ಬೆಂಗಳೂರು ಮೆಟ್ರೋ ಯೋಜನೆಗಾಗಿ ಮರ ಕಡಿಯಲು ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್​

ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

ಬೆಂಗಳೂರು ಮೆಟ್ರೋ ಯೋಜನೆಗಾಗಿ ಮರ ಕಡಿಯಲು ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್​
ಬೆಂಗಳೂರು ಮೆಟ್ರೋ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 15, 2021 | 9:39 PM

ಬೆಂಗಳೂರು: ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್​ ಗುರುವಾರ ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

ಮರ ಅಧಿಕಾರಿ ಮತ್ತು ಡಿಸಿಎಫ್ ವರ್ತನೆ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​, ಮರ ಬೆಳೆಸಲು ಸೂಕ್ತ ಪರ್ಯಾಯ ಜಾಗವನ್ನು ಪರಿಶೀಲಿಸಬೇಕಿತ್ತು ಎಂದು ಹೇಳಿತು. ಕಡಿಯುವ ಮರಗಳಿಗೆ ಬದಲಿಯಾಗಿ ಬೆಳೆಸುವ ಮರಗಳು ಮತ್ತು ಮಣ್ಣಿನ ಪರೀಕ್ಷೆಯ ವಿವರವನ್ನು ಎರಡು ವಾರಗಳ ಒಳಗೆ ನೀಡಬೇಕು ಎಂದು ಹೇಳಿತು.

ಕರ್ನಾಟಕದ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕೈದಿಗಳು

ಬೆಂಗಳೂರು: ಕರ್ನಾಟಕದ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಕೈದಿಗಳಿದ್ದಾರೆ ಎಂದು ಕಾನೂನು ಸೇವೆಗಳ ಪ್ರಾಧಿಕಾರವು ಹೈಕೋರ್ಟ್​ಗೆ ವರದಿ ನೀಡಿದೆ. ಹಲವು ಜೈಲುಗಳಲ್ಲಿ ಪ್ರತ್ಯೇಕ ಸಂದರ್ಶಕರ ಕೊಠಡಿ ಇಲ್ಲ. ವೈದ್ಯರು, ವೈದ್ಯಕೀಯ ಸಿಬ್ಬಂದಿ ಹುದ್ದೆಗಳು ಖಾಲಿಯಿವೆ. ಹಲವು ಉಪಕಾರಾಗೃಹಗಳಲ್ಲಿ ಅಡುಗೆ ಕೋಣೆಗಳೂ ಇಲ್ಲ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಹಿಳೆಯರು ಇರುವ ಜೈಲುಗಳಲ್ಲಿ ಮಕ್ಕಳ‌ ಆರೈಕೆ ಕೇಂದ್ರವನ್ನು ಸ್ಥಾಪಿಸಬೇಕಿದೆ. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿರುವ ಜೈಲುಗಳಲ್ಲಿ ಅಂಗನವಾಡಿ ಕೇಂದ್ರಗಳನ್ನೂ ಸ್ಥಾಪಿಸಬೇಕು. ವೈದ್ಯರು ಪ್ರತಿದಿನ ಜೈಲುಗಳಿಗೆ ಭೇಟಿ ನೀಡಬೇಕು. ಕಾರಾಗೃಹದಲ್ಲಿ ಡ್ರಗ್ಸ್, ಮಾರಕಾಸ್ತ್ರ ಮತ್ತು ಮೊಬೈಲ್ ಬಳಕೆ ತಡೆಯಬೇಕು. ಇದಕ್ಕಾಗಿ ನಿತ್ಯ ತಪಾಸಣೆ ನಡೆಸಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಾನೂನು ಸೇವಾ ಪ್ರಾಧಿಕಾರದ ವರದಿಯನ್ನು ಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕೆಂದು ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿತು.

(Karnataka High Court Gives Conditional Permission to cut Tree for Metro Project)

ಇದನ್ನೂ ಓದಿ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್​; ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಆನೆ ಬಲ!

ಇದನ್ನೂ ಓದಿ: ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಿ, ಒತ್ತುವರಿಯಾಗಿದ್ದರೆ ತೆರವುಗೊಳಿಸಿ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ