SC-ST ಹಾಸ್ಟೆಲ್​ಗಳಲ್ಲಿ ಸಿಬ್ಬಂದಿ ಕೊರತೆ, ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ

ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಸ್ಟೆಲ್​ಗಳಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ಸಮಗ್ರ ವರದಿ ಸಲ್ಲಿಸಲು ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಸಮಗ್ರ ವರದಿ ಸಲ್ಲಿಸಲು 2 ವಾರಗಳ ಡೆಡ್​ಲೈನ್ ನೀಡಿದೆ. ಏನಿದು ಪ್ರಕರಣ?

SC-ST ಹಾಸ್ಟೆಲ್​ಗಳಲ್ಲಿ ಸಿಬ್ಬಂದಿ ಕೊರತೆ, ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ
ಹೈಕೋರ್ಟ್​
Updated By: ರಮೇಶ್ ಬಿ. ಜವಳಗೇರಾ

Updated on: Jan 16, 2024 | 7:30 PM

ಬೆಂಗಳೂರು, (ಜನವರಿ 16): ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಸ್ಟೆಲ್​ಗಳಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ಸಮಗ್ರ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಸಮಾಜ ಕಲ್ಯಾಣ ಇಲಾಖೆ ಅಧೀನದ ಹಾಸ್ಟೆಲ್​ಗಳಲ್ಲಿ ಸಿಬ್ಬಂದಿ ಕೊರತೆ ಸಂಬಂಧ ಮಾಧ್ಯಮ ವರದಿ ಆಧರಿಸಿ ಹೈಕೋರ್ಟ್ ಪಿಐಎಲ್ ದಾಖಲಿಸಿಕೊಂಡಿತ್ತು. ಇದೀಗ ಇದಕ್ಕೆ ಸಂಬಂಧಿಸಿದಂತೆ ಕೈಗೊಂಡ‌ ಕ್ರಮಗಳ ವರದಿ ಸಲ್ಲಿಸಲು ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಸೂಚಿಸಿದೆ.

ಇದನ್ನೂ ಓದಿ: ಸಹಾಯಕ ಗ್ರಂಥಪಾಲಕರ ವೇತನದಲ್ಲಿ ತಾರತಮ್ಯ, ಆದೇಶ ಪಾಲಿಸದ ಸರ್ಕಾರಕ್ಕೆ 5 ಲಕ್ಷ ರೂ ದಂಡ ವಿಧಿಸಿದ ಕೋರ್ಟ್

ಹಾಸ್ಟೆಲ್​ಗಳಲ್ಲಿ ಸಿಬ್ಬಂದಿ ಕೊರತೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸಿಬ್ಬಂದಿ ಕೊರತೆ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಧಕ್ಕೆಯಾಗಲಿದೆ. ಖಾಲಿ ಇರುವ ಹುದ್ದೆಗ‌ಳ‌ ನೇಮಕಕ್ಕೆ ಸಮರೋಪಾದಿ ಕ್ರಮವಾಗಬೇಕು.ಈ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ 2 ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸಲು ಹೈಕೋರ್ಟ್​ ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ