Karnataka High Court : ಕಳಂಕಿತ ಅಧಿಕಾರಿಯನ್ನು ಮಾಹಿತಿ ಆಯುಕ್ತರನ್ನಾಗಿ ನೇಮಿಸಿರುವ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್​​

|

Updated on: Jul 10, 2023 | 12:33 PM

ರ್ನಾಟಕ ಮಾಹಿತಿ ಆಯೋಗದ (ಕೆಐಸಿ) ರಾಜ್ಯ ಮಾಹಿತಿ ಆಯುಕ್ತರಾಗಿ ಎಚ್‌ಸಿ ಸತ್ಯನ್ ಅವರನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.

Karnataka High Court : ಕಳಂಕಿತ ಅಧಿಕಾರಿಯನ್ನು ಮಾಹಿತಿ ಆಯುಕ್ತರನ್ನಾಗಿ ನೇಮಿಸಿರುವ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್​​
ಕರ್ನಾಟಕ ಹೈಕೋರ್ಟ್
Follow us on

ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದ (ಕೆಐಸಿ) ರಾಜ್ಯ ಮಾಹಿತಿ ಆಯುಕ್ತರಾಗಿ ಎಚ್‌ಸಿ ಸತ್ಯನ್ ಅವರನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ (Karnataka High Court )ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ. ಅಕ್ರಮ ಆಸ್ತಿಗಳ ಆರೋಪದ ಮೇಲೆ ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಸತ್ಯನ್ ವಿರುದ್ಧ ವಿಚಾರಣೆ ನಡೆಯುತ್ತಿರುವ ಹೊತ್ತಿನಲ್ಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು ಸತ್ಯನ್ ಮತ್ತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು ಮೂಲದ ಚಾರಿಟಬಲ್ ಟ್ರಸ್ಟ್ ಕಮಿಟಿ ಫಾರ್ ಪಬ್ಲಿಕ್ ಅಕೌಂಟಬಿಲಿಟಿ ಈ ಅರ್ಜಿಯನ್ನು ಸಲ್ಲಿಸಿದೆ. ಸತ್ಯನ್ ರಾಜ್ಯ ಸಾರಿಗೆ ಇಲಾಖೆಯ ಉದ್ಯೋಗಿ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಅರ್ಜಿದಾರರ ಪ್ರಕಾರ, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವರನ್ನು ಒಳಗೊಂಡ ಆಯ್ಕೆ ಸಮಿತಿಯು ಫೆಬ್ರವರಿ 14, 2022ರಂದು ನಡೆದ ಸಭೆಯಲ್ಲಿ ಸತ್ಯನ್ ಆಯ್ಕೆ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ. ಸತ್ಯನ್ ವಿರುದ್ಧ ಲೋಕಾಯುಕ್ತ ಪೊಲೀಸರು ಈಗಾಗಲೇ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿದ್ದು, ಮೈಸೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಪ್ರಕರಣವು ವಿಚಾರಣೆ ಹಂತದಲ್ಲಿದೆ. ನೇಮಕ ಮಾಡುವಾಗ ಸತ್ಯನ್ ಈ ಅಂಶವನ್ನು ಮುಚ್ಚಿಟ್ಟಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: Karnataka High Court Recruitment 2023: ಹೈಕೋರ್ಟ್​​ನಲ್ಲಿನ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ: ವೇತನ 63 ಸಾವಿರ ರೂ.

ಆದರೆ ಈ ಬಗ್ಗೆ ತಿಳಿಯದೆ ಏಪ್ರಿಲ್ 18, 2022 ರಂದು ಸತ್ಯನ್ ಅವರನ್ನು ಮಾಹಿತಿ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ. ಆಗಸ್ಟ್ 31, 2012ರಂದು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸತ್ಯನ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು, ಆದರೆ ಈ ಪ್ರಕರಣ ತನಿಖೆಯ ಅಂತಿಮ ಹಂತಕ್ಕೆ ಬಂದಿದ್ದು ಆ ಕಾರಣದಿಂದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಸತ್ಯನ್ ನಂತರ ಈ ಬಗ್ಗೆ ಮತ್ತೆ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಸುಪ್ರೀಂ ಅದನ್ನು 2019ರಲ್ಲಿ ಅರ್ಜಿಯನ್ನು ವಜಾಗೊಳಿಸಿತ್ತು.

ಮಾಹಿತಿ ಹಕ್ಕು ಕಾಯಿದೆ 2005 ರ ಸೆಕ್ಷನ್ 15 (5) ರ ಪ್ರಕಾರ, ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರು ಕಾನೂನು, ವಿಜ್ಞಾನ ಮತ್ತು ತಂತ್ರಜ್ಞಾನ, ಸಮಾಜ ಸೇವೆಯಲ್ಲಿ ಒಳ್ಳೆಯ ಜ್ಞಾನ ಮತ್ತು ಅನುಭವ ಹೊಂದಿರುವ ಸಾರ್ವಜನಿಕ ಜೀವನದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಿರಬೇಕು ಎಂದು ಅರ್ಜಿದಾರರೂ ತಿಳಿಸಿದ್ದಾರೆ. ಆದರೆ ಸತ್ಯನ್ ವಿರುದ್ಧ ಈಗಾಗಲೇ ಅನೇಕ ಆರೋಪ ಮತ್ತು ಪ್ರಕರಣಗಳಿದ್ದು, ಅವರನ್ನು ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕ ಮಾಡಿರುವುದು ತಪ್ಪು ಎಂದು ಅರ್ಜಿದಾರರೂ ತಿಳಿಸಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ