HD Revanna: ಹೆಚ್​ಡಿ.ರೇವಣ್ಣಗೆ ಮತ್ತೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ

| Updated By: ರಮೇಶ್ ಬಿ. ಜವಳಗೇರಾ

Updated on: Oct 30, 2023 | 12:14 PM

ಮಾಜಿ ಸಚಿವ ಹೆಚ್‌.ಡಿ.ರೇವಣ್ಣ (HD Revanna) ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್‌ (ಆದೇಶಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಜಿ.ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​., ರೇವಣ್ಣಗೆ ಮತ್ತೆ ಸಮನ್ಸ್ ಜಾರಿಗೆ ಆದೇಶಿಸಿದೆ.

HD Revanna: ಹೆಚ್​ಡಿ.ರೇವಣ್ಣಗೆ ಮತ್ತೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ
ಹೈಕೋರ್ಟ್, ಹೆಚ್.ಡಿ.ರೇವಣ್ಣ
Follow us on

ಬೆಂಗಳೂರು, (ಅಕ್ಟೋಬರ್ 30): ಮಾಜಿ ಸಚಿವ ಹೆಚ್‌.ಡಿ.ರೇವಣ್ಣ (HD Revanna) ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್‌ (Karnataka High Court) ಆದೇಶಿಸಿದೆ . ಶಾಸಕ ಹೆಚ್​ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್​ ಜಾರಿಗೆ ಆದೇಶಿಸಿದೆ. ಚುನಾವಣಾ ತಕರಾರು ಅರ್ಜಿಯ ನಿಯಮದಂತೆ  ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ.ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್​ ಜಾರಿಗೆ ಆದೇಶಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 29ಕ್ಕೆ ನಿಗದಿಪಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್‌.ಡಿ.ರೇವಣ್ಣ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ತಲಾ 2 ಕೋಳಿ ಮತ್ತು 2 ಸಾವಿರ ರೂ. ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇಂತಹ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು

ಇದೇ ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿತ್ತು. ಆದ್ರೆ, ರೇವಣ್ಣ ಅವರಿಗೆ ಸಮನ್ಸ್ ಜಾರಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮಿಳಾ ನೇಸರ್ಗಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೆ ಮನವಿ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Mon, 30 October 23