ಆನ್​ಲೈನ್ ಜೂಜು, ಬೆಟ್ಟಿಂಗ್ ನಿಷೇಧದ ಬಗ್ಗೆ ನಿಲುವು ತಿಳಿಸದ ಸರ್ಕಾರ: ಹೈಕೋರ್ಟ್ ಅಸಮಾಧಾನ

ಹಲವು ಬಾರಿ ನಿರ್ದೇಶನ ನೀಡಿದರೂ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸಿಲ್ಲ. ಅರ್ಜಿದಾರರ ಮನವಿ ಬಗ್ಗೆಯೂ ತೀರ್ಮಾನ ಕೈಗೊಂಡಿಲ್ಲ ಎಂದು ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ.

ಆನ್​ಲೈನ್ ಜೂಜು, ಬೆಟ್ಟಿಂಗ್ ನಿಷೇಧದ ಬಗ್ಗೆ ನಿಲುವು ತಿಳಿಸದ ಸರ್ಕಾರ: ಹೈಕೋರ್ಟ್ ಅಸಮಾಧಾನ
ಕರ್ನಾಟಕ ಹೈಕೋರ್ಟ್​
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 29, 2021 | 10:04 PM

ಬೆಂಗಳೂರು: ಆನ್​ಲೈನ್ ಜೂಜು ಮತ್ತು ಬೆಟ್ಟಿಂಗ್ ನಿಷೇಧದ ಬಗ್ಗೆ ರಾಜ್ಯ ಸರ್ಕಾರ ಈವರೆಗೆ ತನ್ನ ನಿಲುವು ಸ್ಪಷ್ಟಪಡಿಸಿಲ್ಲ ಎಂದು ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿತು. ಹಲವು ಬಾರಿ ನಿರ್ದೇಶನ ನೀಡಿದರೂ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸಿಲ್ಲ. ಅರ್ಜಿದಾರರ ಮನವಿ ಬಗ್ಗೆಯೂ ತೀರ್ಮಾನ ಕೈಗೊಂಡಿಲ್ಲ. ಈ ಸಂಬಂಧ ಸಚಿವ ಸಂಪುಟದ ನಿರ್ಧಾರವನ್ನೂ ಹೈಕೋರ್ಟ್​ಗೆ ತಿಳಿಸಿಲ್ಲ. ನಮ್ಮ ಆದೇಶ ಏಕೆ ಪಾಲಿಸಿಲ್ಲ ಎಂಬುದಕ್ಕೆ ವಿವರಣೆ ನೀಡಬೇಕು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಆನ್​ಲೈನ್ ಜೂಜು ಮತ್ತು ಬೆಟ್ಟಿಂಗ್​ ನಿಷೇಧಕ್ಕೆ ಸಂಬಂಧಿಸಿದಂತೆ ಜುಲೈ 8ರ ಒಳಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಆನ್​ಲೈನ್​ ಬೆಟ್ಟಿಂಗ್​ ನಿಷೇಧಿಸಬೇಕು ಎಂದು ಆಗ್ರಹಿಸಿ ಡಿ.ಆರ್.ಶಾರದಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ತಮಿಳುನಾಡು ಬಳಿಕ, ಆಂಧ್ರದಲ್ಲಿ ಆನ್​ಲೈನ್ ಗ್ಯಾಂಬ್ಲಿಂಗ್ ಬಂದ್ ತಮಿಳುನಾಡು ಸರ್ಕಾರದ ಬಳಿಕ ಇದೀಗ ಆಂಧ್ರ ಪ್ರದೇಶದಲ್ಲೂ ಆನ್​ಲೈನ್ ಜೂಜಿನ ವಿರುದ್ಧ ಮಸೂದೆ ಅಂಗೀಕಾರವಾಗಿದೆ. ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020ಯನ್ನು ಜಾರಿಗೊಳಿಸಲು ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಈ ಹಿಂದೆ ಆಂಧ್ರದಲ್ಲಿ, ಆನ್​ಲೈನ್ ಜೂಜಿನ ಸಾಲ ತೀರಿಸಲಾಗದೆ ಕೆಲವು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಗಳ ಬೆನ್ನಲ್ಲೇ ಸರ್ಕಾರ ಆನ್​ಲೈನ್ ಜೂಜಾಟಗಳಿಗೆ ನಿರ್ಬಂಧ ಹೇರುವ ಮನಮಾಡಿದೆ.

ಕರ್ನಾಟಕದಲ್ಲಿ ಯಾವಾಗ? ಆನ್​ಲೈನ್ ಜೂಜಾಟಗಳನ್ನು ಬ್ಯಾನ್ ಮಾಡುವ ಬಗ್ಗೆ ಕರ್ನಾಟಕ ಸರ್ಕಾರವು ಹೇಳಿಕೆ ನೀಡುತ್ತಲೇ ಬಂದಿದ್ದು, ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಜೂಜಿನಲ್ಲಿ ಪಾಲ್ಗೊಳ್ಳುವ ಯುವಕರಿಂದ ಅವರ ಮನೆಯವರೂ ತೊಂದರೆ ಅನುಭವಿಸುತ್ತಿದ್ದಾರೆ. ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತಮಿಳುನಾಡು, ಆಂಧ್ರದ ಬಳಿಕ ಕರ್ನಾಟಕದಲ್ಲೂ ಆನ್​ಲೈನ್ ಗ್ಯಾಂಬ್ಲಿಂಗ್ ವಿರುದ್ಧ ಮಸೂದೆ ರಚಿಸಬೇಕು ಎಂಬ ಕೂಗು ಜೋರಾಗುತ್ತಿದೆ.

(Karnataka High Court on State Govt Not informing its stand on online gambling and betting)

ಇದನ್ನೂ ಓದಿ: ಡಿಜಿಟಲ್ ಸುದ್ದಿ ಮಾಧ್ಯಮಗಳ ನಿಯಂತ್ರಣಕ್ಕಾಗಿರುವ ಹೊಸ ಐಟಿ ನಿಯಮಗಳ ಅನುಷ್ಠಾನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಇದನ್ನೂ ಓದಿ: ಪ್ರತಿ ಪೊಲೀಸ್ ಠಾಣೆಗೆ 2 ಶಬ್ದ ಮಾಪಕ ಅಗತ್ಯ: ಹೈಕೋರ್ಟ್​ಗೆ ಪೊಲೀಸ್ ಇಲಾಖೆ ಮಾಹಿತಿ

Published On - 10:00 pm, Tue, 29 June 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್