ರಿಜ್ವಾನ್ ಅರ್ಷದ್ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ

ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಜ್ವಾನ್​ ಅರ್ಷದ್​ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಂಪಂಗಿ ರಾಮನಗರದ ಬಿ.ಲಕ್ಷ್ಮಿದೇವಿ ಎಂಬುವರು ಅರ್ಜಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ​ ವಜಾಗೊಳಿಸಿದೆ.

ರಿಜ್ವಾನ್ ಅರ್ಷದ್ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ
ಶಾಸಕ ರಿಜ್ವಾನ್ ಅರ್ಷದ್
Follow us
Ramesha M
| Updated By: ವಿವೇಕ ಬಿರಾದಾರ

Updated on:Mar 26, 2024 | 1:05 PM

ಬೆಂಗಳೂರು, ಮಾರ್ಚ್​​ 26: ಶಿವಾಜಿನಗರ ಕಾಂಗ್ರೆಸ್ (Congress)​ ಶಾಸಕ ರಿಜ್ವಾನ್ ಅರ್ಷದ್ (Rizwan Arshad) ವಿರುದ್ಧದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ (High Court)​ ವಜಾಗೊಳಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಜ್ವಾನ್​ ಅರ್ಷದ್​ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಹೈಕೋರ್ಟ್​​ಗೆ ಸಂಪಂಗಿ ರಾಮನಗರದ ಬಿ.ಲಕ್ಷ್ಮಿದೇವಿ ಎಂಬುವರು ಅರ್ಜಿ ಸಲ್ಲಿಸಿದ್ದರು.

ಅಲ್ಲದೆ ಕಾಂಗ್ರೆಸ್​ ಗ್ಯಾರೆಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿದೆ. ಇದು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್​ 123 (1) ಪ್ರಕಾರ ಮತ್ತು ಸೆಕ್ಷನ್​​ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್​ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವೂದು ಅಪರಾಧವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ:  ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ!

ಶಾಸಕ ರಿಜ್ವಾನ್​ ಅರ್ಷದ್​ ಪರ ವಕೀಲ: ಚುನಾವಣಾ ಪ್ರಣಾಳಿಕೆಯನ್ನು ಅಭ್ಯರ್ಥಿಯ ಅಕ್ರಮವೆಂದು ಪರಿಗಣಿಸಬಾರದು. ಮತ್ತು ಚುನಾವಣಾ ಅಕ್ರಮಕ್ಕೆ ಸಾಕ್ಷ್ಯವಿಲ್ಲ. ಹೀಗಾಗಿ ಅರ್ಜಿ ವಜಾಗೊಳಿಸಬೇಕೆಂದು ರಿಜ್ವಾನ್ ಅರ್ಷದ್ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದಿಸಿದ್ದರು.

ವಾದ-ಪ್ರತಿವಾದವನ್ನು ಆಲಿಸಿದ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ​ಚುನಾವಣಾ ಅಕ್ರಮಕ್ಕೆ ಪೂರಕ ಸಾಕ್ಷ್ಯ ನೀಡಿಲ್ಲವೆಂದು ಅರ್ಜಿ ವಜಾಗೊಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:53 pm, Tue, 26 March 24

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ