ಕೆಆರ್​​​​ಎಸ್ ಅಣೆಕಟ್ಟೆ ಸುತ್ತಮುತ್ತ ಗಣಿಗಾರಿಕೆ ನಿರ್ಬಂಧ: ಕರ್ನಾಟಕ ಹೈಕೋರ್ಟ್ ಆದೇಶ

ಕೆಆರ್​​​​ಎಸ್ ಅಣೆಕಟ್ಟೆಗೆ ತೊಂದರೆಯಾದರೆ ಆಗುವ ಅನಾಹುತಗಳ ಅರಿವಿದೆಯೇ? ಅಣೆಕಟ್ಟೆಗೆ ತೊಂದರೆಯಾದರೆ ಇಡೀ ರಾಜ್ಯಕ್ಕೇ ಗಂಭೀರ ಆಪತ್ತು ಬರಲಿದೆ. ಹೀಗಾಗಿ ಕೆಆರ್​​​​ಎಸ್ ಅಣೆಕಟ್ಟೆ ಬಳಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರಿದ್ದ ನ್ಯಾಯಪೀಠ ಹೇಳಿದೆ.

ಕೆಆರ್​​​​ಎಸ್ ಅಣೆಕಟ್ಟೆ ಸುತ್ತಮುತ್ತ ಗಣಿಗಾರಿಕೆ ನಿರ್ಬಂಧ: ಕರ್ನಾಟಕ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್ & ಕೆಆರ್​ಎಸ್ ಡ್ಯಾಂ
Follow us
Ramesha M
| Updated By: Ganapathi Sharma

Updated on:Jan 08, 2024 | 1:45 PM

ಬೆಂಗಳೂರು, ಜನವರಿ 8: ಕೆಆರ್​​​​ಎಸ್ ಅಣೆಕಟ್ಟೆಯ (KRS Dam) ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶಿಸಿದೆ. ಕೆಆರ್​​​​ಎಸ್ ಅಣೆಕಟ್ಟೆಯ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿದೆ.

ಕೆಆರ್​​​​ಎಸ್ ಡ್ಯಾಂ ಬಳಿ ಹಲವು ಬಾರಿ ದೊಡ್ಡ ಶಬ್ದ ಕೇಳಿಬಂದಿದೆ. ಕೃಷ್ಣರಾಜಸಾಗರ ಅಣೆಕಟ್ಟು ಈಗಾಗಲೇ ಸಂಕಷ್ಟದಲ್ಲಿದೆ. ಅಣೆಕಟ್ಟೆಯ ಬಳಿ ಗಣಿಗಾರಿಕೆ ನಡೆಸಿದರೆ ಗಂಭೀರ ಪರಿಣಾಮವಾಗಲಿದೆ. ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಐತಿಹಾಸಿಕ ಮೌಲ್ಯವಿದೆ. ಮೈಸೂರು ಮಹಾರಾಜರು, ಸರ್ ಎಂ. ವಿಶ್ವೇಶ್ವರಯ್ಯರ ಕೊಡುಗೆ ಬಹಳಷ್ಟಿದೆ ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಏರ್ ಪೊಲ್ಯೂಷನ್ ಡಿಸಾಡರ್; ವಾಯು ಮಾಲಿನ್ಯದಿಂದ ಜೀವಕ್ಕೆ ಆಪತ್ತು

ಕೆಆರ್​​​​ಎಸ್ ಡ್ಯಾಂ ನಿರ್ಮಾಣಕ್ಕೆ ಜನರು ರಕ್ತ, ಬೆವರು ಹರಿಸಿದ್ದಾರೆ. ತೀ.ತಾ. ಶರ್ಮರ ಸರ್.ಎಂ. ವಿಶ್ವೇಶ್ವರಯ್ಯ ಕುರಿತ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖವಿದೆ. ಕೆಆರ್​​​​ಎಸ್​ಗೆ ಧಕ್ಕೆಯಾಗುವ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ. ಮೂರು ರಾಜ್ಯಗಳು ಕಾವೇರಿ ನೀರಿಗಾಗಿ ಹೋರಾಡುತ್ತಿವೆ. ಆದರೆ ಕೆಆರ್​​​​ಎಸ್ ಅಣೆಕಟ್ಟೆ ಸಂರಕ್ಷಣೆಗೆ ಪ್ರಯತ್ನಿಸುತ್ತಿಲ್ಲ. ಅಣೆಕಟ್ಟೆಗೆ ತೊಂದರೆಯಾದರೆ ಆಗುವ ಅನಾಹುತಗಳ ಅರಿವಿದೆಯೇ? ಅಣೆಕಟ್ಟೆಗೆ ತೊಂದರೆಯಾದರೆ ಇಡೀ ರಾಜ್ಯಕ್ಕೇ ಗಂಭೀರ ಆಪತ್ತು ಬರಲಿದೆ. ಹೀಗಾಗಿ ಕೆಆರ್​​​​ಎಸ್ ಅಣೆಕಟ್ಟೆ ಬಳಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಸಂಸದೆ ಸುಮಲತಾ ಸ್ವಾಗತ

ಕೆಆರ್​ಎಸ್ ಅಣೆಕಟ್ಟೆಯ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿರುವುದನ್ನು ಮಂಡ್ಯ ಸಂಸದೆ ಸುಮಲತಾ ಸ್ವಾಗತಿಸಿದ್ದಾರೆ. ಕೆಆರ್​ಎಸ್ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಬೇಕೆಂಬುದು ನನ್ನ ಹೋರಾಟ. ಹೈಕೋರ್ಟ್ ಆದೇಶದಿಂದ ಇಂದು ನನ್ನ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ. ನಾವೆಲ್ಲ ಕೆಆರ್​ಎಸ್ ಉಳಿಸಿಕೊಳ್ಳಬೇಕಿದೆ. ಇದೀಗ ಹೈ ಕೋರ್ಟ್ ಗಣಿಗಾರಿಕೆಗೆ ನಿಷೇಧಿಸಿ ಆದೇಶ ಮಾಡಿದೆ. ಮಹತ್ವದ ಆದೇಶ‌ ನೀಡಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ಪಿ.ಬಿ.ವರಾಳೆ, ಕೃಷ್ಣ ಎಸ್.ದೀಕ್ಷಿತ್ ರಿಗೆ ಧನ್ಯವಾದಗಳು ಎಂದು ಸುಮಲತಾ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:41 pm, Mon, 8 January 24

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ