AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ: ಪಿಐಎಲ್ ಇತ್ಯರ್ಥಗೊಳಿಸಿದ ಹೈಕೋರ್ಟ್

ಬೆಂಗಳೂರಿನ ಕೃಪಾನಿಧಿ ಕಾಲೇಜು ಕೇಂದ್ರದಲ್ಲಿ ಸಿಇಟಿ (CET) ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ನಡೆದಿದ್ದು, ಇದು ರಾಜಕೀಯ ಸ್ವರೂಪ ಪಡೆದುಕೊಂಡು ಭಾರೀ ಸಂಚಲನ ಮೂಡಿಸಿತ್ತು. ಅಲ್ಲದೇ ಈ ಪ್ರಕರಣ ಹೈಕೋರ್ಟ್​ ಅಂಗಳಕ್ಕೂ ಹೋಗಿತ್ತು. ಆದ್ರೆ, ಇದೀಗ ಹೈಕೋರ್ಟ್, ಕೆಇಎಗೆ ಮಹತ್ವದ ಸಲಹೆ ಸೂಚನೆಗಳನ್ನು ನೀಡಿ ಪ್ರಕರಣವನ್ನು ಇತ್ಯರ್ಥಪಡಿಸಿದೆ.

ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ:  ಪಿಐಎಲ್ ಇತ್ಯರ್ಥಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
ರಮೇಶ್​ ಎಮ್​.
| Edited By: |

Updated on: Nov 16, 2026 | 3:11 PM

Share

ಬೆಂಗಳೂರು, ನವೆಂಬರ್ 16: ಸಿಇಟಿ (CET) ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣವನ್ನು ಹೈಕೋರ್ಟ್ ಇತ್ಯರ್ಥಗೊಳಿಸಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ವೇಳೆ ಬೆಂಗಳೂರಿನ ಕೃಪಾನಿಧಿ ಕಾಲೇಜು ಸೇರಿ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಸಂಬಂಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಪಿಐಎಲ್ ಗೆ ಕೆಇಎ ಸಲ್ಲಿಸಿದ ಲಿಖಿತ ಹೇಳಿಕೆ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್, ಇಂದು (ನವೆಂಬರ್ 16) ಇತ್ಯರ್ಥ ಮಾಡಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಕೆಇಎ, ಜನಿವಾರ ತೆಗೆಸುವಂತೆ ಯಾವುದೇ ಸೂಚನೆ ನೀಡಲಾಗಿಲ್ಲ. ಘಟನೆ ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತಗಳಿಗೂ ಅಗತ್ಯ ಸೂಚನೆಗಳನ್ನು ಒದಗಿಸಲಾಗಿದೆ. ಮಾನವ ಹಕ್ಕುಗಳ ಆಯೋಗಕ್ಕೂ ವರದಿ ಸಲ್ಲಿಸಲಾಗಿದೆ. ಮಕ್ಕಳ ಹಕ್ಕು ರಕ್ಷಣಾ ಆಯೋಗಕ್ಕೂ ಕೈಗೊಂಡ ಕ್ರಮ ಮಾಹಿತಿ ನೀಡಲಾಗಿದೆ ಎಂದು ಮಾಹಿತಿ ನೀಡಿದೆ. ಈ ಹೇಳಿಕೆ ಮಾಹಿತಿ ದಾಖಲಿಸಿಕೊಂಡ ಹೈಕೋರ್ಟ್, ಸುವ್ಯವಸ್ಥಿತ, ಏಕರೂಪ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿ ಪಿಐಎಲ್ ಇತ್ಯರ್ಥ ಮಾಡಿದೆ.

ಇದನ್ನೂ ಓದಿ: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ಪ್ರಕರಣದ ಹಿನ್ನೆಲೆ

2025ರ ಏಪ್ರಿಲ್‌ನಲ್ಲಿ ನಡೆದಿದ್ದ ಸಿಇಟಿ ಪರೀಕ್ಷೆಯ ವೇಳೆ ಬೀದರ್ ಮತ್ತು ಶಿವಮೊಗ್ಗದ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆಗೆ ಅವಕಾಶ ನೀಡಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವರದಿ ಕೇಳಿ, ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಚನೆ ನೀಡಿತ್ತು. ಇದಾದ ಬಳಿಕ ಮತ್ತೆ 2026ರ ಏಪ್ರಿಲ್ 23ರಂದು ಬೆಂಗಳೂರಿನ ಕೋರಮಂಗಲದ (ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿ) ಕೃಪಾನಿಧಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿಯೂ ಇಂತಹದ್ದೇ ಘಟನೆ ಮರುಕಳಿಸಿತ್ತು. ಈ ಸಂಬಂಧ ಪೋಷಕರ ದೂರಿನ ಮೇರೆಗೆ ಮಡಿವಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕಾಲೇಜಿನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ, ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ನ್ಯಾಯಾಲಯವು ಆ ಸಿಬ್ಬಂದಿಗೆ ಜಾಮೀನು ಮಂಜೂರು ಮಾಡಿತ್ತು.

ಇನ್ನೊಂದೆಡೆ ಪರೀಕ್ಷಾ ಕೇಂದ್ರಗಳಲ್ಲಿ ಧಾರ್ಮಿಕ ಚಿಹ್ನೆಗಳನ್ನು ತೆಗೆಸುವುದನ್ನು ಪ್ರಶ್ನಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್‌ನಲ್ಲಿ ಪಿಐಎಲ್ (PIL) ಸಲ್ಲಿಸಿತ್ತು. ಇದೀಗ ಹೈಕೋರ್ಟ್​ ಈ ಪಿಐಎಲ್​​​ ಇತ್ಯರ್ಥ ಮಾಡಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​
'ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ': ಪ್ರಿಯಾಂಕ್​​ ಖರ್ಗೆ
'ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ': ಪ್ರಿಯಾಂಕ್​​ ಖರ್ಗೆ
ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಟ್ಟ ರಮಿಕಾ ಶಿವು
ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಟ್ಟ ರಮಿಕಾ ಶಿವು
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟ
ಭದ್ರಾ ಡ್ಯಾಂನಿಂದ 10 ದಿನ 1500 ಕ್ಯೂಸೆಕ್ ನೀರು ಬಿಡುಗಡೆ
ಭದ್ರಾ ಡ್ಯಾಂನಿಂದ 10 ದಿನ 1500 ಕ್ಯೂಸೆಕ್ ನೀರು ಬಿಡುಗಡೆ
ಮಹಾರಾಣಿ ಪಟ್ಟಕ್ಕೆ ಬಿಗ್ ಬಾಸ್ ಮನೆಯಲ್ಲಿ ಭರ್ಜರಿ ಸ್ಪರ್ಧೆ
ಮಹಾರಾಣಿ ಪಟ್ಟಕ್ಕೆ ಬಿಗ್ ಬಾಸ್ ಮನೆಯಲ್ಲಿ ಭರ್ಜರಿ ಸ್ಪರ್ಧೆ
ಕುಮಾರಕೃಪಾ ಗೆಸ್ಟ್ ಹೌಸ್ ಹೆಸರು ಚೇಂಜ್: ಇನ್ನು ಇದುವೇ ಸಿಎಂ ಅಧಿಕೃತ ನಿವಾಸ
ಕುಮಾರಕೃಪಾ ಗೆಸ್ಟ್ ಹೌಸ್ ಹೆಸರು ಚೇಂಜ್: ಇನ್ನು ಇದುವೇ ಸಿಎಂ ಅಧಿಕೃತ ನಿವಾಸ