ತೃತೀಯ ಲಿಂಗಿಗಳಿಗೆ ಸರ್ಕಾರಿ ನಿಗಮಗಳಲ್ಲೂ ಶೇಕಡಾ 1ರಷ್ಟು ಮೀಸಲಾತಿ ಸೂಕ್ತ: ಕರ್ನಾಟಕ ಹೈಕೋರ್ಟ್
Karnataka High Court: ಸರ್ಕಾರಿ ನೌಕರಿಯಲ್ಲಿ ತೃತೀಯ ಲಿಂಗಿಗಳಿಗೆ ಶೇಕಡಾ 1 ರಷ್ಟು ಮೀಸಲಾತಿಗೆ ಸರ್ಕಾರ ಕ್ರಮ ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್, ಮಂಡಳಿ ಹಾಗೂ ಶಾಸನಾತ್ಮಕ ಸಂಸ್ಥೆಗಳಿಗೂ ನೀತಿ ಅನ್ವಯಿಸಲು ಸೂಚನೆ ಕೊಡಲಾಗಿದೆ.
ಬೆಂಗಳೂರು: ತೃತೀಯ ಲಿಂಗಿಗಳಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ವಿಚಾರವಾಗಿ ಕರ್ನಾಟಕ ಸರ್ಕಾರ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ನಿಗಮಗಳಲ್ಲೂ ಶೇಕಡಾ 1 ರಷ್ಟು ಮೀಸಲಾತಿ ಸೂಕ್ತ ಎಂದು ಕರ್ನಾಟಕ ಹೈಕೋರ್ಟ್ ಬುಧವಾರ (ಆಗಸ್ಟ್ 18) ನಿರ್ದೇಶನ ನೀಡಿದೆ. ಸರ್ಕಾರಿ ನೌಕರಿಯಲ್ಲಿ ತೃತೀಯ ಲಿಂಗಿಗಳಿಗೆ ಶೇಕಡಾ 1 ರಷ್ಟು ಮೀಸಲಾತಿಗೆ ಸರ್ಕಾರ ಕ್ರಮ ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್, ಮಂಡಳಿ ಹಾಗೂ ಶಾಸನಾತ್ಮಕ ಸಂಸ್ಥೆಗಳಿಗೂ ನೀತಿ ಅನ್ವಯಿಸಲು ಸೂಚನೆ ಕೊಡಲಾಗಿದೆ. ಈ ಬಗ್ಗೆ ಅಗತ್ಯ ಸೂಚನೆ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿ ಇಂದು (ಆಗಸ್ಟ್ 18) ವಿಚಾರಣೆ ನಡೆದಿದೆ. ಬೇಗೂರು ಕೆರೆಯಲ್ಲಿ ಪ್ರತಿಮೆ ಅನಾವರಣ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಪ್ರಮಾಣ ಪತ್ರ ನೀಡಿದ್ದಾರೆ. ಈವರೆಗೂ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಸಲ್ಲಿಕೆ ಮಾಡಿದ್ದಾರೆ. ಘಟನೆ ಬಗ್ಗೆ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದೆ. ಪ್ರತಿಮೆಗೆ ಮತ್ತೆ ಪರದೆ ಹಾಕಲಾಗಿದೆ. ಹೈಕೋರ್ಟ್ ಆದೇಶದಲ್ಲಿ ಇದ್ದಂತೆ ಪೂರ್ವ ಸ್ಥಿತಿ ಮರುಸ್ಥಾಪನೆ ಮಾಡಲಾಗಿದೆ ಎಂದು ಸರ್ಕಾರಿ ವಕೀಲ ವಿಜಯ್ ಕುಮಾರ್ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ತನಿಖೆಯ ಉಸ್ತುವಾರಿ ವಹಿಸಲು ಆಗ್ನೇಯ ಡಿಸಿಪಿಗೆ ಸೂಚನೆ ನೀಡಲಾಗಿದೆ. ತನಿಖಾ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಸೂಚನೆ ಕೊಡಲಾಗಿದೆ. ಬಳಿಕ, ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ.
ಹೈಕೋರ್ಟ್ನ 6 ನ್ಯಾಯಮೂರ್ತಿಗಳ ಖಾಯಮಾತಿಗೆ ಶಿಫಾರಸು ಹೈಕೋರ್ಟ್ನ 6 ನ್ಯಾಯಮೂರ್ತಿಗಳ ಖಾಯಮಾತಿಗೆ ಸುಪ್ರೀಂ ಕೋರ್ಟ್ನ ಕೊಲಿಜಿಯಮ್ ಶಿಫಾರಸು ಮಾಡಿದೆ. ನ್ಯಾ. ಎನ್.ಎಸ್. ಸಂಜಯ್ ಗೌಡ, ನ್ಯಾ. ಜ್ಯೋತಿ ಮೂಲಿಮನಿ, ನ್ಯಾ. ಆರ್.ನಟರಾಜ್, ನ್ಯಾ. ಹೇಮಂತ್ ಚಂದನ್ ಗೌಡರ್, ನ್ಯಾ. ಪ್ರದೀಪ್ ಸಿಂಗ್ ಯೆರೂರ್, ನ್ಯಾ. ಎಂ. ನಾಗಪ್ರಸನ್ನ ಈ 6 ನ್ಯಾಯಮೂರ್ತಿಗಳ ಖಾಯಮಾತಿಗೆ ಶಿಫಾರಸು ಮಾಡಲಾಗಿದೆ. ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಇವರನ್ನು ನೇಮಿಸಲಾಗಿತ್ತು. ಇದೀಗ, ಕಾಯಂ ನ್ಯಾಯಮೂರ್ತಿಗಳಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
ಇದನ್ನೂ ಓದಿ: Covishield: ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೂ ಮತ್ತೆ ವ್ಯಾಕ್ಸಿನ್ ಬೇಕೆಂದು ಕೋರ್ಟ್ ಮೊರೆ ಹೋದ ಕೇರಳಿಗ!
NDA Exam: ಲಿಂಗ ತಾರತಮ್ಯಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ; ಈ ಬಾರಿ ಮಹಿಳೆಯರಿಗೂ ಎನ್ಡಿಎ ಪರೀಕ್ಷೆ ಬರೆಯಲು ಅವಕಾಶ