Sign In

By signing in or creating an account, you agree with Associated Broadcasting Company's Terms & Conditions and Privacy Policy.

Bike Taxi: ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

ಬೈಕ್ ಟ್ಯಾಕ್ಸಿ: ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. 6 ವಾರಗಳಲ್ಲಿ ಬೈಕ್​ ಟ್ಯಾಕ್ಸ್​​ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲ್ಲದೇ ಈ ಬಗ್ಗೆ ಸರ್ಕಾರಕ್ಕೆ 3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದೆ.

Bike Taxi: ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ
Bike Taxi
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on: Apr 02, 2025 | 7:01 PM

ಬೆಂಗಳೂರು, (ಏಪ್ರಿಲ್ 02): ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ (bike taxi) ಕಾರ್ಯಾಚರಣೆಯನ್ನು ನಿಲ್ಲಿಸಲು ಕರ್ನಾಟಕ ಹೈಕೋರ್ಟ್ (Karnataka high Court) ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಹೀಗಾಗಿ ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿ. ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದ್ದು, 3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರು ಇಂದು (ಏಪ್ರಿಲ್ 02) ಈ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮಹಿಳಾ ಪ್ರಯಾಣಿಕರಿಗಾಗಿ ಬಂದಿದೆ ಉಬರ್ ಮಹಿಳಾ ಬೈಕ್ ಟ್ಯಾಕ್ಸಿ

1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆರು ವಾರಗಳ ಒಳಗೆ ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಲು ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ
Image
ಮುಡಾ ಹಗರಣ: ಇಡಿ ತನಿಖೆಗೆ ಹೈಕೋರ್ಟ್​ ಅನುಮತಿ, ಸಿಎಂ ಸೇರಿ ಹಲವರಿಗೆ ಢವಢವ!
Image
ಬೆಂಗಳೂರು ಬುಕಿಂಗ್ ಮಾಫಿಯಾ: ಟಿಪ್ಸ್ ಹೆಸರಲ್ಲಿ ದುಪ್ಪಟ್ಟು ಹಣ ವಸೂಲಿ
Image
ಸಿಹಿ ಸುದ್ದಿ ನೀಡಿದ ಅಮಿತ್​​ ಶಾ: ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ
Image
ಬೆಂಗಳೂರು: ಮಹಿಳಾ ಪ್ರಯಾಣಿಕರಿಗಾಗಿ ಬಂದಿದೆ ಉಬರ್ ಮಹಿಳಾ ಬೈಕ್ ಟ್ಯಾಕ್ಸಿ

ಸೂಕ್ತ ಸರ್ಕಾರಿ ನಿಯಮಗಳು ಜಾರಿಗೆ ಬರುವವರೆಗೆ ಬೈಕ್ ಟ್ಯಾಕ್ಸಿಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅಥವಾ ಅಂತಹ ಸೇವೆಗಳಿಗೆ ಒಪ್ಪಂದ ಸಾಗಣೆ ಪರವಾನಗಿಗಳನ್ನು ನೀಡಲು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್  ಸ್ಪಷ್ಟವಾಗಿ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ