ಪ್ರಜ್ವಲ್ ರೇವಣ್ಣನ 4ನೇ ಪ್ರಕರಣದ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಹೈಕೋರ್ಟ್ನಲ್ಲಿ ನಿರಾಸೆಯಾಗಿದೆ. ಅವರು ಸಲ್ಲಿಸಿದ್ದ ಎಲ್ಲಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು, (ನವೆಂಬರ್ 22): ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದಲ್ಲಿ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದ ಜಾಮೀನು ಅರ್ಜಿಯನ್ನು ಸಹ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಮೂರು ಅತ್ಯಾಚಾರ ಕೇಸ್, ಒಂದು ಅಶ್ಲೀಲ ದೃಶ್ಯ ಪ್ರಕರಣದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿತ್ತು. ಆದ್ರೆ ನಾಲ್ಕನೆ ಪ್ರಕರಣದ ಜಾಮೀನಿ ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು(ನವೆಂಬರ್ 22) ಹೈಕೋರ್ಟ್, ಪ್ರಜ್ವಲ್ ರೇವಣ್ಣ ವಿರುದ್ಧ 4ನೇ ಪ್ರಕರಣ ಜಾಮೀನು ಅರ್ಜಿಯನ್ನು ಸಹ ವಜಾಗೊಳಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ, ಜಾಮೀನು ಅರ್ಜಿ ವಜಾ
ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (Special Investigation Team) ಆಗಸ್ಟ್ನಲ್ಲಿ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್ನಲ್ಲಿ ಕಸರತ್ತು ನಡೆಸಿದ್ದರು. ಆದ್ರೆ, ಅದು ಸಾಧ್ಯವಾಗಿಲ್ಲ, ಈಗ ಹೈಕೋರ್ಟ್ ಸಹ ನಾಲ್ಕಕ್ಕೆ ನಾಲ್ಕು ಪ್ರಕರಣದ ಜಾಮೀನು ಅರ್ಜಿಯನ್ನು ತಿರಸ್ಕೃತ ಮಾಡಿದೆ. ಹೀಗಾಗಿ ಪ್ರಜ್ವಲ್ಗೆ ನಿರಾಸೆಯಾಗಿದೆ.
ಸುಪ್ರಿಂಕೋರ್ಟ್ನಲ್ಲೂ ಸಹ ಜಾಮೀನು ಅರ್ಜಿ ವಜಾ
ನವೆಂಬರ್ 11ರಂದು ಸುಪ್ರೀಂಕೋರ್ಟ್ನಲ್ಲೂ ಸಹ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು, ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಪರ ವಕೀಲರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಅವರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದಿ ಮಂಡಿಸಿದ್ದರು. ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನೀಡುವಂತೆ ಮನವಿ ಮಾಡಿದ್ದರು.
ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು, ಈ ವೇಳೆ ನನಗೆ ಡ್ಯಾಮೇಜ್ ಮಾಡಲು ಆರೋಪ ಮಾಡಲಾಗಿದೆ. ಹೀಗಾಗಿ, ನನ್ನ ಕಕ್ಷಿದಾರರಿಗೆ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಆದರೆ, ನ್ಯಾಯಪೀಠ ಮುಕುಲ್ ರೋಹ್ಟಗಿ ವಾದ ಒಪ್ಪದೆ, ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದಾನೆ ಎಂದು ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:26 pm, Fri, 22 November 24