ಶಾಲೆಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ 4ನೇ ತರಗತಿ ವಿದ್ಯಾರ್ಥಿ
Kannada Language: ಸಿಬಿಎಸ್ಇ ಮತ್ತು ಐಸಿಎಸ್ಇ ಪಠ್ಯಕ್ರಮವಿರುವ ಶಾಲೆಗಳಲ್ಲೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬೋಧಿಸಲು ನಿಯಮ ಜಾರಿ ಮಾಡಿರುವುದನ್ನು ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿ ಕೀರ್ತನ್ ಸುರೇಶ್ ಕೋರ್ಟ್ ಮೊರೆ ಹೋಗಿದ್ದಾನೆ.
ಬೆಂಗಳೂರು: ಕರ್ನಾಟಕದ ಶಾಲಾ ಪಠ್ಯಪುಸ್ತಕದಲ್ಲಿ ಮೊದಲ ಭಾಷೆ ಅಥವಾ ಎರಡನೇ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು ಎಂದು ಕರ್ನಾಟಕ ಸರ್ಕಾರ ಘೋಷಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಅರ್ಜಿದಾರ ಕೀರ್ತನ್ ಸುರೇಶ್ 2015ರ ಕನ್ನಡ ಕಲಿಕೆ ಕಡ್ಡಾಯ ಕಾಯ್ದೆಯ ವಿರುದ್ಧ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾನೆ.
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) ಮತ್ತು ಇಂಡಿಯನ್ ಸರ್ಟಿಫಿಕೆಟ್ ಆಫ್ ಸೆಕೆಂಡರಿ ಎಜುಕೇಷನ್ (ಐಸಿಎಸ್ಇ) ಪಠ್ಯಕ್ರಮವಿರುವ ಶಾಲೆಗಳಲ್ಲೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬೋಧಿಸಲು ನಿಯಮ ಜಾರಿ ಮಾಡಿರುವುದನ್ನು ಪ್ರಶ್ನಿಸಿ ವಿದ್ಯಾರ್ಥಿ ಕೀರ್ತನ್ ಸುರೇಶ್ ಕೋರ್ಟ್ ಮೊರೆ ಹೋಗಿದ್ದಾನೆ.
2018ರ ಕನ್ನಡ ಭಾಷೆ ಕಲಿಕೆ ಕಾಯ್ದೆ ಅಸಂವಿಧಾನಿಕ, ಅಕ್ರಮವಾದುದು. ಸಿಬಿಎಸ್ಇ, ಐಸಿಎಸ್ಇ ಸಿಲೆಬಸ್ ಇರುವ ಶಾಲೆಗಳಲ್ಲಿ ಈ ನಿಯಮವನ್ನು ಅಳವಡಿಕೆ ಮಾಡಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದಾನೆ. ಈ ಕುರಿತು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ 3 ವಾರಗಳ ಬಳಿಕ ಈ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ.
ವರ್ಗಾವಣೆಯಾಗುವ ಉದ್ಯೋಗದಲ್ಲಿರುವ ಜನರು ತಮ್ಮ ಮಕ್ಕಳನ್ನು ಸಿಬಿಎಸ್ಇ ಅಥವಾ ಐಸಿಎಸ್ಇ ಸಿಲೆಬಸ್ ಇರುವ ಶಾಲೆಗಳಿಗೆ ಸೇರಿಸಲು ಆದ್ಯತೆ ನೀಡುತ್ತಾರೆ. ಇದರಿಂದ ದೇಶದ ಯಾವುದೇ ಮೂಲೆಗೆ ವರ್ಗಾವಣೆಯಾದರೂ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗುವುದಿಲ್ಲ ಎಂಬ ಯೋಚನೆ ಅವರದ್ದು. ಆದರೆ, ಕನ್ನಡ ಭಾಷೆಯನ್ನು ಪ್ರಥಮ ಅಥವಾ ಎರಡನೇ ಭಾಷೆಯಾಗಿ ಕಡ್ಡಾಯಗೊಳಿಸಿದರೆ ಆ ಮಕ್ಕಳಿಗೆ ತೊಂದರೆ ಆಗುತ್ತದೆ. ಬೇರೆ ರಾಜ್ಯಗಳಿಗೆ ಹೋದಾಗ ಅಲ್ಲಿ ಕನ್ನಡ ಭಾಷೆ ಪಠ್ಯದಲ್ಲಿ ಇರುವುದಿಲ್ಲ. ಇದರಿಂದ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಕನ್ನಡವನ್ನು ಕುರೂಪಿ ಭಾಷೆ ಎಂದು ತೋರಿಸಿದ್ದಕ್ಕೆ ಕರ್ನಾಟಕ ಹೈಕೋರ್ಟ್ ಕ್ಷಮೆಯಾಚಿಸಿದ ಗೂಗಲ್
(Karnataka High Court issued Notice to Karnataka Government on plea against decision on Kannada compulsory in schools)