AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ MLA​ಗೆ ಬಿಗ್ ಶಾಕ್: ಶಾಸಕ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್​ ಮಹತ್ವದ ಆದೇಶ ಹೊಡಸಿದೆ. ಅಲ್ಲದೇ 2023ರ ಮಾಲೂರು ಕ್ಷೇತ್ರದ ಮತ ಮರು ಎಣಿಕೆ ನಡೆಸುವಂತೆ ಹೈಕೋರ್ಟ್ ತೀರ್ಪು ನೀಡಿದೆ. ಬಳಿಕ ನಂಜೇಗೌಡ ಅವರಿಗೆ ಸುಪ್ರಿಂಕೋರ್ಟ್​​ ಗೆ ಹೋಗಲು ಅವಕಾಶ ನೀಡಿದೆ.

ಕಾಂಗ್ರೆಸ್ MLA​ಗೆ ಬಿಗ್ ಶಾಕ್: ಶಾಸಕ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್
Ky Nanjegowda
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on:Sep 16, 2025 | 6:04 PM

Share

ಬೆಂಗಳೂರು/ಕೋಲಾರ (ಸೆಪ್ಟೆಂಬರ್ 16): ಕಳೆದ ವಿಧಾನಸಭಾ ಚುನಾವಣೆಯಲ್ಲಿ  (karnataka Assembly Election 2023) ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆವೈ ನಂಜೇಗೌಡ (KY Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ಅಸಿಂಧುಗೊಳಿಸಿದೆ. ಮಾತ್ರವಲ್ಲದೇ, ಮತಗಳ ಮರು ಎಣಿಕೆ ಮಾಡುವಂತೆ ಸೂಚನೆ ನೀಡಿದೆ. ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ. ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಕ್ರಮಕ್ಕೆ ಸೂಚಿಸಿ ನಾಲ್ಕು ವಾರದಲ್ಲಿ ಮರು ಮತ ಎಣಿಕೆ ನಡೆಸಲು ಆದೇಶಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಂಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಅವರ ವಿರುದ್ಧ ಕೇವಲ 248 ಮತಗಳ ಅಂತರದಿಂದ ಗೆದ್ದಿದ್ದರು. ಹೀಗಾಗಿ ಮತ ಎಣಿಕೆ ವೇಳೆ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಆರೋಪಿಸಿದ್ದು, ನಂಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥಗೌಡ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಶಾಸಕ ಸ್ಥಾನ ಕಳೆದುಕೊಂಡಿದ್ದ ನಂಜೇಗೌಡಗೆ ತಾತ್ಕಾಲಿಕ ರಿಲೀಫ್, ಕೋರ್ಟ್ ಹೇಳಿದ್ದೇನು?

ವಿಧಾನಸಭೆ ಚುನಾವಣೆ ಮತ ಎಣಿಕೆ ವೇಳೆ ಲೋಪವಾಗಿದೆ. ಹೀಗಾಗಿ ಶಾಸಕರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್‌, 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿದೆ. ಈ ಮೂಲಕ ಕೆಎಂಎಪ್​ ಅಧ್ಯಕ್ಷರಾಗುವ ಕನಸು ಕಂಡಿದ್ದ ನಂಜೇಗೌಡರಿಗೆ ನಿರಾಸೆಯಾಗಿದೆ.

30 ದಿನಗಳ ತಾತ್ಕಾಲಿಕ ರಿಲೀಫ್

ಆಯ್ಕೆ ಅಸಿಂಧುಗೊಳಿಸಿ ಆದೇಶ ನೀಡುತ್ತಿದ್ದಂತೆಯೇ ಇದಕ್ಕೆ ತಡೆ ನೀಡುವಂತೆ ನಂಜೇಗೌಡರ ಪರ ವಕೀಲೆ ನಳಿನಾ ಮಾಯಗೌಡ ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಹೈಕೋರ್ಟ್ ಪೀಠ, 30 ದಿನಗಳವರೆಗೆ ತನ್ನದೇ ತೀರ್ಪಿಗೆ ಹೈಕೋರ್ಟ್ ತಡೆ ನೀಡಿದ್ದು, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆಗೆ ಅವಕಾಶ ನೀಡಿದೆ. ಹೀಗಾಗಿ ಇದೀಗ ನಂಜೇಗೌಡ ಅವರು 1 ತಿಂಗಳು ಒಳಗೆ  ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿ ಹೈಕೋರ್ಟ್ ಆದೇಶಕ್ಕೆ ತಡೆ ಬರಬೇಕು.  ಇಲ್ಲವಾದಲ್ಲಿ ಅವರು ಶಾಸಕ ಸ್ಥಾನ ಕಳೆದುಕೊಳ್ಳಲಿದ್ದಾರೆ.

ಕೋರ್ಟ್ ಆದೇಶದ ಬಗ್ಗೆ ನಂಜೇಗೌಡ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ಟಿವಿ9ಗೆ ನಂಜೇಗೌಡ ಪ್ರತಿಕ್ರಿಯಿಸಿದ್ದು, ನ್ಯಾಯಾಲಯ ಮರು ಮತಎಣಿಕೆಗೆ ಆದೇಶ ಮಾಡಿದ್ರೆ ಸ್ವಾಗತ ಮಾಡುತ್ತೇನೆ. ಆದ್ರೆ ಅಸಿಂಧುಗೊಳಿಸಿ ಮರು ಮತಎಣಿಕೆಗೆ ಆದೇಶ ಮಾಡಿದೆ. 30 ದಿನದೊಳಗೆ ಮರು ಮತ ಎಣಿಕೆಯಾಗಿ ಫಲಿತಾಂಶಕ್ಕೆ ಸೂಚಿಸಿದೆ. ಅಲ್ಲದೇ ಮೇಲ್ಮನವಿ ಸಲ್ಲಿಕೆ ಮಾಡುವುದಕ್ಕೂ ಅವಕಾಶ ಸಿಕ್ಕಿದೆ. ಹಾಗಾಗಿ ನಾನು ಸುಪ್ರೀಂಕೋರ್ಟ್ ಮೊರೆ ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದರು.

Published On - 3:29 pm, Tue, 16 September 25