ಸಿಟಿ ರವಿಯವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ

ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿರುವ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದ್ದು, ಇದೀಗ ಬೆಳಗಾವಿ ಕೋರ್ಟ್​ ಆದೇಶದ ಮೇರೆಗೆ ಸಿಟಿ ರವಿಯವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರುಪಡಿಸಲು ಕರೆದುಕೊಂಡು ಬರುತ್ತಿದ್ದಾರೆ. ಆದ್ರೆ, ಇತ್ತ ಹೈಕೋರ್ಟ್​ ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

ಸಿಟಿ ರವಿಯವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ
ಸಿಟಿ ರವಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 20, 2024 | 6:02 PM

ಬೆಂಗಳೂರು, (ಡಿಸೆಂಬರ್ 20):  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧದ ಹೇಳಿಕೆ ವಿಚಾರದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿಯನ್ನ ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಸಿಟಿ ರವಿ ವಿರುದ್ಧ ಎಫ್​ಐಆರ್ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ, ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿ.  ಜಾಮೀನಿಗಾಗಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಾಳೆ(ಡಿಸೆಂಬರ್ 21) ಮುಂಡೂಡಿತ್ತು. ಆದ್ರೆ, ಇದೀಗ ಹೈಕೋರ್ಟ್​ನಲ್ಲಿ ಸಿಟಿ ರವಿಗೆ ಬಿಗ್ ರಿಲೀಫ್ ಸಿಕ್ಕಿದೆ.

ವಾದ ಪ್ರತಿವಾದ ಹೇಗಿತ್ತು?

ಸಿಟಿ ರವಿ ಪರ ವಕೀಲ ಸಂದೇಶ್ ಚೌಟ ,ಆರೋಪಿ, ಫಿರ್ಯಾದಿ ಇಬ್ಬರೂ ಶಾಸಕರು. ವಿಧಾನ ಪರಿಷತ್ ನಲ್ಲಿ ಈ ರೀತಿಯಾಗಿರುವುದು ದುರದೃಷ್ಟಕರ ಎಂದು ಕೋರ್ಟ್ ಅಸಮಾಧಾನಗೊಂಡಿದೆ. ಆರೋಪಗಳಿಗೆ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಿದೆ. 41 ಎ ಅಡಿ ನೋಟಿಸ್ ನೀಡಬೇಕಿತ್ತು. ಪೊಲೀಸರು ಬಂಧನಕ್ಕೆ ಕಾರಣಗಳನ್ನು ನೀಡಬೇಕಿತ್ತು. ಆದರೆ ಇದನ್ನು ನೀಡಿರುವ ಬಗ್ಗೆ ದಾಖಲೆಗಳನ್ನು ಒದಗಿಸಿಲ್ಲ. ಪೊಲೀಸರು ಹಲ್ಲೆ ನಡೆಸಿದ್ದರಿಂದ ಗಾಯಗಳಾಗಿವೆ ಎಂದು ಸಿಟಿ ರವಿ ವಕೀಲರು ವಾದಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ: ಸಿಟಿ ರವಿ ಪ್ರಕರಣ ಉಲ್ಲೇಖಿಸಿ ಕುಮಾರಸ್ವಾಮಿ ಪ್ರಶ್ನೆ

ಚಿಕಿತ್ಸೆಯ ವಿವರವನ್ನು ವೈದ್ಯಾಧಿಕಾರಿ ಸರಿಯಾಗಿ ನಮೂದಿಸಿಲ್ಲ. ಆದರೆ ಸ್ಕ್ಯಾನಿಂಗ್ ಮಾಡಿಸಿರುವುದಾಗಿ ವರದಿಯಿದೆ. ಏನನ್ನೂ ರೆಕಾರ್ಡ್ ಮಾಡಿಲ್ಲವೆಂದು ಸಭಾಪತಿ ಹೇಳಿಕೆ ನೀಡಿದ್ದಾರೆ ಆರೋಪಿ ಸಿಟಿ ರವಿಯನ್ನು ಬಂಧಿಸಲು ಹಲ್ಲೆ ನಡೆಸುವ ಅಗತ್ಯವಿರಲಿಲ್ಲ. ಕಾನೂನು ಕ್ರಮ ಪಾಲಿಸಿ ಕ್ರಮ ಕೈಗೊಳ್ಳಬಹುದಿತ್ತು. ವಿಧಾನಪರಿಷತ್ ಪ್ರತಿಪಕ್ಷದ ಶಾಸಕರಾಗಿದ್ದಾರೆ. ಹೀಗಾಗಿ ಪರಾರಿಯಾಗುವ ಸಾಧ್ಯತೆ ಇಲ್ಲ ಎಂದಿದ್ದಾರೆ.

ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

ಸದ್ಯ ಸಿ.ಟಿ ರವಿ ಅವರಿಗೆ ಮಧ್ಯಂತರ ರಿಲೀಫ್​ ಸಿಕ್ಕಿದೆ. ಆದ್ರೆ, ಎಫ್​ಐಆರ್​ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಂದೆ ನಡೆಯಲಿದೆ. ಇಬ್ಬರೂ ಜನಪ್ರತಿನಿಧಿಗಳಾದ ಸಿ.ಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್​ ನಡೆಗೆ ಹೈಕೋರ್ಟ್​ ಬೇಸರ ವ್ಯಕ್ತಪಡಿಸಿದೆ.

ಇನ್ನು ಸಿಟಿ ರವಿ ಬಿಡುಗಡೆಗೆ ಹೈಕೋರ್ಟ್​ ಆದೇಶ ನೀಡಿದ ಬೆನ್ನಲ್ಲೇ ಇತ್ತ ಚಿಕ್ಕಮಗಳೂರಿನ ಅವರ ನಿವಾಸದ ಬಳಿ ಸಂಭ್ರಮ ಮನೆ ಮಾಡಿದೆ. ಬಿಜೆಪಿ ಕಾರ್ಯಕರ್ತರು, ಮುಖಂಡರು ಸಿ.ಟಿ.ರವಿ ಮನೆ ಮುಂದೆ ಸಂಭ್ರಮಿಸಿದರು.

ತ್ಯಕ್ಕೆ ಜಯ ಸಿಕ್ಕಿದೆ ಎಂದ ಸಿಟಿ ರವಿ

ಬಿಡುಗಡೆ ಆದೇಶದ ಬೆನ್ನಲ್ಲೇ ಟಿವಿ9ಗೆ ಸಿಟಿ ರವಿ ಪ್ರತಿಕ್ರಿಯಿಸಿದ್ದು, ಹೈಕೋರ್ಟ್​ ಆದೇಶದಿಂದ ಸತ್ಯಕ್ಕೆ ಜಯ ಸಿಕ್ಕಿದೆ. ರಾಜಕೀಯ, ಸೈದ್ಧಾಂತಿಕವಾಗಿ ಟೀಕೆ ಮಾಡುತ್ತೇನೆ. ವೈಯಕ್ತಿಕವಾಗಿ ನಾನು ಎಂದೂ ಟೀಕೆ ಮಾಡಲ್ಲ. ನನ್ನ ಬಗ್ಗೆ ಚಿಕ್ಕಮಗಳೂರಿನಲ್ಲಿ ಕೇಳಿ ತಿಳದುಕೊಳ್ಳಿ. ಡಿ.ಕೆ.ಶಿವಕುಮಾರ್​ ಬಗ್ಗೆ ರಾಮನಗರದಲ್ಲಿ ಕೇಳಿ ತಿಳಿದುಕೊಳ್ಳಿ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಬಗ್ಗೆ ಕೇಳಿ ತಿಳಿದುಕೊಳ್ಳಿ. ನಾನು ದೂರು ಕೊಟ್ಟರೂ ಎಫ್​ಐಆರ್​ ದಾಖಲಿಸಿಕೊಳ್ಳುತ್ತಿಲ್ಲ. ನನ್ನ ಮೇಲೆ ಸಾಕ್ಷಿ ಇಲ್ಲದಿದ್ರೂ ಎಫ್​ಐಆರ್​ ದಾಖಲಿಸುತ್ತಾರೆ. ನೇರವಾಗಿ ನಾನು ಬೆಂಗಳೂರಿಗೆ ಬರುತ್ತೇನೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:27 pm, Fri, 20 December 24

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಟಿ ರವಿ ಪ್ರಕರಣ ವಿಚಾರಣೆ ಆರಂಭ
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಟಿ ರವಿ ಪ್ರಕರಣ ವಿಚಾರಣೆ ಆರಂಭ
ಬಸ್​ನೊಳಗೆ ಕಿರುಕುಳ ನೀಡಿದ ಕುಡುಕನಿಗೆ 26 ಬಾರಿ ಕೆನ್ನೆಗೆ ಬಾರಿಸಿದ ಮಹಿಳೆ
ಬಸ್​ನೊಳಗೆ ಕಿರುಕುಳ ನೀಡಿದ ಕುಡುಕನಿಗೆ 26 ಬಾರಿ ಕೆನ್ನೆಗೆ ಬಾರಿಸಿದ ಮಹಿಳೆ
ಸ್ಪರ್ಧಿಗಳಿಗೆ ಇನ್ನಷ್ಟು ಕಷ್ಟ ಕೊಟ್ಟ ಬಿಗ್ ಬಾಸ್; ಭವ್ಯಾ, ಐಶ್ವರ್ಯಾ ಪರದಾಟ
ಸ್ಪರ್ಧಿಗಳಿಗೆ ಇನ್ನಷ್ಟು ಕಷ್ಟ ಕೊಟ್ಟ ಬಿಗ್ ಬಾಸ್; ಭವ್ಯಾ, ಐಶ್ವರ್ಯಾ ಪರದಾಟ
ಮಾಜಿ ಗೃಹ ಸಚಿವನಾದ ತನ್ನನ್ನು ಠಾಣೆಯೊಳಗೆ ಬರಗೊಡಲಿಲ್ಲ: ಅಶೋಕ
ಮಾಜಿ ಗೃಹ ಸಚಿವನಾದ ತನ್ನನ್ನು ಠಾಣೆಯೊಳಗೆ ಬರಗೊಡಲಿಲ್ಲ: ಅಶೋಕ
ನೀರಾಹಾರವಿಲ್ಲದೆ ರವಿ ದೈಹಿಕ ಮತ್ತು ಮಾನಸಿಕವಾಗಿ ವಿಪರೀತ ಬಳಲಿದ್ದಾರೆ: ವಕೀಲ
ನೀರಾಹಾರವಿಲ್ಲದೆ ರವಿ ದೈಹಿಕ ಮತ್ತು ಮಾನಸಿಕವಾಗಿ ವಿಪರೀತ ಬಳಲಿದ್ದಾರೆ: ವಕೀಲ
ನಾವು ಠಾಣೆಗೆ ಹೋಗಿದ್ದನ್ನು ಪ್ರಶ್ನಿಸಲು ಶಿವಕುಮಾರ್ ಯಾರು? ಅಶೋಕ
ನಾವು ಠಾಣೆಗೆ ಹೋಗಿದ್ದನ್ನು ಪ್ರಶ್ನಿಸಲು ಶಿವಕುಮಾರ್ ಯಾರು? ಅಶೋಕ
ರವಿ ತಲೆಗೆ ಗಾಯ ಯಾಕೆ, ಹಲ್ಲೆ ಮಾಡಿದ್ಯಾರು? ಪರಮೇಶ್ವರ್ ಹೇಳಿದ್ದೇನು ನೋಡಿ
ರವಿ ತಲೆಗೆ ಗಾಯ ಯಾಕೆ, ಹಲ್ಲೆ ಮಾಡಿದ್ಯಾರು? ಪರಮೇಶ್ವರ್ ಹೇಳಿದ್ದೇನು ನೋಡಿ
ರವಿಯವರನ್ನು ಇವತ್ತು ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ: ಪರಮೇಶ್ವರ್
ರವಿಯವರನ್ನು ಇವತ್ತು ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ: ಪರಮೇಶ್ವರ್
ಅಶ್ಲೀಲ ಪದ ಬಳಕೆ: ಸದನದಲ್ಲಿ ನಡೆದಿದ್ದೇನು? ಹೆಬ್ಬಾಳ್ಕರ್​ ಹೇಳಿದ್ದಿಷ್ಟು
ಅಶ್ಲೀಲ ಪದ ಬಳಕೆ: ಸದನದಲ್ಲಿ ನಡೆದಿದ್ದೇನು? ಹೆಬ್ಬಾಳ್ಕರ್​ ಹೇಳಿದ್ದಿಷ್ಟು
ಚಿಕ್ಕಮಗಳೂರಲ್ಲಿ ಕೊಳಕು ಬಾಯಿ ರವಿ ಬಿಟ್ಟರೆ ಬೇರೆಲ್ಲ ಸಂಸ್ಕಾರವಂತರು:ಡಿಕೆಶಿ
ಚಿಕ್ಕಮಗಳೂರಲ್ಲಿ ಕೊಳಕು ಬಾಯಿ ರವಿ ಬಿಟ್ಟರೆ ಬೇರೆಲ್ಲ ಸಂಸ್ಕಾರವಂತರು:ಡಿಕೆಶಿ