ಕನೇರಿ ಶ್ರೀಗಳಿಗೆ ವಿಜಯಪುರಕ್ಕೆ ನಿರ್ಬಂಧ ವಿವಾದ: ಜಿಲ್ಲಾಡಳಿತದ ಆದೇಶ ಎತ್ತಿ ಹಿಡಿದ ಹೈಕೋರ್ಟ್
ವಿಜಯಪುರ ಜಿಲ್ಲೆಗೆ ವಿಧಿಸಲಾಗಿರುವ ನಿರ್ಬಂಧ ಪ್ರಶ್ನಿಸಿ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ನ ಕಲಬುರಗಿ ವಿಭಾಗೀಯ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ತೀರಾ ಸಾಮಾನ್ಯ ಜನ ಕೂಡ ಸ್ವಾಮೀಜಿ ಬಳಸಿರುವ ಭಾಷೆ ಬಳಸಲ್ಲ ಎಂದು ಕಳವಳ ವ್ಯಕ್ತಪಡಿಸಿದೆ.

ಕಲಬುರಗಿ, ಅಕ್ಟೋಬರ್ 17: ವಿಜಯಪುರ ಜಿಲ್ಲೆಗೆ ವಿಧಿಸಲಾಗಿರುವ ನಿರ್ಬಂಧ ಪ್ರಶ್ನಿಸಿ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಹೈಕೋರ್ಟ್ನ ಕಲಬುರಗಿ (Kalaburagi) ವಿಭಾಗೀಯ ಪೀಠಕ್ಕೆ ಸಲ್ಲಿಸಿದ್ದ ಅರ್ಜಿ ವಜಾ ಗೊಂಡಿದೆ. ರಿಟ್ ಆರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಸ್ವಾಮೀಜಿ ಹೇಳಿಕೆ ಬಗ್ಗೆ ಕಳವಳವನ್ನೂ ವ್ಯಕ್ತಪಡಿಸಿದೆ. ತೀರಾ ಸಾಮಾನ್ಯ ಜನ ಕೂಡ ಸ್ವಾಮೀಜಿ ಬಳಸಿರುವ ಭಾಷೆ ಬಳಸಲ್ಲ ಎಂದಿರುವ ಕೋರ್ಟ್, ವಾದ-ಪ್ರತಿವಾದ ಆಲಿಸಿ ತೀರ್ಪು ನೀಡಿದೆ.
ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದ ಸಮಾರಂಭದಲ್ಲಿ ಮಾತನಾಡಿದ್ದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ಎರಡು ತಿಗಂಗಳುಗಳಿಂದ ದೇವಾಲಯಕ್ಕೆ ಹೋಗಬೇಡಿ ಎಂದು ಪ್ರಚಾರ ಮಾಡಲಾಗ್ತಿದೆ. ಮುಖ್ಯಮಂತ್ರಿಗಳ ಕೃಪಾಪೋಷಿತ ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ಕಲಾವಿದರು ಸೇರಿ ಬಸವ ಸಂಸ್ಕೃತಿ ಅಭಿಯಾನ ಎನ್ನುವ ನಾಟಕವನ್ನ ರಾಜ್ಯಾದ್ಯಂತ ಮಾಡುತ್ತಿದ್ದಾರೆ. ಗುಡಿಯಲ್ಲಿ ದೇವರಲಿಲ್ಲ. ಮನೆಯಲ್ಲಿನ ದೇವರನ್ನು ಹೊಳೆಗೆ ಹಾಕಿ ಎನ್ನುತ್ತಿದ್ದಾರೆ. ಇವರಿಗೆ ನಾನೇ ಬುದ್ಧಿ ಹೇಳಬೇಕು ಎಂದು ಕೆಲ ಅಸಂವಿಧಾನಿಕ ಪದ ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನಲೆ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ 2 ತಿಂಗಳ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶಿಸಿತ್ತು.
ಇದನ್ನೂ ಓದಿ: ಕನೇರಿ ಮಠದ ಶ್ರೀಗಳಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ 2 ತಿಂಗಳು ನಿರ್ಬಂಧ: ಜಿಲ್ಲಾಧಿಕಾರಿ ಡಾ.ಆನಂದ್ ಆದೇಶ
ಸ್ವಾಮೀಜಿ ಬಂಧನಕ್ಕೆ ಆಗ್ರಹ
ಬಸವ ಸಂಸ್ಕೃತಿ ಅಭಿಯಾನ ಮತ್ತು ಲಿಂಗಾಯತ ಮಠಾಧಿಪತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನಲೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಕೊಪ್ಪಳದಲ್ಲಿ ಪ್ರತಿಭಟನೆ ನಡೆದಿದೆ. ನಗರದ ಅಶೋಕ ವೃತ್ತದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಮತ್ತು ಬಸವತತ್ವ ಸಂಘಟನೆಗಳು ಸ್ವಾಮೀಜಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿವೆ. ಕಾಡಸಿದ್ದೇಶ್ವರ ಸ್ವಾಮೀಜಿ ಬಂಧನಕ್ಕೂ ಆಗ್ರಹಿಸಿವೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:06 pm, Fri, 17 October 25



