ಯೋಗೇಶ್ವರ್ ವಿರುದ್ಧ ಮಗಳು ನಿಶಾ ಮಾತನಾಡದಂತೆ ಕೋರ್ಟ್​​ನಿಂದ ತಡೆಯಾಜ್ಞೆ ತಂದ ತಾಯಿ!

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ವಿರುದ್ಧ ಮಗಳು ನಿಶಾ ಯೋಗೇಶ್ವರ್ ಸಿಡಿದೆದ್ದಿದ್ದಾರೆ. ಚುನಾವಣೆ ನಡುವೆ ಪುತ್ರಿಯ ಭಯ ಶುರುವಾಗಿದೆ. ಹೀಗಾಗಿ ಅವರು ಮಾತನಾಡದಂತೆ ಯೋಗೇಶ್ವ ಮತ್ತು ಅವರ 2ನೇ ಹೆಂಡತಿ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

ಯೋಗೇಶ್ವರ್ ವಿರುದ್ಧ ಮಗಳು ನಿಶಾ ಮಾತನಾಡದಂತೆ ಕೋರ್ಟ್​​ನಿಂದ ತಡೆಯಾಜ್ಞೆ ತಂದ ತಾಯಿ!
ನಿಶಾ, ಯೋಗೇಶ್ವರ್
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Nov 04, 2024 | 9:47 PM

ಬೆಂಗಳೂರು. (ನವೆಂಬರ್ 04): ಸಿ.ಪಿ. ಯೋಗೇಶ್ವರ್ ವಿರುದ್ಧ ಮಗಳು ನಿಶಾ ಮಾತನಾಡದಂತೆ ಮಲತಾಯಿ (ಯೋಗೇಶ್ವರ್ ಅವರ 2ನೇ ಹೆಂಡತಿ) ಕೋರ್ಟ್‌ನಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ಹೌದು..ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಪುತ್ರಿ ನಿಶಾ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್‌ ನಿರ್ಬಂಧಿಸಿ ಆದೇಶಿದೆ.

ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಾ ಅವರ ಮಗಳು ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಉಪ ಚುನಾವಣೆ ಸಂದರ್ಭದಲ್ಲಿ ಈ ವಿಡಿಯೋ ಭಾರೀ ವೈರಲ್ ಆಗಿತ್ತು.

ಇದನ್ನೂ ಓದಿ: Nisha Yogeshwar: ನನ್ನ ಕುಟುಂಬದ ಗುಟ್ಟು ಬಯಲಿಗೆಳೆಯುವೆ; ಅಪ್ಪ ಸಿ.ಪಿ ಯೋಗೇಶ್ವರ್ ಕುರಿತ ಶಾಕಿಂಗ್ ವಿಷಯ ಬಿಚ್ಚಿಟ್ಟ ನಿಶಾ

ಚುನಾವಣೆ ಸಂದರ್ಭದಲ್ಲಿ ನಿಶಾ ಯೋಗೇಶ್ವರ್ ಅವರ ಆರೋಪದ ವಿಡಿಯೋ ಪರಿಣಾಮ ಯೋಗೇಶ್ವರ್ ಮೇಲೆ ಎಫೆಕ್ಟ್​ ಕೊಡುತ್ತೆ ಎನ್ನುವುದು ಗೊತ್ತಾಗುತ್ತಿದ್ದಂತೆಯೇ ಅವರ 2ನೇ ಹೆಂಡತಿ ಪಿ.ವಿ. ಶೀಲಾ ಹೈಕೋರ್ಟ್​ ಮೆಟ್ಟಿಲೇರಿದ್ದು, ಗಂಡ ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಮಗಳು ಯಾವುದೇ ಹೇಳಿಕೆ ನೀಡದಂತೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರನೆ ನಡೆಸಿದ ಹೈಕೋರ್ಟ್​ ಯೋಗೇಶ್ವರ್​ ವಿರುದ್ಧ ನಿಶಾ ಯಾವುದೇ ಹೇಳಿಕೆ ನೀಡದಂತೆ ಆದೇಶ ಹೊರಡಿಸಿದೆ.

ವಿಚಾರಣೆ ವೇಳೆ ನನ್ನ ಪತಿ ಸಿ.ಪಿ.ಯೋಗೇಶ್ವರ್ ಚುನಾವಣೆಗೆ ಸ್ಪರ್ಧಿಸಿರುವ ಬೆನ್ನಲ್ಲೇ ನಮ್ಮ ಮಲಮಗಳಾದ ನಿಶಾ ಯೋಗೇಶ್ವರ್‌ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಕುಟುಂಬದ ವಿರುದ್ಧ ಅವಹೇಳನಕಾರಿ, ಮಾನಹಾನಿಕಾರಕ, ಆಧಾರರಹಿತ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರಿನ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಅರ್ಜಿಯ ಮಧ್ಯಂತರ ಮನವಿಯನ್ನು ಪರಿಗಣಿಸಿರುವ ಹೈಕೋರ್ಟ್, ಪ್ರತಿವಾದಿಗಳಾದ ಇನ್‌ಸ್ಟಾಗ್ರಾಂ, ಎಕ್ಸ್‌ ಕಾರ್ಪ್‌ (ಟ್ವಿಟರ್‌), ಗೂಗಲ್‌ ಮತ್ತು ಯೂಟ್ಯೂಬ್‌ ಜಾಲತಾಣಗಳಲ್ಲಿ ನಿಶಾ ಯೋಗೇಶ್ ಅವರ ನಿಂದನಾತ್ಮಕ ಹೇಳಿಕೆಗಳನ್ನು ಅಪ್‌ಲೋಡ್‌ ಮಾಡಬಾರದು ಮತ್ತು ಈಗಾಗಲೇ ಪ್ರಸಾರ ಮಾಡಲಾಗಿರುವ ತುಣಕುಗಳನ್ನು ತಡೆಹಿಡಿಯಬೇಕು ಎಂದು ಮಧ್ಯಂತರ ಆದೇಶ ನೀಡಿ ವಿಚಾರಣೆ ಮುಂದೂಡಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Mon, 4 November 24

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು