ಬೆಂಗಳೂರು, ಮಾರ್ಚ್ 26: ಶಿವಾಜಿನಗರ ಕಾಂಗ್ರೆಸ್ (Congress) ಶಾಸಕ ರಿಜ್ವಾನ್ ಅರ್ಷದ್ (Rizwan Arshad) ವಿರುದ್ಧದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ (High Court) ವಜಾಗೊಳಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಂಪಂಗಿ ರಾಮನಗರದ ಬಿ.ಲಕ್ಷ್ಮಿದೇವಿ ಎಂಬುವರು ಅರ್ಜಿ ಸಲ್ಲಿಸಿದ್ದರು.
ಅಲ್ಲದೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿದೆ. ಇದು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವೂದು ಅಪರಾಧವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಇದನ್ನೂ ಓದಿ: ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ!
ಶಾಸಕ ರಿಜ್ವಾನ್ ಅರ್ಷದ್ ಪರ ವಕೀಲ: ಚುನಾವಣಾ ಪ್ರಣಾಳಿಕೆಯನ್ನು ಅಭ್ಯರ್ಥಿಯ ಅಕ್ರಮವೆಂದು ಪರಿಗಣಿಸಬಾರದು. ಮತ್ತು ಚುನಾವಣಾ ಅಕ್ರಮಕ್ಕೆ ಸಾಕ್ಷ್ಯವಿಲ್ಲ. ಹೀಗಾಗಿ ಅರ್ಜಿ ವಜಾಗೊಳಿಸಬೇಕೆಂದು ರಿಜ್ವಾನ್ ಅರ್ಷದ್ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದಿಸಿದ್ದರು.
ವಾದ-ಪ್ರತಿವಾದವನ್ನು ಆಲಿಸಿದ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ಚುನಾವಣಾ ಅಕ್ರಮಕ್ಕೆ ಪೂರಕ ಸಾಕ್ಷ್ಯ ನೀಡಿಲ್ಲವೆಂದು ಅರ್ಜಿ ವಜಾಗೊಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:53 pm, Tue, 26 March 24