AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆಯನ್ನು ಖಾಸಗಿ ಬಸ್​​ಗಳಿಗೂ ವಿಸ್ತರಿಸುವಂತೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕೋರಿ ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್ ಕುಮಾರ್ ಶೆಟ್ಟಿ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಶಕ್ತಿ ಯೋಜನೆಯನ್ನು ಖಾಸಗಿ ಬಸ್​​ಗಳಿಗೂ ವಿಸ್ತರಿಸುವಂತೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ
ಹೈಕೋರ್ಟ್
TV9 Web
| Edited By: |

Updated on: Jan 06, 2024 | 4:13 PM

Share

ಬೆಂಗಳೂರು, ಜನವರಿ 6: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ (Free Bus Travel For Women) ಅನುವು ಮಾಡಿಕೊಡುವ ಶಕ್ತಿ ಯೋಜನೆಯನ್ನು (Shakti Scheme) ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ (Karnataka High Court) ನಿರ್ದೇಶನ ನೀಡಿದೆ. ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕೋರಿ ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್ ಕುಮಾರ್ ಶೆಟ್ಟಿ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

‘ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಖಾಸಗಿ ಬಸ್ ನಿರ್ವಾಹಕರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಖಾಸಗಿ ಬಸ್ ನಿರ್ವಾಹಕರಿಗೂ ಯೋಜನೆ ಅನ್ವಯವಾಗಬೇಕು. ಸರ್ಕಾರಿ ಬಸ್​​ಗಳಂತೆ ಮಹಿಳೆಯರ ಪ್ರಯಾಣ ವೆಚ್ಚವನ್ನು ಖಾಸಗಿ ಬಸ್ ನಿರ್ವಾಹಕರಿಗೆ ಮರುಪಾವತಿ ಮಾಡಬೇಕು’ ಎಂದು ಶರತ್ ಅವರು ಹೈಕೋರ್ಟ್​ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದ್ದರು. ಜುಲೈನಲ್ಲಿ ಈ ಬಗ್ಗೆ ಸಲ್ಲಿಸಿದ ಮನವಿಯನ್ನು ಪರಿಗಣಿಸಲು ರಾಜ್ಯ ಸರ್ಕಾರ ಮತ್ತು ಆರ್‌ಟಿಒಗೆ ನಿರ್ದೇಶಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು.

ಕರ್ನಾಟಕದಲ್ಲಿ ಸುಮಾರು 75,000 ಕಾರ್ಮಿಕರು ಖಾಸಗಿ ಬಸ್‌ಗಳನ್ನು ಅವಲಂಬಿಸಿದ್ದಾರೆ. ಖಾಸಗಿ ಬಸ್ ನಿರ್ವಾಹಕರಿಂದ ರಾಜ್ಯ ಸರ್ಕಾರ 1620 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಜನವರಿ 17ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ಸಂಘ ಕರೆ

ಶಕ್ತಿ ಯೋಜನೆ ಜಾರಿಯಾದ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಮಾಲೀಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಹಾಗೊಂದು ವೇಳೆ ಯೋಜನೆ ಜಾರಿಗೊಳಿಸುವುದೇ ಆದರೆ ಖಾಸಗಿ ಬಸ್​ಗಳನ್ನೂ ಯೋಜನೆಯಡಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದರು. ಶಕ್ತಿ ಯೋಜನೆಯ ಪರಿಣಾಮ ಮಹಿಳೆಯರೆಲ್ಲ ಸರ್ಕಾರಿ ಬಸ್​ಗಳಲ್ಲೇ ಪ್ರಯಾಣಿಸುವುದರಿಂದ ಖಾಸಗಿ ಬಸ್​​ಗಳಿಗೆ ನಷ್ಟವಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ