ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಮುಖ್ಯಾಂಶಗಳು
- ಡಿಸಿಎಂ ಡಿ.ಕೆ.ಶಿವಕುಮಾರ್ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ
- ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ
- ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ಕರ್ನಾಟಕ ಹೈಕೋರ್ಟ್(Karnataka High Court) ಏಕಸದಸ್ಯ ಪೀಠ ಮತ್ತೆ ವಿಸ್ತರಣೆ ಮಾಡಿ ಇಂದು (ಜೂನ್ 02) ಆದೇಶ ಹೊರಡಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಎರಡನೇ ಬಾರಿಗೆ ಹೈಕೋರ್ಟ್ ಮೇ ಅಂತ್ಯದವರೆಗೂ ತಡೆಯಾಜ್ಞೆ ನೀಡಿತ್ತು. ಇದೀಗ ಮತ್ತೆ ತಡೆಯಾಜ್ಞೆ ವಿಸ್ತರಿಸಿದ್ದು, ಡಿಕೆ ಶಿವಕುಮಾರ್ ನಿರಾಳರಾಗಿದ್ದಾರೆ.
ಇದನ್ನೂ ಓದಿ: ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್
ಪ್ರಕರಣವೇನು?
ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಇದೇ ಅದೇ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದೆ.
ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಆದ್ರೆ, ಸುಪ್ರೀಂಕೋರ್ಟ್, ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿ ಮಧ್ಯಂತರ ಆದೇಶ ನೀಡಲು ನಿರಾಕರಿಸಿತ್ತು. ಅಲ್ಲದೆ, ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಹೇಳಿ ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿ ಆದೇಶ ಹೊರಡಿಸಿತ್ತು.
Published On - 11:37 am, Fri, 2 June 23




