ಕರ್ನಾಟಕದ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕೈದಿಗಳು: ಹೈಕೋರ್ಟ್​ಗೆ ಕಾನೂನು ಪ್ರಾಧಿಕಾರ ವರದಿ

ಹಲವು ಜೈಲುಗಳಲ್ಲಿ ಪ್ರತ್ಯೇಕ ಸಂದರ್ಶಕರ ಕೊಠಡಿ ಇಲ್ಲ. ವೈದ್ಯರು, ವೈದ್ಯಕೀಯ ಸಿಬ್ಬಂದಿ ಹುದ್ದೆಗಳು ಖಾಲಿಯಿವೆ. ಹಲವು ಉಪಕಾರಾಗೃಹಗಳಲ್ಲಿ ಅಡುಗೆ ಕೋಣೆಗಳೂ ಇಲ್ಲ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕೈದಿಗಳು: ಹೈಕೋರ್ಟ್​ಗೆ ಕಾನೂನು ಪ್ರಾಧಿಕಾರ ವರದಿ
ಕರ್ನಾಟಕ ಹೈಕೋರ್ಟ್​
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 15, 2021 | 8:48 PM

ಬೆಂಗಳೂರು: ಕರ್ನಾಟಕದ ಜೈಲುಗಳಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಕೈದಿಗಳಿದ್ದಾರೆ ಎಂದು ಕಾನೂನು ಸೇವೆಗಳ ಪ್ರಾಧಿಕಾರವು ಹೈಕೋರ್ಟ್​ಗೆ ವರದಿ ನೀಡಿದೆ. ಹಲವು ಜೈಲುಗಳಲ್ಲಿ ಪ್ರತ್ಯೇಕ ಸಂದರ್ಶಕರ ಕೊಠಡಿ ಇಲ್ಲ. ವೈದ್ಯರು, ವೈದ್ಯಕೀಯ ಸಿಬ್ಬಂದಿ ಹುದ್ದೆಗಳು ಖಾಲಿಯಿವೆ. ಹಲವು ಉಪಕಾರಾಗೃಹಗಳಲ್ಲಿ ಅಡುಗೆ ಕೋಣೆಗಳೂ ಇಲ್ಲ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಹಿಳೆಯರು ಇರುವ ಜೈಲುಗಳಲ್ಲಿ ಮಕ್ಕಳ‌ ಆರೈಕೆ ಕೇಂದ್ರವನ್ನು ಸ್ಥಾಪಿಸಬೇಕಿದೆ. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿರುವ ಜೈಲುಗಳಲ್ಲಿ ಅಂಗನವಾಡಿ ಕೇಂದ್ರಗಳನ್ನೂ ಸ್ಥಾಪಿಸಬೇಕು. ವೈದ್ಯರು ಪ್ರತಿದಿನ ಜೈಲುಗಳಿಗೆ ಭೇಟಿ ನೀಡಬೇಕು. ಕಾರಾಗೃಹದಲ್ಲಿ ಡ್ರಗ್ಸ್, ಮಾರಕಾಸ್ತ್ರ ಮತ್ತು ಮೊಬೈಲ್ ಬಳಕೆ ತಡೆಯಬೇಕು. ಇದಕ್ಕಾಗಿ ನಿತ್ಯ ತಪಾಸಣೆ ನಡೆಸಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಾನೂನು ಸೇವಾ ಪ್ರಾಧಿಕಾರದ ವರದಿಯನ್ನು ಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕೆಂದು ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿತು.

ಎಸ್ಎಸ್ಎಲ್​ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್ ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್​ ತಿರಸ್ಕರಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಮುಖ್ಯ ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ಕಳೆದ ರ್ಷದಂತೆ ಈ ಬಾರಿಯೂ ಶತಾಯಗತಾಯ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಿಯೇ ನಡೆಸುತ್ತೇವೆ ಎಂದು ಪಣತೊಟ್ಟಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ( S Suresh Kumar) ಆನೆ ಬಲ ಬಂದಂತಾಗಿದೆ. ಇದರಿಂದ ಮಹಾಮಾರಿ ಕೊರೊನಾ ಸೋಂಕಿನ ಸಮ್ಮುಖದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವ ವಿಷಯದಲ್ಲಿ ಅರ್ಧ ಯುದ್ಧ ಗೆದ್ದಂತಾಗಿದೆ.

ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದಕ್ಕೆ ( SSLC Examination 2021) ಕೊರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ನಡೆಗೆ ಸಚಿವ ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ನಿಜಕ್ಕೂ ಇದು ಭರವಸೆ ಮೂಡಿಸಿದ ತೀರ್ಪು. ಈ ವರ್ಷದ ಎಸ್ಎಸ್ಎಲ್​ಸಿ ಪರೀಕ್ಷೆ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಉಚ್ಚ ನ್ಯಾಯಾಲಯವು ಪಿಐಎಲ್ ಅನ್ನು ತಿರಸ್ಕರಿಸಿದೆ. ಅದರೊಂದಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಂತಸ ಹಂಚಿಕೊಂಡಿದ್ದಾರೆ.

(Karnataka High Court on Prison Overcrowd Situation Legal Services Sell Submits Report)

ಇದನ್ನೂ ಓದಿ: ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಿ, ಒತ್ತುವರಿಯಾಗಿದ್ದರೆ ತೆರವುಗೊಳಿಸಿ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

ಇದನ್ನೂ ಓದಿ: ಕ್ಯಾಬಿನೆಟ್ ಒಪ್ಪಿಗೆಯಿಲ್ಲದೇ ಸರ್ಕಾರ ಮಾರಾಟಕ್ಕೆ ಆದೇಶಿಸಬಹುದೇ?; ಜಿಂದಾಲ್​ಗೆ 3,667 ಎಕರೆ ಜಮೀನು ಪರಭಾರೆ ವಿಚಾರವಾಗಿ ಹೈಕೋರ್ಟ್ ಪ್ರಶ್ನೆ

Published On - 8:40 pm, Thu, 15 July 21