AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ MP ಪ್ರಜ್ವಲ್​ ರೇವಣ್ಣಗೆ ಬಿಗ್ ಶಾಕ್​​​, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ

Prajwal Revanna's MP Post Disqualified ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕೋರ್ಟ್ ಈ ಆದೇಶ ನೀಡಿದೆ.

ಜೆಡಿಎಸ್ MP ಪ್ರಜ್ವಲ್​ ರೇವಣ್ಣಗೆ ಬಿಗ್ ಶಾಕ್​​​, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ
ಹೈಕೋರ್ಟ್
Ramesha M
| Edited By: |

Updated on:Sep 01, 2023 | 4:16 PM

Share

ಬೆಂಗಳೂರು, ಸೆ.1: ಜೆಡಿಎಸ್​ನ ಪ್ರಜ್ವಲ್ ರೇವಣ್ಣ(Prajwal Revanna) ಅವರನ್ನು ಹಾಸನ (Hassan) ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್​ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಸೆಪ್ಟೆಂಬರ್ 01) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್​ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.

2019ರಲ್ಲಿ ನಡೆದ ಲೋಕಸಭಾ ಚುನಾವಣೆ ವೇಳೆ ನಾಮಪತ್ರ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಹೀಗಾಗಿ ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಪರಾಜಿತ ಅಭ್ಯರ್ಥಿ ಅರಕಲಗೂಡು ಮಂಜು ಅವರು ಅರ್ಜಿ ಸಲ್ಲಿಸಿದ್ದರು. ಆದ್ರೆ, ಆ ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕೃತಗೊಂಡಿತ್ತು. ಇದೀಗ ವಕೀಲ ದೇವರಾಜೇಗೌಡ ಅಲ್ಲಿಸಿದ್ದ ಅರ್ಜಿ ಆಧಾರದ ಮೇಲೆ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಲೋಕಸಭೆಗೆ ಹಾಸನದಿಂದ ಪ್ರಜ್ವಲ್​ ರೇವಣ್ಣ ಸ್ಪರ್ಧೆ: ದೇವೇಗೌಡರ ತೀರ್ಮಾನವೇ ಅಂತಿಮ: ಹೆಚ್​. ಡಿ ರೇವಣ್ಣ

ಇನ್ನು ಸಂಸದ ಸ್ಥಾನ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರ ಸಿದ್ಧತೆ ನಡೆಸಿದ್ದಾರೆ.

ಸಂಸದ ಪ್ರಜ್ವಲ್ ರೆವಣ್ಣ ಅನರ್ಹ ವಿಚಾರವಾಗಿ ಮಾಥನಾಡಿದ ಹೆಚ್​ಡಿ ರೇವಣ್ಣ, ಕಾನೂನಿಗೆ ತಲೆ ಬಾಗಬೇಕು. ನಾವು ತಲೆ ಬಾಗುತ್ತೇವೆ. ಜಡ್ಜ್‌ಮೆಂಟ್ ಕಾಪಿ ಸಿಕ್ಕಿಲ್ಲ. ನ್ಯಾಯಾಲಯಕ್ಕೆ ತಲೆ ಬಾಗುತ್ತೇನೆ. ಕಾನೂನಿಗೆ ಗೌರವ ಕೊಡಬೇಕು. ಯಾರು ಯಾಕೆ ಮಾಡಿದರು ಅಂತ ಗೊತ್ತಿಲ್ಲ. ನನಗೆ ವಿಷಯಾನೇ ಗೊತ್ತಿಲ್ಲ. ಪ್ರಜ್ವಲ್ ಅವರ ಅಡ್ವೊಕೇಟ್ ಇದ್ದಾರೆ. ವಿಷಯ ತಿಳಿದುಕೊಂಡಿದ್ದಾರೆ. ಮೇಲ್ಮನವಿ ಸಲ್ಲಿಸುವ ಬಗ್ಗೆ ಅವರು ಯೋಚನೆ ಮಾಡುತ್ತಾರೆ ಎಂದರು.

ಏನಿದು ಆರೋಪ?

2019ರ ಲೋಕಾಸಭಾ ಚುನಾವಣಾ (Lok Sabha Election) ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಪ್ರಜ್ವಲ್​ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಅಂದಿನ ಹಾಸನ ಬಿಜೆಪಿ ಅಭ್ಯರ್ಥಿಯಾಗಿದ್ದ ಎ ಮಂಜು ಮತ್ತು ವಕೀಲ ದೇವರಾಜೇಗೌಡ ಹೈ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್ ಎ, ಮಂಜು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

ಪ್ರಜ್ವಲ್ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ. ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್‌ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ದೇವರಾಜೇಗೌಡ ಆರೋಪಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:54 pm, Fri, 1 September 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ