ಬೆಂಗಳೂರು: ತುಮಕೂರು ಗ್ರಾಮಾಂತರ ಶಾಸಕ ಗೌರಿ ಶಂಕರ್(Gauri Shankar) ಆಯ್ಜೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್(Karnataka High Court) ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಗೌರಿಶಂಕರ್ ಆಯ್ಜೆ ಅಸಿಂಧು ಎಂದು ತೀರ್ಪು ನೀಡಿ ಇಂದು (ಮಾರ್ಚ್ 30) ಆದೇಶ ಹೊರಡಿಸಿದೆ. ಆದ್ರೆ, ಚುನಾವಣಾ ವೇಳಾಪಟ್ಟಿ ಪ್ರಕಟವಾಗಿರುವುದರಿಂದ ಆದೇಶಕ್ಕೆ ತಡೆ ಕೋರಿಕೆ ವಕೀಲ ಹೇಮಂತ್ ರಾಜ್ ಮನವಿ ಮಾಡಿದ್ದು, ಈ ಮನವಿಯನ್ನು ಹೈಕೋರ್ಟ್ ಪರಿಗಣಿಸಿ 30 ದಿನಗಳ ಕಾಲ ಆದೇಶಕ್ಕೆ ತಡೆ ನೀಡಿದೆ. ಈ ಮೂಲಕ ಶಾಸಕ ಗೌರಿಶಂಕರ್ ಬೀಸುವ ದೊಣ್ಣೆಯಿಂದ ಪಾರಾಗಿದ್ದಾರೆ. 30 ದಿನಗಳಲ್ಲಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಹೈಕೋರ್ಟ್ ತೀರ್ಪಿಗೆ ತಡೆ ಪಡೆದರೆ ಮಾತ್ರ ಗೌರಿಶಂಕರ್ ಸೇಫ್ . ಇಲ್ಲವಾದರೆ ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಅನರ್ಹಗೊಳ್ಳುತ್ತಾರೆ.
ಇದನ್ನೂ ಓದಿ: MP Renukacharya: ಆದಾಯಕ್ಕೂ ಮೀರಿದ ಆಸ್ತಿ ಪ್ರಕರಣ: ಶಾಸಕ ರೇಣುಕಾಚಾರ್ಯಗೆ ಸಂಕಷ್ಟ
ಜನಪ್ರತಿನಿಧಿ ಕಾಯ್ದೆ ಅಡಿ ಚುನಾವಣೆಯಲ್ಲಿ ಅಕ್ರಮ ಎಸಗಿ ಆಯ್ಕೆಗೊಂಡುವ ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಹೀಗಾಗಿ ಗೌರಿ ಶಂಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಿಂದ ಹೈಕೋರ್ಟ್ ಆದೇಶಕ್ಕೆ ತಡೆ ಸಿಗದಿದ್ದರೆ ಅವರು ಮುಂದಿನ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
ಚುನಾವಣೆಯಲ್ಲಿ ಅಕ್ರಮ ನಡೆಸುವ ಮೂಲಕ ಆಯ್ಕೆಯಾಗಿರುವ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಡಿ ಸಿ ಗೌರಿಶಂಕರ್ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ ಸುರೇಶ್ ಗೌಡ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುದೀರ್ಘವಾಗಿ ವಾದ–ಪ್ರತಿವಾದ ಆಲಿಸಿ, ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದ್ದ ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತ್ತು.
ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೌರಿಶಂಕರ್ ವ್ಯಾಪಕ ಚುನಾವಣಾ ಅಕ್ರಮ ಎಸಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮತದಾರರಿಗೆ ಮತಯಾಚನೆ ಪತ್ರದ ಜೊತೆ ಗುಂಪು ಆರೋಗ್ಯ ವಿಮಾ ಪಾಲಿಸಿಯ ಆಮಿಷವೊಡ್ಡಿ ಅವರಿಂದ ಮತಗಳನ್ನು ಪಡೆದು ಆರಿಸಿ ಬಂದಿದ್ದಾರೆ. ಹೀಗಾಗಿ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿಯ ಸುರೇಶ್‌ಗೌಡ ಮನವಿ ಮಾಡಿದ್ದರು.
ಈ ಅರ್ಜಿಯನ್ನು ಸುದೀರ್ಘವಾಗಿ ವಾದ–ಪ್ರತಿವಾದ ಆಲಿಸಿ, ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿರುವ ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತು. ಇದೀಗ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಶಾಸಕ ಗೌರಿ ಶಂಕರ್ ಆಯ್ಜೆ ಅಸಿಂಧುಗೊಳಿಸಿ ಆದೇಶ ಹೊರಡಿಸಿದ್ದಾರೆ.
Published On - 11:24 am, Thu, 30 March 23