ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

ಕೇಂದ್ರ ಸರ್ಕಾರವು ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದೆ. ಇದರೊಂದಿಗೆ ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಮತ್ತು ಪಟನಾ ಹೈಕೋರ್ಟ್‌ಗಳಿಗೂ ಹೊಸ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ. ನ್ಯಾಯಮೂರ್ತಿಗಳ ನೇಮಕಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕೊಲಿಜಿಯಂ ಶಿಫಾರಸು ಮಾಡಿದ್ದು, ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ
ವಿಭು ಬಖ್ರು, ಕರ್ನಾಟಕ ಹೈಕೋರ್ಟ್​
Edited By:

Updated on: Jul 14, 2025 | 10:02 PM

ಬೆಂಗಳೂರು, ಜುಲೈ 14: ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್​ನ (Karnataka High Court) ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಕೇಂದ್ರ ಸರ್ಕಾರವು ಸೋಮವಾರ (ಜುಲೈ.14) ಆದೇಶ ಹೊರಡಿಸಿದೆ. ವಿಭು ಬಖ್ರು ಅವರು ಈ ಹಿಂದೆ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದರು. ಕರ್ನಾಟಕ ಹೈಕೋರ್ಟ್​ ಮಾತ್ರವಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಮತ್ತು ಪಟನಾ ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ (ಸಿಜೆ) ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿಗಳು:

ಕರ್ನಾಟಕ: ವಿಭು ಬಖ್ರು, ಮಧ್ಯಪ್ರದೇಶ: ಸಂಜೀವ್ ಸಚ್‌ದೇವ, ಜಾರ್ಖಂಡ್‌: ತರ್ಲೋಕ್ ಸಿಂಗ್ ಚೌಹಾಣ್, ಗುವಾಹಟಿ: ಅಶುತೋಷ್ ಕುಮಾರ್, ಪಟನಾ: ವಿಪುಲ್ ಮನುಭಾಯಿ ಪಂಚೋಲಿ.

ಐವರು ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿತ್ತು. ಕೊಲಿಜಿಯಮ್ ಶಿಫಾರಸಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ