AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರವನ್ನ ಸಂಶಯಿಸುವ ಅಗತ್ಯವಿಲ್ಲ: ಗ್ಯಾಸ್ ಸಿಲಿಂಡರ್ ರಿಟ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಇಸ್ರೆಲ್ ಇರಾನ್ ನಡುವಿನ ಯುದ್ಧದ ಪರಿಣಾಮ ಭಾರತದ ಗ್ಯಾಸ್ ಸಿಲಿಂಡರ್​ ಮೇಲೆ ಪರಿಣಾಮ ಬೀರಿದ್ದು, ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವದಿಂದ ಬೆಂಗಳೂರು ಹೋಟೆಲ್ ಉದ್ಯಮ ನಷ್ಟ ಅನುಭವಿಸುತ್ತಿದೆ. ಹಲವು ಹೋಟೆಲ್‌ಗಳು ಬಂದ್ ಆಗಿದ್ದರೆ, ಕೆಲವು ಮೆನು ಕಡಿತಗೊಳಿಸಿವೆ. ಈ ಬಿಕ್ಕಟ್ಟಿಗೆ ಪರಿಹಾರ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಇತ್ಯರ್ಥಪಡಿಸಿದೆ. ಹಾಗಾದ್ರೆ, ಗ್ಯಾಸ್ ಸಿಲಿಂಡರ್ ಬಗ್ಗೆ ಹೈಕೋರ್ಟ್ ಹೇಳಿದ್ದೇನು ಎನ್ನುವ ವಿವರ ಈ ಕೆಳಗಿನಂತಿದೆ.

ಕೇಂದ್ರ ಸರ್ಕಾರವನ್ನ ಸಂಶಯಿಸುವ ಅಗತ್ಯವಿಲ್ಲ: ಗ್ಯಾಸ್ ಸಿಲಿಂಡರ್ ರಿಟ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್
Gas Cylinder Issue
ರಮೇಶ್​ ಎಮ್​.
| Edited By: |

Updated on: Mar 23, 2026 | 4:02 PM

Share

ಬೆಂಗಳೂರು, (ಮಾರ್ಚ್ 23): ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ (bangalore hotel association) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court)​ ಇತ್ಯರ್ಥಗೊಳಿಸಿದೆ. ಇಂದು (ಮಾರ್ಚ್ 23) ಹೋಟೆಲ್ ಅಸೋಸಿಯೇಷನ್​ ಹಾಗೂ ಕೇಂದ್ರ ಸರ್ಕಾರದ ಪರ ವಾದ ಆಲಿಸಿ ರಿಟ್ ಅರ್ಜಿ ಇತ್ಯರ್ಥಪಡಿಸಿದೆ. ಎಲ್‌ಪಿಜಿ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡಿರುವ ಹೇಳಿಕೆಯನ್ನು ಸಂಶಯಿಸುವ ಅಗತ್ಯವಿಲ್. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

ವಾದ ಪ್ರತಿವಾದ

ತಮಿಳುನಾಡಿನಲ್ಲಿ 8500, ಕೇರಳದಲ್ಲಿ 4200 ಸಿಲಿಂಡರ್ ನೀಡಲಾಗುತ್ತಿದೆ. ಆದ್ರೆ, ಕರ್ನಾಟಕದಲ್ಲಿ ಹೋಟೆಲ್ ಗಳಿಗೆ ಕೇವಲ 1000 ಮಾತ್ರ ನೀಡುತ್ತಿದ್ದಾರೆ. ಸರ್ಕಾರ ಸಿಲಿಂಡರ್ ವಿತರಣೆ ಮಾರ್ಗಸೂಚಿ ಪಾಲಿಸುತ್ತಿಲ್ಲ ಎಂದು ಹೋಟೆಲ್ ಅಸೋಸಿಯೇಷನ್ ಪರ ವಕೀಲ ಕೆ.ಸತೀಶ್ ಭಟ್ ವಾದ ಮಂಡಿಸಿದರು.

ಇನ್ನು ಇದಕ್ಕೆ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿ, ಕೇಂದ್ರ ಸರ್ಕಾರ ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆ ನಡೆಸುತ್ತಿದೆ. ತೈಲ, ಅನಿಲ ಪೂರೈಕೆ ಸಂಪೂರ್ಣವಾಗಿ ನಮ್ಮ ನಿಯಂತ್ರಣದಲ್ಲಿಲ್ಲ. ಎಲ್‌ಪಿಜಿ, ತೈಲ ಪೂರೈಕೆ ಪರಿಸ್ಥಿತಿ ಪ್ರತಿದಿನವೂ ಬದಲಾಗುತ್ತಿದೆ. ಎಲ್‌ಪಿಜಿ ಹಂಚಿಕೆ ಸುಧಾರಿಸಲು ಸರ್ಕಾರ ಎಲ್ಲ ಹಂತದ ಪ್ರಯತ್ನ ಮಾಡುತ್ತಿದೆ. ಸರ್ಕಾರವೂ ಕಳಕಳಿಯಿಂದ ಕೆಲಸ ಮಾಡುತ್ತಿದೆ. ಈ ಬಗ್ಗೆ ನಂಬಿಕೆ ಇರಲಿ ಎಂದು ವಾದ ಮಂಡಿಸಿದರು.

ಇದನ್ನೂ ಓದಿ: ಗ್ಯಾಸ್ ಸಿಲಿಂಡರ್​​ಗಾಗಿ ಹೈಕೋರ್ಟ್​​ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್: ರಿಟ್​​ ಅರ್ಜಿ ಸಲ್ಲಿಕೆ

ಹರ್ಮುಜ್ ಗೆ ಹೋಟೆಲ್ ಸಂಘದ ಹಡಗು ಕಳುಹಿಸಿದರೂ LPG ತರಲು ಸಾಧ್ಯವೇ?

ನಮ್ಮ ದೇಶದಲ್ಲಿ ಕಚ್ಚಾತೈಲ, ಎಲ್‌ಪಿಜಿ ಉತ್ಪಾದನೆಯಾಗುತ್ತಿಲ್ಲ. ಹರ್ಮುಜ್ ಗೆ ಹೋಟೆಲ್ ಅಸೋಸಿಯೋಷನ್ ನ ಹಡಗು ಕಳುಹಿಸಿದರೂ ಎಲ್‌ಪಿಜಿ ತರಲು ಸಾಧ್ಯವೇ?  ಬೇರೆ ದೇಶಗಳಿಗೆ ಹೋಲಿಸಿದರೆ ಇಲ್ಲಿನ ಪರಿಸ್ಥಿತಿ ಉತ್ತಮವಾಗಿದೆ. ಯುದ್ಧದ ಸ್ಥಿತಿಯಿರುವಾಗ ಕೋರ್ಟ್ ಈ ಬಗ್ಗೆ ಹಸ್ತಕ್ಷೇಪ ಮಾಡಲಾಗುವುದಿಲ್ಲ ಎಂದು ಹೈಕೋರ್ಟ್, ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅಭಿಪ್ರಾಯಪಟ್ಟಿದೆ. ಈ ಮೂಲಕ ಗ್ಯಾಸ್ ಸಿಲಿಂಡರ್​​ ಬಗ್ಗೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ.

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್