ಸಿಎಂ ಬೊಮ್ಮಾಯಿಗೆ ಎದುರಾಗಲಿದೆ ಚುನಾವಣೆ ಸವಾಲು; ಪಾಲಿಕೆ, ನಗರಸಭೆಗಳಿಗೆ ಚುನಾವಣೆ ಘೋಷಿಸಿ ಎಂದ ಹೈಕೋರ್ಟ್

ಡಿಸೆಂಬರ್ ಅಂತ್ಯದವರೆಗೂ ಚುನಾವಣೆ ನಡೆಸದಂತೆ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಕೊವಿಡ್ ಕಾರಣಕ್ಕೆ ಚುನಾವಣೆ ಮುಂದೂಡಲು ಮನವಿ ಮಾಡಿತ್ತು. ಆದರೆ, ರಾಜ್ಯ ಸರ್ಕಾರದ ಮನವಿಯನ್ನ ಆಯೋಗ ಪರಿಗಣಿಸಬೇಕಿಲ್ಲ ಎಂದು ಹೇಳಿದೆ.

ಸಿಎಂ ಬೊಮ್ಮಾಯಿಗೆ ಎದುರಾಗಲಿದೆ ಚುನಾವಣೆ ಸವಾಲು; ಪಾಲಿಕೆ, ನಗರಸಭೆಗಳಿಗೆ ಚುನಾವಣೆ ಘೋಷಿಸಿ ಎಂದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ganapathi bhat

Updated on: Aug 04, 2021 | 6:15 PM

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಕಳೆದ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಬಳಿಕ, ಇಂದು (ಆಗಸ್ಟ್ 4) ಹೊಸ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಕರ್ನಾಟಕದ ಹೊಸ ಸಚಿವರಾಗಿ 29 ಮಂದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮಧ್ಯೆ ನೂತನ ಸಿಎಂಗೆ ಚುನಾವಣೆ ಸವಾಲು ಎದುರಾಗಲಿದೆ. ಬಾಕಿಯಿರುವ ಪಾಲಿಕೆ, ನಗರಸಭೆಗಳಿಗೆ ಚುನಾವಣೆ ಘೋಷಿಸಿ ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ತರೀಕೆರೆ ಮುಂತಾದೆಡೆ ಅವಧಿಯೊಳಗೆ ಚುನಾವಣೆ ನಡೆದಿಲ್ಲ ಎಂದ ಹೈಕೋರ್ಟ್ ಚುನಾವಣೆ ಮುಂದೂಡುವ ಮನವಿ ಒಪ್ಪಿಲ್ಲ. ರಾಜ್ಯ ಸರ್ಕಾರದ ಮನವಿಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿಲ್ಲ.

ಡಿಸೆಂಬರ್ ಅಂತ್ಯದವರೆಗೂ ಚುನಾವಣೆ ನಡೆಸದಂತೆ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಕೊವಿಡ್ ಕಾರಣಕ್ಕೆ ಚುನಾವಣೆ ಮುಂದೂಡಲು ಮನವಿ ಮಾಡಿತ್ತು. ಆದರೆ, ರಾಜ್ಯ ಸರ್ಕಾರದ ಮನವಿಯನ್ನ ಆಯೋಗ ಪರಿಗಣಿಸಬೇಕಿಲ್ಲ ಎಂದು ಹೇಳಿದೆ. ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಚುನಾವಣೆ ನಡೆದಿದೆ. ಕರ್ನಾಟಕದಲ್ಲಿ ಮಾತ್ರ ಚುನಾವಣೆ ಮುಂದೂಡಲಾಗುತ್ತಿದೆ. ಸಂವಿಧಾನದ ಆಶಯ ಪಾಲನೆಯಾಗುತ್ತಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಎಲ್ಲಾ ಧಾರ್ಮಿಕ ಕೇಂದ್ರಗಳನ್ನೂ ತೆರೆಯಲಾಗಿದೆ. ಜನ ಕ್ಯೂನಲ್ಲಿ ನಿಂತು ದೇವಾಲಯಕ್ಕೆ ಹೋಗಬಹುದು. ಹಾಗೆಯೇ ಚುನಾವಣೆ ಮಾಡಲು ಸಾಧ್ಯವಿಲ್ಲವೇ ಎಂದಿರುವ ಹೈಕೋರ್ಟ್ ಶೀಘ್ರವೇ ಚುನಾವಣಾ ವೇಳಾಪಟ್ಟಿ ನಿರ್ಧರಿಸಲು ಸೂಚನೆ ಕೊಟ್ಟಿದೆ.

ಇದನ್ನೂ ಓದಿ: ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಅಸ್ತಿತ್ವಕ್ಕೆ; ಸಚಿವರ ಜಾತಿವಾರು, ಪ್ರದೇಶವಾರು ಲೆಕ್ಕಾಚಾರ, ಸಮಗ್ರ ವರದಿ ಹೀಗಿದೆ

Karnataka Cabinet: ಬಸವರಾಜ ಬೊಮ್ಮಾಯಿ ಟೀಂನ ನೂತನ ಸಚಿವರಲ್ಲಿ ಯಾರಿಗೆ ಯಾವ ಖಾತೆ? ಸಂಭಾವ್ಯ ಪಟ್ಟಿ ಇಲ್ಲಿದೆ

(Karnataka High Court on Municipality Elections to Karnataka Govt Election Commission)

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು