AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಂಎ ವಂಚನೆ: ರೋಷನ್​ ಬೇಗ್​ ಆಸ್ತಿ ಜಪ್ತಿಗೆ ಸರ್ಕಾರದ ವಿಳಂಬ, ಹೈಕೋರ್ಟ್​ ತರಾಟೆ

ಲಾಕ್​ಡೌನ್ ಕಾರಣದಿಂದ ಆಸ್ತಿ ಜಪ್ತಿ ಸಾಧ್ಯವಾಗುತ್ತಿಲ್ಲ ಎನ್ನುವ ಸರ್ಕಾರದ ವಾದವನ್ನು ಹೈಕೋರ್ಟ್​ ಒಪ್ಪಲಿಲ್ಲ. ಲಾಕ್​ಡೌನ್​ಗೂ ಆಸ್ತಿ ಜಪ್ತಿ ವಿಳಂಬಕ್ಕೂ ಸಂಬಂಧವಿಲ್ಲ. ಈ ಮಧ್ಯದಲ್ಲಿ ಅವರು ಆಸ್ತಿಗಳನ್ನು ಪರಭಾರೆ ಮಾಡಿದರೆ ಯಾರು ಹೊಣೆ ಎಂದು ಹೈಕೋರ್ಟ್​ ಪ್ರಶ್ನಿಸಿತು.

ಐಎಂಎ ವಂಚನೆ: ರೋಷನ್​ ಬೇಗ್​ ಆಸ್ತಿ ಜಪ್ತಿಗೆ ಸರ್ಕಾರದ ವಿಳಂಬ, ಹೈಕೋರ್ಟ್​ ತರಾಟೆ
ರೋಷನ್ ​ಬೇಗ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 11, 2021 | 11:42 PM

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್.ರೋಷನ್ ಬೇಗ್ ಆಸ್ತಿ ಜಪ್ತಿಗೆ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಹೈಕೋರ್ಟ್​ ತರಾಟೆಗೆ ತೆಗೆದುಕೊಂಡಿತು. ಲಾಕ್​ಡೌನ್ ಕಾರಣದಿಂದ ಆಸ್ತಿ ಜಪ್ತಿ ಸಾಧ್ಯವಾಗುತ್ತಿಲ್ಲ ಎನ್ನುವ ಸರ್ಕಾರದ ವಾದವನ್ನು ಹೈಕೋರ್ಟ್​ ಒಪ್ಪಲಿಲ್ಲ. ಲಾಕ್​ಡೌನ್​ಗೂ ಆಸ್ತಿ ಜಪ್ತಿ ವಿಳಂಬಕ್ಕೂ ಸಂಬಂಧವಿಲ್ಲ. ಈ ಮಧ್ಯದಲ್ಲಿ ಅವರು ಆಸ್ತಿಗಳನ್ನು ಪರಭಾರೆ ಮಾಡಿದರೆ ಯಾರು ಹೊಣೆ ಎಂದು ಹೈಕೋರ್ಟ್​ ಪ್ರಶ್ನಿಸಿತು.

ರಾಜಕಾರಣಿ ಎಂಬ ಕಾರಣಕ್ಕೆ ರೋಷನ್​ ಬೇಗ್ ಆಸ್ತಿ ಜಪ್ತಿಗೆ ಸರ್ಕಾರ ವಿಳಂಬ ಮಾಡುತ್ತಿದೆ ಎಂಬ ಆರೋಪವಿದೆ. ಆಸ್ತಿ ಜಪ್ತಿಗೆ ಸಂಬಂಧಿಸಿದಂತೆ ಶೀಘ್ರ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರೂ ಈವರೆಗೆ ಕ್ರಮಕೈಗೊಂಡಿಲ್ಲ. ರಾಜ್ಯ ಸರ್ಕಾರದ ನೀತಿಗೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿತು. ಒಂದು ವಾರದಲ್ಲಿ ಜಪ್ತಿಗೆ ಕ್ರಮ ಕೈಗೊಳ್ಳಿ ಎಂದು ಆದೇಶ ನೀಡಿತು.

ರೋಷನ್ ಬೇಗ್ ವಿರುದ್ಧ ಈಗಾಗಲೇ ಆರೋಪಪಟ್ಟಿ ದಾಖಲಿಸಲಾಗಿದೆ. ಐಎಂಎ ಪ್ರಕರಣದಲ್ಲಿ ಸಿಬಿಐ ತನಿಖೆಯೂ ಮುಕ್ತಾಯವಾಗಿದೆ. IPS ಅಧಿಕಾರಿಗಳ ವಿರುದ್ಧ ಪೂರ್ವಾನುಮತಿ ಬಗ್ಗೆಯೂ ಶೀಘ್ರ ಕ್ರಮಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

(Karnataka High Court Directs Govt to Attach Roshan Baig Property in IMA Case)

ಇದನ್ನೂ ಓದಿ: Karnataka High Court: ವಿಶೇಷ ಚೇತನರಿಗೆ ಲಸಿಕೆ ವಿತರಣೆಗೆ ಇನ್ನಷ್ಟು ವೇಗ ನೀಡುವಂತೆ ಸರ್ಕಾರಕ್ಕೆ ತಾಕೀತು ಮಾಡಿದ ಹೈಕೋರ್ಟ್

ಇದನ್ನೂ ಓದಿ: ಐಎಂಎ ಬಹುಕೋಟಿ ಹಗರಣ: ರೋಷನ್ ಬೇಗ್ ವಿರುದ್ಧದ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ

Published On - 11:41 pm, Fri, 11 June 21

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ