AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ತಾಲೂಕಿನಲ್ಲೂ ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ

ಕರ್ನಾಟಕ ಹೈಕೋರ್ಟ್ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಆದೇಶಿಸಿದೆ. ರೈತರ ಪರವಾಗಿ ರೈತ ಸೇನೆ ಸಲ್ಲಿಸಲಾದ ಪಿಐಎಲ್​ ಅರ್ಜಿ ಆಧರಿಸಿ ಈ ಆದೇಶ ಹೊರಡಿಸಲಾಗಿದೆ. ಜಿಲ್ಲಾಧಿಕಾರಿಗಳು ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು ಮತ್ತು ಅಗತ್ಯವಿರುವಷ್ಟು ಖರೀದಿ ಕೇಂದ್ರಗಳನ್ನು ಸ್ಥಾಪಿಸುವಂತೆ ಸೂಚಿಸಲಾಗಿದೆ.

ಪ್ರತಿ ತಾಲೂಕಿನಲ್ಲೂ ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ
ಹೈಕೋರ್ಟ್
Ramesha M
| Edited By: |

Updated on:May 28, 2025 | 6:11 PM

Share

ಬೆಂಗಳೂರು, ಮೇ 28: ಪ್ರತಿ ತಾಲೂಕಿನಲ್ಲೂ ಖರೀದಿ ಕೇಂದ್ರ ಸ್ಥಾಪಿಸಲು ಕರ್ನಾಟಕ ಹೈಕೋರ್ಟ್ (High Court) ಬುಧವಾರ ಆದೇಶ ಹೊರಡಿಸಿದೆ. ರೈತ ಸೇನೆ ಸಲ್ಲಿಸಿದ್ದ ಪಿಐಎಲ್ ಅರ್ಜಿ (PIL application) ವಿಚಾರಣೆ ಮಾಡಿದ ಹೈಕೋಟ್​​, ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಆರಂಭಿಸಲು ಸಿಜೆ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೆ.ವಿ.ಅರವಿಂದ್​​ರಿದ್ದ ಪೀಠ ಆದೇಶ ನೀಡಿದೆ.

ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು. ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲೂಕಿನಲ್ಲೂ ಒಂದು ಖರೀದಿ ಕೇಂದ್ರ ಸ್ಥಾಪಿಸಬೇಕು. ನಿಗದಿತ ಅವಧಿಗಿಂತ ಕನಿಷ್ಟ 2 ತಿಂಗಳು ಖರೀದಿ ಕೇಂದ್ರದ ಅವಧಿ ವಿಸ್ತರಿಸಬೇಕು ಎಂದು ಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ: ರೈತರಿಗೆ ಖುಷಿ ಸುದ್ದಿ; 14 ಬೆಳೆಗಳ ಕನಿಷ್ಠ ಬೆಂಬಲ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ಇದನ್ನೂ ಓದಿ
Image
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
Image
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
Image
ಸೈಟ್ ರಿಜಿಸ್ಟ್ರೇಷನ್ ಆಗದೇ ಪರದಾಡುತ್ತಿದ್ದವರಿಗೆ ಗುಡ್ ನ್ಯೂಸ್
Image
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ

ಕರ್ನಾಟಕದಲ್ಲಿ ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಆರಂಭಿಸಲು ರೈತರು ಸಾಕಷ್ಟು ಭಾರೀ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೆಳೆಗಳು ಕಟಾವು ಮಾಡಿ ದಲ್ಲಾಳಿಗಳಿಗೆ ಮಾರಾಟ ಮಾಡಿದ ನಂತರ ಸರ್ಕಾರ ಖರೀದಿ ಕೇಂದ್ರಗಳನ್ನು ಆರಂಭಿಸುತ್ತದೆ. ಆದರೆ ಇದರಿಂದ ರೈತರಿಗೆ ನಷ್ಟ ಉಂಟಾಗುತ್ತದೆ.

ಈ ನಿಟ್ಟಿನಲ್ಲಿ ಬೆಳೆಗಳು ಕಟಾವಿಗೂ ಮುಂಚೆಯೇ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ರೈತರು ಆಗ್ರಹಿಸಿದ್ದರು. ಈ ವಿಚಾರವಾಗಿ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಹೀಗಾಗಿ ರೈತ ಸೇನೆ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಲಾಗಿತ್ತು.

14 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ಇನ್ನು ಖಾರಿಫ್​ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಮುಂದುವರಿಸಲು ನಿರ್ಧರಿಸಿದ್ದು, ರಾಗಿ, ಹತ್ತಿ, ಎಳ್ಳು ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಬಗ್ಗೆ ಕ್ಯಾಬಿನೆಟ್​ ಸಭೆ ಬಳಿಕ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್​ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:52 pm, Wed, 28 May 25

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ