AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಣಿ ಸಿಂಧೂರಿ ಮಾನಹಾನಿ ಕೇಸ್: ಡಿ.ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಐಪಿಎಸ್ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್​ ರೋಹಿಣಿ ಸಿಂಧೂರಿ ಅವರು ಮಾನಹಾನಿ ಪ್ರಕರಣ ದಾಖಲಿಸಿದ್ದರು. ಇದನ್ನು ರದ್ದು ಕೋರಿ ಡಿ.ರೂಪ ಅವರು ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ನಿರಾಕರಿಸಿದೆ.

ರೋಹಿಣಿ ಸಿಂಧೂರಿ ಮಾನಹಾನಿ ಕೇಸ್: ಡಿ.ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಡಿ.ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ
ರಮೇಶ್​ ಎಮ್​.
| Edited By: Rakesh Nayak Manchi|

Updated on: Aug 21, 2023 | 6:26 PM

Share

ಬೆಂಗಳೂರು, ಆಗಸ್ಟ್ 21: ತನ್ನ ವಿರುದ್ಧ ಐಎಎಸ್ ರೋಹಿಣಿ ಸಿಂಧೂರಿ (Rohini Sindhuri) ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ರದ್ದು ಕೋರಿ ಐಪಿಎಸ್ ಡಿ.ರೂಪಾ ಮೌದ್ಗಿಲ್ (D.Roopa Moudgil) ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ರದ್ದುಗೊಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ತನ್ನ ಬಗ್ಗೆ ಮಾನಹಾನಿಕರ ಪೋಸ್ಟ್ ಹಂಚಿಕೊಂಡಿದ್ದ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದ ಹಿನ್ನೆಲೆ ರೂಪಾ ವಿರುದ್ಧ ರೋಹಿನಿ ಸಿಂಧೂರಿ ಕಾನೂನು ಹೋರಾಟ ನಡೆಸುತ್ತಿದ್ದು, ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಕೋರ್ಟ್ ರೂಪಾ ಅವರಿಗೆ ಸಮನ್ಸ್​​ ಜಾರಿಗೊಳಿಸಿತ್ತು.

ಅದರಂತೆ ಕೋರ್ಟ್​​​ಗೆ ಹಾಜರಾಗಿದ್ದ ರೂಪಾ ಜಾಮೀನು ಪಡೆದಿದ್ದರು. ಅಲ್ಲದೆ, ಮಾನಹಾನಿ ಪ್ರಕರಣ ರದ್ದುಗೊಳಿಸುವಂತೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅವರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.

ಇದನ್ನೂ ಓದಿ: ಮತ್ತೊಂದು ಕೇಸ್​ನಲ್ಲೂ ಉಪೇಂದ್ರಗೆ ರಿಲೀಫ್​; ಎರಡನೇ ಎಫ್​ಐಆರ್​​ಗೂ ತಡೆ ನೀಡಿದ‌ ಹೈಕೋರ್ಟ್

ರೋಹಿಣಿ ಸಿಂಧೂರಿ ಮತ್ತು ರೂಪಾ ನಡುವೆ ವಾಕ್ಸಮರ, ಆರೋಪ ಪ್ರತ್ಯಾರೋಗಳು ನಡೆಯುತ್ತಿದ್ದವು. ಅದರಂತೆ, ರೋಹಿಣಿ ಸಿಂಧೂರಿ ವಿರುದ್ಧ​​ ಡಿ.ರೂಪಾ ಅವರು 19 ಆರೋಪ ಪಟ್ಟಿ ಬಿಡುಗಡೆ ಮಾಡಿದ್ದರು. ಶಾಸಕ ಸಾ.ರಾ.ಮಹೇಶ್ ಬಳಿ ರೋಹಿಣಿ ಸಂಧಾನಕ್ಕೆ ಹೋಗಿದ್ದು, ಡಿಕೆ ರವಿ ಆತ್ಮಹತ್ಯೆ ಪ್ರಕರಣ, ಚಾಮರಾಜನಗರ ಆಕ್ಸಿಜನ್ ದುರಂತ, ಐಎಎಸ್ ಅಧಿಕಾರಿಗಳಾದ ಶಿಲ್ಪಾ ನಾಗ್, ಹರ್ಷ ಗುಪ್ತ, ಮಣಿವಣ್ಣನ್, ಜೊತೆಗಿನ ಜಗಳ ಸೇರಿದಂತೆ ಅನೇಕ ವಿಚಾರಗಳನ್ನು ಕೆದಕಿದ್ದರು.

ರೂಪಾ ಅವರ ಆರೋಪಗಳ ಪ್ರತಿಯಾಗಿ ರೋಹಿಣಿ ಸಿಂಧೂರಿ ಅಭಿಮಾನಿಗಳು ರೂಪಾ ಅವರಿಗೆ ಒಂಬತ್ತು ಪ್ರಶ್ನೆಗಳನ್ನು ಮುಂದಿಟ್ಟು ಉತ್ತರಿಸುವಂತೆ ಸವಾಲೆಸೆದಿದ್ದರು. ಅಲ್ಲದೆ, ಸ್ವತಃ ರೋಹಿಣಿ ಅವರ ಪತಿ ಸುಧೀರ್​ ರೆಡ್ಡಿ ಆಕ್ರೋಶ ಹೊರಹಾಕಿದ್ದರು. ನಮ್ಮ ಕುಟುಂಬದ ಬಗ್ಗೆ ಅನಗತ್ಯವಾಗಿ ಮಾತನಾಡುವುದು ಸರಿಯಲ್ಲ. ರೋಹಿಣಿ ಸಿಂಧೂರಿ ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿಲ್ಲ. ಫೋಟೋಗಳನ್ನು ಅವರು ಹ್ಯಾಕ್ ಮಾಡಿ ತೆಗೆದುಕೊಂಡಿರಬಹುದು. ರೋಹಿಣಿ ಸಿಂಧೂರಿ ಯಾರಿಗೆ ಫೋಟೋ ಕಳಿಸಿದ್ದಾರೆ ಹೆಸರು ಹೇಳಿ. ನನ್ನ ತಂದೆ ಕಾಲದಿಂದಲೂ ರಿಯಲ್ ಎಸ್ಟೇಟ್​​​ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ