ಹಾಸನದಲ್ಲಿ ಮಂಗಗಳ ಮಾರಣಹೋಮ: ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್

ಹಾಸನದಲ್ಲಿ ಮಂಗಗಳ ಮಾರಣಹೋಮ: ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಆಗಸ್ಟ್ 4ರ ಒಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಒಕಾ, ನ್ಯಾಯಮೂರ್ತಿ ಸಂಜಯ್ ಗೌಡರವರ ಪೀಠ ಆದೇಶ ಹೊರಡಿಸಿದೆ.

TV9kannada Web Team

| Edited By: ganapathi bhat

Jul 30, 2021 | 4:44 PM

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಡೆದಿದ್ದ ಮಂಗಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಮಾನ ಕೈಗೊಂಡಿದೆ. ಹೈಕೋರ್ಟ್ ಪ್ರಕರಣದ ವಿಚಾರಣೆಗೆ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಹಾಸನದ ಚೌಡನಹಳ್ಳಿಯಲ್ಲಿ ಮಂಗಗಳ ಮಾರಣಹೋಮ ನಡೆದಿತ್ತು. ಇಂತಹ ಅಮಾನವೀಯ ಕೃತ್ಯಕ್ಕೆ ಹೈಕೋರ್ಟ್ ತೀವ್ರ ಆತಂಕ ವ್ಯಕ್ತಪಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಎಸ್​ಪಿ, ಆರ್​ಎಫ್ಒ ಅವರನ್ನು ಪ್ರತಿವಾದಿಯಾಗಿಸಲು ಸೂಚನೆ ನೀಡಲಾಗಿದೆ. ಕಾಡಿನ ಪ್ರಾಣಿಗಳಿಗೂ ಬದುಕುವ ಹಕ್ಕಿದೆ. ಮಂಗಗಳನ್ನು ಬರ್ಬರವಾಗಿ ಹತ್ಯೆಗೈದಿರುವುದು ಆಘಾತಕಾರಿ. ಇಲ್ಲಿ ಪ್ರಾಣಿಗಳ ದೌರ್ಜನ್ಯ ತಡೆ ಕಾಯ್ದೆ ಸ್ಪಷ್ಟ ಉಲ್ಲಂಘನೆ ಆಗಿದೆ. ಮಂಗಗಳ ಹಾವಳಿಯನ್ನೂ ಘನತೆಯಿಂದ ನಿಯಂತ್ರಿಸಬೇಕು ಎಂದು ಕೋರ್ಟ್ ಹೇಳಿದೆ.

ಅಷ್ಟೇ ಅಲ್ಲದೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಆಗಸ್ಟ್ 4ರ ಒಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಒಕಾ, ನ್ಯಾಯಮೂರ್ತಿ ಸಂಜಯ್ ಗೌಡರವರ ಪೀಠ ಆದೇಶ ಹೊರಡಿಸಿದೆ.

ಕನಿಷ್ಠ ವಿವೇಚನೆಯನ್ನೂ ಮರೆತು ಮೂಕ ಜೀವಿಗಳನ್ನು ಜನರು ಕೊಂದಿದ್ದರು, ಕ್ರೂರವಾಗಿ ವರ್ತಿಸಿದ್ದರು. 30ಕ್ಕೂ ಹೆಚ್ಚು ಮಂಗಗಳನ್ನು ಕೊಂದು ಚೀಲದಲ್ಲಿ ತುಂಬಿ ರಸ್ತೆಯಲ್ಲಿ ಬಿಸಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೌಡನಹಳ್ಳಿ ಬಳಿ ನಡೆದಿತ್ತು. ಸ್ಥಳೀಯರು ರಾತ್ರಿ 10 ಗಂಟೆ ಸಮಯದಲ್ಲಿ ಓಡಾಡುತ್ತಿರುವಾಗ ರಸ್ತೆಯ ಪಕ್ಕದಲ್ಲಿ ದೊಡ್ಡದಾದ ಚೀಲವೊಂದು ಬಿದ್ದಿರುವುದು ಗಮನಕ್ಕೆ ಬಂದಿತ್ತು. ಪ್ರಾಣಿಗಳ ಕಿರುಚಾಟವೂ ಕೇಳತೊಡಗಿತ್ತು.

ತಡಮಾಡದೆ ಚೀಲದ ಗಂಟು ಬಿಚ್ಚಿ ನೋಡುವಷ್ಟರಲ್ಲಿ 30ಕ್ಕೂ ಹೆಚ್ಚು ಮಂಗಗಳು ಬಲಿಯಾಗಿದ್ದವು. ಇನ್ನು ಕೆಲವು ಗಂಭೀರ ಸ್ಥಿತಿಯಲ್ಲಿದ್ದು ಕಿರುಚಾಡುತ್ತಿದ್ದವು. 15 ಕ್ಕೂ ಹೆಚ್ಚು ಕೋತಿಗಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದವು. 30 ಮಂಗಗಳ ಹತ್ಯೆ ಮಾಡಲಾಗಿತ್ತು. ರಾತ್ರೋರಾತ್ರಿ ಕಾರಿನಲ್ಲಿ ತುಂಬಿಕೊಂಡು ರಸ್ತೆಯಲ್ಲಿ ಬಿಸಾಡಿ ಹೋಗಿರುವ ಮಾಹಿತಿ ತಿಳಿದು ಬಂದಿತ್ತು.

ಇದನ್ನೂ ಓದಿ: ಹಾಸನದಲ್ಲಿ 30ಕ್ಕೂ ಹೆಚ್ಚು ಮಂಗಗಳನ್ನು ರಾತ್ರೋ ರಾತ್ರಿ ಕೊಂದು ಬಿಸಾಡಿ ಹೋಗಿರುವ ದುರುಳರು

ಅಬ್ಬಬ್ಬಾ ತರಹೇವಾರಿ ವಂಚನೆಗಳು.. ಹಾಸನದಲ್ಲಿ ಬೇಬಿ ಟ್ಯಾಂಕರ್ ಮಾಫಿಯಾ! ಸೂತ್ರಧಾರ ಕಾನ್ಸ್​ಟೇಬಲ್​ ಸೇರಿ ಐವರ ವಿರುದ್ಧ ಕೇಸ್

(Karnataka High Court files Suomoto PIL against Hassan Choudanahalli Monkeys Death Case)

Follow us on

Related Stories

Most Read Stories

Click on your DTH Provider to Add TV9 Kannada