ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ಕೆಲ ಆರೋಪಿಗಳನ್ನು ಇನ್ನೂ ಬಂಧಿಸದ ಬಗ್ಗೆ ವರದಿ ಸಲ್ಲಿಕೆಗೆ ಹೈಕೋರ್ಟ್ ಸೂಚನೆ

ಕ್ಲೇಮ್‌ ಕಮಿಷನ್ ಕಾರ್ಯದರ್ಶಿ ವೇತನ ನೀಡಿಲ್ಲ. ಬಾಕಿ ವೇತನ 2 ವಾರದಲ್ಲಿ ಬಿಡುಗಡೆಗೊಳಿಸಬೇಕು. ಆಯಾ ತಿಂಗಳ ವೇತನ ವಿಳಂಬಿಸದೇ ನೀಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ಕೆಲ ಆರೋಪಿಗಳನ್ನು ಇನ್ನೂ ಬಂಧಿಸದ ಬಗ್ಗೆ ವರದಿ ಸಲ್ಲಿಕೆಗೆ ಹೈಕೋರ್ಟ್ ಸೂಚನೆ
ಕರ್ನಾಟಕ ಹೈಕೋರ್ಟ್​
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 09, 2021 | 7:24 PM

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಉಂಟಾದ ನಷ್ಟ ಅಂದಾಜಿಸಲು ಪರಿಹಾರ ಕೋರಿ ಬಂದ ಮನವಿಗಳ ಬಗ್ಗೆ ವರದಿಗೆ ಕ್ಲೇಮ್ ಕಮಿಷನ್​ ಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ ನೀಡಿದೆ. ಕಮಿಷನ್‌ನಿಂದ ಹೆಚ್ಚುವರಿ ವಾಹನಗಳಿಗೆ ಬೇಡಿಕೆ ಇಡಲಾಗಿದ್ದು, ಈ ಮನವಿಗೆ ಸರ್ಕಾರ ಈವರೆಗೆ ಸ್ಪಂದಿಸಿಲ್ಲ. ಕ್ಲೇಮ್‌ ಕಮಿಷನ್ ಕಾರ್ಯದರ್ಶಿ ವೇತನ ನೀಡಿಲ್ಲ. ಬಾಕಿ ವೇತನವನ್ನು 2 ವಾರದಲ್ಲಿ ಬಿಡುಗಡೆಗೊಳಿಸಬೇಕು. ಆಯಾ ತಿಂಗಳ ವೇತನ ವಿಳಂಬಿಸದೇ ನೀಡಬೇಕು. ಪ್ರಕರಣದ ಕೆಲ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ಬಗ್ಗೆ ವರದಿ ಸಲ್ಲಿಸಿ ಎಂದು ಎನ್ಐಎಗೆ ಹೈಕೋರ್ಟ್ ಸೂಚನೆ ನೀಡಿದೆ.

ಘಟನೆಯ ಹಿನ್ನೆಲೆ ‘ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಲಾಗಿದೆ’ ಎಂದು ಆರೋಪಿಸಿ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ 2020ರ ಆಗಸ್ಟ್​ 10ರಂದು ವಾಹನಗಳಿಗೆ ಬೆಂಕಿಹಚ್ಚಿ, ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆಯೂ ಕೆಲವರು ದಾಳಿ ಮಾಡಿದ್ದರು.

ಪೊಲೀಸರ ಗುಂಡೇಟಿಗೆ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದರು. ಅವಹೇಳನಕಾರಿ ಪೋಸ್ಟ್ ಹಾಕಿದ್ದ ಎನ್ನಲಾದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಘಟನೆಗೆ ಸಂಬಂಧಿಸಿದಂತೆ 111 ಜನರನ್ನು ಪೊಲೀಸರು ಬಂಧಿಸಿದ್ದರು. ಹಿಂಸಾಚಾರದಲ್ಲಿ 500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು.

ಇದನ್ನೂ ಓದಿ: 

ನಮ್ಮ ಪ್ರಜಾಪ್ರಭುತ್ವ ರಾಷ್ಟ್ರ ಆಳಲ್ಪಡುತ್ತಿರುವುದು ಕಾನೂನುಗಳಿಂದ ಹೊರತು ಶಾಸ್ತ್ರಗಳಿಂದಲ್ಲ: ಉತ್ತರಾಖಂಡ ಹೈಕೋರ್ಟ್​

ಐಎಂಎ ಬಹುಕೋಟಿ ವಂಚನೆ ಪ್ರಕರಣ: ಕರ್ನಾಟಕ ಸರ್ಕಾರದಿಂದ ರೋಷನ್ ಬೇಗ್ ಆಸ್ತಿ ಜಪ್ತಿ; ವಿಳಂಬಕ್ಕೆ ಹೈಕೋರ್ಟ್ ಆಕ್ಷೇಪ

(Karnataka High Court directs to submit report on DJ Halli KG Halli riot case)