡಂತೆ: ರಾಜಸ್ಥಾನ ಹೈಕೋರ್ಟ್

(Karnataka High Court directs DCP to supervise Bengaluru Begur Lake Lord Shiva Statue Controversy )

Published On - 5:02 pm, Thu, 19 August 21