ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್

ಬಿಟ್ ಕಾಯಿನ್ ಹಗರಣ ಸಂಬಂಧ ಬೆಂಗಳೂರಿನ ಕಾಟನ್​ಪೇಟೆ ಠಾಣೆಯಲ್ಲಿ 2020ರಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಸದ್ಯ, ಪ್ರಕರಣದಲ್ಲಿ ತನಿಖೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸುದ ಹೈಕೋರ್ಟ್, ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Edited By:

Updated on: Sep 12, 2023 | 3:12 PM

ಬೆಂಗಳೂರು, ಸೆ.12: ಬಿಟ್ ಕಾಯಿನ್ ಪ್ರಕರಣ (Bitcoin Case) ಸಂಬಂಧ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ (Karnataka High Court) ತಾತ್ಕಾಲಿಕ ರಿಲೀಫ್ ನೀಡಿದೆ. ಮುಂದಿನ ದಿನಾಂಕದವರೆಗೆ ಕೋರ್ಟ್​ಗೆ ಖುದ್ದು ಹಾಜರಿಯಿಂದ‌ ವಿನಾಯಿತಿ ನೀಡಿದ ಏಕಸದಸ್ಯ ಪೀಠ, ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿತು.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ವೇಳೆ ವಾದ ಮಂಡಿಸಿದ ಎಸ್​ಪಿಪಿ‌ ಪ್ರಸನ್ನಕುಮಾರ್, ತನಿಖೆಗೆ ತಡೆ ನೀಡದಂತೆ ಮನವಿ ಮಾಡಿದರು. ಹಿಂದಿನ ತನಿಖೆಯಲ್ಲಿ ಲೋಪ ಕಂಡು ಬಂದಿರುವುದರಿಂದ ಹೊಸದಾಗಿ ಎಫ್ಐಆರ್ ದಾಖಲಿಸಿ ಎಫ್ಎಸ್ಎಲ್ ವರದಿ ಆಧರಿಸಿ ಮರು ತನಿಖೆ ನಡೆಸಲಾಗುತ್ತಿದೆ. ಅಧಿಕಾರಿಗಳ ಪಾತ್ರದ ಬಗ್ಗೆಯೂ ಸಿಐಡಿ ತನಿಖೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕು: ಪ್ರಮುಖ ಮೂರು ಆರೋಪಿಗಳ ಮನೆ ಮೇಲೆ ಎಸ್​ಐಟಿ ದಾಳಿ

ಬಿಟ್ ಕಾಯಿನ್ ಪ್ರಕರಣದಲ್ಲಿ ಸಿಐಡಿ ಎಫ್ಐಆರ್ ಪ್ರಶ್ನಿಸಿ ತನಿಖೆಗೆ ತಡೆ ನೀಡುವಂತೆ ಕೋರಿ ಡಿವೈಎಸ್​ಪಿ ಶ್ರೀಧರ್ ಕೆ ಪೂಜಾರ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಎಫ್ಐಆರ್​ನಲ್ಲಿ ಆರೋಪಿ ಅಧಿಕಾರಿಗಳ ಹೆಸರು ನಮೂದಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ವಶಕ್ಕೆ ಪಡೆದಿದ್ದಾಗ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಲ್ಯಾಪ್ ಟಾಪ್ ತೆರೆಯಲಾಗಿದೆ. ಈ ವೇಳೆ ನಡೆದಿರಬಹುದಾದ ಕೃತ್ಯದ ಬಗ್ಗೆ ತನಿಖೆ ನಡೆದಿದೆ. ಹೀಗಾಗಿ ತನಿಖೆಗೆ ತಡೆ ನೀಡದಂತೆ ಎಸ್​​ಪಿಪಿ ಪ್ರಸನ್ನಕುಮಾರ್ ಮನವಿ ಮಾಡಿದ್ದಾರೆ.

ವಾದ ಆಲಿಸಿದ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಸಾಕ್ಷಾಧಾರವಿಲ್ಲದೇ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಸಿಐಡಿ ಪೊಲೀಸರಿಗೆ ಸೂಚನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ