Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ

ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ, ನ್ಯಾಯದಾನದ ಭಾಷೆಯೂ ಆಗಬೇಕು ಎನ್ನುವ ಕೂಗಿಗೆ ಸ್ಪಂದಿಸಿರುವ ಕರ್ನಾಟಕ ಹೈಕೋರ್ಟ್‌ ಗುರುವಾರ ಪ್ರಕರಣವೊಂದರಲ್ಲಿ ಕನ್ನಡದಲ್ಲಿಯೇ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಕೃಷ್ಣ ಎಸ್.‌ ದೀಕ್ಷಿತ್‌ ಮತ್ತು ಸಿ ಎಂ ಜೋಶಿ ಅವರ ವಿಭಾಗೀಯ ಪೀಠವು ಕನ್ನಡದಲ್ಲೇ ತೀರ್ಪು ಪ್ರಕಟಿಸುವುದರ ಮೂಲಕ ಬುಧವಾರವಷ್ಟೇ ಆಚರಿಸಲ್ಪಟ್ಟಿದ್ದ ಭಾರತ ಭಾಷಾ ದಿನವನ್ನು ಮತ್ತಷ್ಟು ಸ್ಮರಣೀಯವಾಗಿಸಿದೆ.

ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ
ಕರ್ನಾಟಕ ಹೈಕೋರ್ಟ್
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Dec 12, 2024 | 7:32 PM

ಬೆಂಗಳೂರು (ಡಿಸೆಂಬರ್ 12): ಇತ್ತೀಚೆಗೆ ಕೆಲ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದರ ಮೂಲಕ ಗಮನಸೆಳೆದಿದ್ದರು. ಇದೀಗ ಹೈಕೋರ್ಟ್​ನಲ್ಲೂ ಸಹ ಕನ್ನಡದ ಕಂಪು ಮೊಳಗಿದೆ. ಹೌದು… ಕರ್ನಾಟಕ ಹೈಕೋರ್ಟ್​​ ಇದೇ ಮೊದಲ ಬಾರಿಗೆ ಪ್ರಕಣವೊಂದರ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದೆ. ನಿನ್ನೆ (ಡಿಸೆಂಬರ್ 11) ಭಾರತ ಭಾಷಾ ದಿವಸದ ಪ್ರಯುಕ್ತ ಸಾಂಕೇತಿಕವಾಗಿ ಇಂದು (ಡಿಸೆಂಬರ್ 12) ನ್ಯಾ. ಕೃಷ್ಣ ಎಸ್.ದೀಕ್ಷಿತ್, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ, ನಂಜಾವಧೂತ ಸ್ವಾಮಿ ವಿರುದ್ಧ ಎಸ್.ಲಿಂಗಣ್ಣ ಪ್ರಕರಣದಲ್ಲಿ ಕನ್ನಡದಲ್ಲೇ ತೀರ್ಪು ನೀಡಿದೆ.

ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ನಂಜಾವಧೂತ ಸ್ವಾಮೀಜಿ ವಿರುದ್ಧ ಎಸ್‌ ಲಿಂಗಣ್ಣ ಎನ್ನುವರು ಸಲ್ಲಿಸಿದ್ದ ಮೂಲ ಮೇಲ್ಮನವಿಯನ್ನು ಪೀಠ ಪುರಸ್ಕರಿಸಿದೆ. ಈ ಪ್ರಕರಣದ ತೀರ್ಪನ್ನು ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ಪ್ರತ್ಯೇಕವಾಗಿ ನ್ಯಾಯಮೂರ್ತಿಗಳು ಬರೆದಿದ್ದಾರೆ. ತೀರ್ಪಿನ ಕಾರ್ಯಕಾರಿ (ಭಾಗವನ್ನು ನ್ಯಾ. ದೀಕ್ಷಿತ್‌ ಅವರು ಕನ್ನಡದಲ್ಲಿ ಓದುವ ಮೂಲಕ ಗಮನಸೆಳೆದರು.

ಕನ್ನಡದಲ್ಲೇ ತೀರ್ಪನ್ನು ಓದಿದ ನಂತರ ನ್ಯಾ. ದೀಕ್ಷಿತ್‌ ಅವರು, ಇಂಗ್ಲೆಂಡ್​ನಲ್ಲಿ 1730ರವರೆಗೆ ಲ್ಯಾಟಿನ್ ಭಾಷೆಯಲ್ಲಿ ಕೋರ್ಟ್ ಕಲಾಪ ನಡೆಯುತ್ತಿತ್ತು. 1730ರಿಂದ ಅವರ ಸ್ವಭಾಷೆ ಇಂಗ್ಲಿಸ್​ನಲ್ಲೇ ಕಲಾಪ ಆರಂಭಿಸಿದ್ದರು. ಆದ್ರೆ, ಜನಸಾಮಾನ್ಯರಿಗೆ ಕೋರ್ಟ್​ಗಳ ತೀರ್ಪು ಏನಿದೆ ಎಂದು ತಿಳಿಯಬೇಕೆಂದು ಈ ಉಪಕ್ರಮ. ಕನ್ನಡ ಅವಸಾನವಾಗಬಾರದೆಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳು ಕನ್ನಡದಲ್ಲೇ ವ್ಯವಹರಿಸುವಂತಾಗಬೇಕು ಎಂದು  ಅಭಿಪ್ರಾಯಪಟ್ಟರು.

ಕನ್ನಡದಲ್ಲಿ ತೀರ್ಪು ಓದಿದ ನ್ಯಾಯಮೂರ್ತಿ

ಮೊದಲಿಗೆ ಇಂಗ್ಲಿಷ್‌ನಲ್ಲಿ ತೀರ್ಪು ಓದಿದ ನ್ಯಾ. ದೀಕ್ಷಿತ್‌ ಅವರು ಆನಂತರ ಕನ್ನಡದಲ್ಲಿ ಓದಿದರು. ಮೇಲ್ಕಾಣಿಸಿದ ಕಾರಣಗಳಿಂದಾಗಿ ಈ ಮೇಲ್ಮನವಿಯನ್ನು ಪುರಸ್ಕರಿಸಲಾಗಿದೆ. ಏಕಸದಸ್ಯ ನ್ಯಾಯಾಧೀಶರ ಪ್ರಶ್ನಿತ ತೀರ್ಪು ಮತ್ತು ಆದೇಶವನ್ನು ರದ್ದುಗೊಳಿಸಲಾಗಿದೆ. ಪ್ರತಿವಾದಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ. ತತ್‌ಪರಿಣಾಮವಾಗಿ ಟಿಒಎಸ್‌ ಸಂಖ್ಯೆ ೧/೨೦೨೩ರಲ್ಲಿ ಮೇಲ್ಮನವಿದಾರರ ದಾವೆಯನ್ನು ಪುನರುಜ್ಜೀವನಗೊಳಿಸಲಾಗಿದೆ. ಅದನ್ನು ಕಾನೂನು ರೀತ್ಯಾ ವಿಚಾರಣೆ ಮತ್ತು ವಿಲೇವಾರಿ ಮಾಡಬೇಕಾಗುತ್ತದೆ. ಯಾರೂ ವೆಚ್ಚವನ್ನು ಭರಿಸುವಂತಿಲ್ಲ ಎಂದರು.

ಆನಂತರ ವಕೀಲರೊಬ್ಬರು ಇದು ಸಾಮಾನ್ಯ ಜನರಿಗೆ ಅರ್ಥವಾಗುತ್ತದೆ. ನ್ಯಾಯಮೂರ್ತಿಗಳ ಈ ತೀರ್ಪು ಇತರ ನ್ಯಾಯಮೂರ್ತಿಗಳು ಉತ್ತಮ ಸಂದೇಶ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದಕ್ಕೆ ನ್ಯಾ. ದೀಕ್ಷಿತ್‌ ಅವರು ಹೌದು, ಸಾಮಾನ್ಯ ಜನರಿಗೆ ಅರ್ಥವಾಗಬೇಕು. ಇಂಗ್ಲಿಷ್‌ ಅಥವಾ ಅವರಿಗೆ ತಿಳಿಯದ ಭಾಷೆಯಲ್ಲಿ ಹೇಳಿದರೆ ಆಗದು. ನಾವು ನಮ್ಮ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ಈ ಹಿಂದೆ ನ್ಯಾ. ಅರಳಿ ನಾಗರಾಜ್‌ ಅವರು ಸಹ ಕನ್ನಡದಲ್ಲಿಯೇ ತೀರ್ಪು ನೀಡುವ ಮೂಲಕ ನಾಡಿನ ಗಮನ ಸೆಳೆದಿದ್ದರು. ಆದರೆ, ಅವರ ಕನ್ನಡ ತೀರ್ಪು ಇಂಗ್ಲಿಷ್‌ ತೀರ್ಪಿನ ಅನುವಾದವಾಗಿತ್ತು. ಎರಡೂ ತೀರ್ಪುಗಳನ್ನು ಮೂಲ ತೀರ್ಪೆಂದು ಪರಿಗಣಿಸಬೇಕೆಂದು ಅವರು ಆ ವೇಳೆ ಹೇಳಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:56 pm, Thu, 12 December 24

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು