ಒಂದೆಡೆ ತನಿಖೆ ಬೇಕೆನ್ನುತ್ತೀರಿ,ಈಗ FIR ರದ್ದು ಕೋರುತ್ತಿದ್ದೀರಿ: ಬುರುಡೆ ಗ್ಯಾಂಗ್ನ ಮಟ್ಟಣ್ಣನವರ್ಗೆ ಕೋರ್ಟ್ ತಪರಾಕಿ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಅದರಂತೆ ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿ ತಂಡ ತನಿಖೆ ಚುರುಕುಗೊಳಿಸಿದೆ. ಈಗಾಗಲೇ ಪ್ರಕರಣ ಹಿಂದಿನ ತನಿಖಾಧಿಕಾರಿಗಳು ವಿಚಾರಣೆ ಮಾಡಿ ಮಹತ್ವದ ಮಾಹಿತಿ ಕಲೆಹಾಕಿದೆ. ಇದಕ್ಕೂ ಮೊದಲ ಬುರುಡೆ ಪ್ರಕರಣ ಭಾರೀ ಸುದ್ದು ಮಾಡಿದ್ದು, ಇದಕ್ಕೆ ಇದೀಗ ಕೋರ್ಟ್ ಚಾಟಿ ಬೀಸಿದೆ.

ಬೆಂಗಳೂರು, (ನವೆಂಬರ್ 19): ಭಾರೀ ಸದ್ಧು ಮಾಡಿದ್ದ ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಯ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ತಮ್ಮ ವಿರುದ್ಧದ ಎಸ್ಐಟಿ ತನಿಖೆ ರದ್ದು ಕೋರಿ ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಇಂದು (ನವೆಂಬರ್ 19) ಆದೇಶ ಹೊರಡಿಸಿದೆ. ಒಂದೆಡೆ ತನಿಖೆ ಬೇಕೆನ್ನುತ್ತೀರಿ, ಈಗ ಎಫ್ಐಆರ್ ರದ್ದು ಕೋರುತ್ತಿದ್ದೀರಿ. ಈ ಹಂತದಲ್ಲಿ ತನಿಖೆಯಲ್ಲಿ ಮಧ್ಯಪ್ರವೇಶವಿಲ್ಲವೆಂದು ಎಂದು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಚಾಟಿ ಬೀಸಿ ಅರ್ಜಿಯನ್ನು ವಜಾಗೊಳಿಸಿದೆ.
ಬುರುಡೆ ಪ್ರಕರಣ ತನಿಖೆಯು ತಮ್ಮ ವಿರುದ್ಧವೇ ತಿರುಗುತ್ತಿರುವ ಹಿನ್ನೆಲೆ, ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಗಿರೀಶ್ ಮಟ್ಟಣ್ಣ 2025ರ ನವೆಂಬರ್‌ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಅಂದು ನ್ಯಾಯಾಲಯವು ಪ್ರಕರಣವನ್ನು ರದ್ದುಪಡಿಸದೆ, ತನಿಖೆಯ ವೇಳೆ ಅರ್ಜಿದಾರರಿಗೆ ಕಿರುಕುಳ ನೀಡದಂತೆ SITಗೆ ಸೂಚಿಸಿತ್ತು ಹಾಗೂ ಈ ಹಿಂದೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿತ್ತು. ಇದೀಗ ಇದೇ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಮತ್ತೆ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನ ಉಚ್ಚ ನ್ಯಾಯಾಲಯವು ಸಂಪೂರ್ಣವಾಗಿ ವಜಾಗೊಳಿಸಿದೆ.
ಇದನ್ನು ಓದಿ: ಧರ್ಮಸ್ಥಳ ಬಳಿ ಶವ ಹೂತ ಪ್ರಕರಣ: DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!
ಪ್ರಕರಣದ ಹಿನ್ನೆಲೆ
ಧರ್ಮಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪದೊಂದಿಗೆ ಮುಸುಕುಧಾರಿ ಚಿನ್ನಯ್ಯ ನೀಡಿದ್ದ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಈ ಪ್ರಕರಣದ ಗಂಭೀರತೆಯನ್ನ ಪರಿಗಣಿಸಿದ ರಾಜ್ಯ ಸರ್ಕಾರ, ಸಮಗ್ರ ತನಿಖೆಗಾಗಿ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ ಇಡೀ ಧರ್ಮಸ್ಥಳದ ಸುತ್ತಮುತ್ತ ಪ್ರದೇಶದಲ್ಲಿ ಭೂಮಿ ಅಗೆದು ಹುಡುಕಾಡಿತ್ತು. ಚಿನ್ನಯ್ಯ ತೋರಿಸಿದ ಸ್ಥಳಗಳಲ್ಲಿ ಶೋಧ ಮತ್ತು ಉತ್ಖನನ ನಡೆಸಿ ಕೆಲವೆಡೆ ಮೂಳೆಗಳು ಹಾಗೂ ತಲೆಬುರುಡೆಗಳನ್ನು ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿತ್ತು. ನ್ಯಾಯಾಲಯದ ಮುಂದೆ ನೀಡಿದ ಹೇಳಿಕೆ ಮತ್ತು ಸಲ್ಲಿಸಿದ ಅವಶೇಷಗಳಿಗೆ ಸಂಬಂಧಿಸಿದಂತೆ ವಿಧಿವಿಜ್ಞಾನ ವರದಿಗಳು ವ್ಯತಿರಿಕ್ತವಾದ ಹಿನ್ನೆಲೆಯಲ್ಲಿ, ಆಗಸ್ಟ್ 2025ರಲ್ಲಿ ದೂರುದಾರ ಚಿನ್ನಯ್ಯನನ್ನು ಸುಳ್ಳು ಸಾಕ್ಷ್ಯ/ಪ್ರಮಾಣವಚನದ ಆರೋಪದ ಮೇಲೆ SIT ಬಂಧಿಸಿತ್ತು. ಬಳಿಕ ವಿಚಾರNeಗೊಳಪಡಿಸಿದಾಗ ಇದರ ಇದರ ಹಿಂದೆ ದೊಡ್ಡ ಬುರುಡೆ ಗ್ಯಾಂಗ್ ಇರುವುದು ಪತ್ತೆಯಾಗಿದ್ದು, ಈ ಗ್ಯಾಂಗ್ ಸೇರಿಕೊಂಡು ಈ ಬುರುಡೆ ಕಥೆ ಕಟ್ಟಿತ್ತು.
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಹಿಂದೆ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಅಂಶ ತನಿಖೆಯಲ್ಲಿ ಬಯಲಾಗಿರುವುದಾಗಿ SIT ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದೆ. ಈ ಸಂಬಂಧ ಚಿನ್ನಯ್ಯ ಅಲಿಯಾಸ್ ಚಿನ್ನ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣ, ಜಯಂತ್ ಟಿ., ವಿಠಲ ಗೌಡ ಹಾಗೂ ಸುಜಾತಾ ಭಟ್ ಸೇರಿದಂತೆ ಒಟ್ಟು 6 ಮಂದಿಯ ವಿರುದ್ಧ ಸುಳ್ಳು ಸಾಕ್ಷ್ಯ ಸೃಷ್ಟಿ, ನಕಲಿ ದಾಖಲೆ ತಯಾರಿಕೆ ಹಾಗೂ ಇತರ ಅಪರಾಧಗಳಿಗೆ ಸಂಬಂಧಿಸಿದಂತೆ SIT ವರದಿಯಲ್ಲಿ ಗಂಭೀರ ಆರೋಪಗಳನ್ನು ಪ್ರಸ್ತಾಪಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:07 pm, Thu, 19 November 26




